ಬಸವಜನ್ಮ ಸ್ಥಳ ಅಭಿವೃದ್ಧಿಗೆ ಸಂಸತ್ತಿನಲ್ಲಿ ದನಿ ಎತ್ತುವೆ

KannadaprabhaNewsNetwork |  
Published : Aug 31, 2024, 01:33 AM IST
೩೦ಬಿಎಸ್ವಿ೦೩- ಬಸವನಬಾಗೇವಾಡಿಯ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಇದೇ ಪ್ರಥಮ ಬಾರಿಗೆ ಆಗಮಿಸಿದ್ದ ಬಳ್ಳಾರಿ ಸಂಸದ ಸಾಗರ ಖಂಡ್ರೆ ಅವರನ್ನು ಬ್ಲಾಕ್ ಕಾಂಗ್ರೆಸ್‌ದಿಂದ ಸುರೇಶ ಹಾರಿವಾಳ ಇತರರು ಸನ್ಮಾನಿಸಿದರು. | Kannada Prabha

ಸಾರಾಂಶ

ಬಸವಕಲ್ಯಾಣ ಅನುಭವ ಮಂಟಪಕ್ಕೆ ಅನುದಾನ ನೀಡಿದಂತೆ ಬಸವ ಜನ್ಮಸ್ಥಳ ಬ.ಬಾಗೇವಾಡಿಯ ಅಭಿವೃದ್ಧಿಗಾಗಿ ಕೇಂದ್ರದಿಂದ ಅನುದಾನ ನೀಡುವಂತೆ ಸಂಸತ್ತಿನಲ್ಲಿ ಧ್ವನಿ ಎತ್ತುವೆ ಎಂದು ಬೀದರ್‌ ಸಂಸದ ಸಾಗರ ಈಶ್ವರ ಖಂಡ್ರೆ ಹೇಳಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಬಸವಕಲ್ಯಾಣ ಅನುಭವ ಮಂಟಪಕ್ಕೆ ಅನುದಾನ ನೀಡಿದಂತೆ ಬಸವ ಜನ್ಮಸ್ಥಳ ಬ.ಬಾಗೇವಾಡಿಯ ಅಭಿವೃದ್ಧಿಗಾಗಿ ಕೇಂದ್ರದಿಂದ ಅನುದಾನ ನೀಡುವಂತೆ ಸಂಸತ್ತಿನಲ್ಲಿ ಧ್ವನಿ ಎತ್ತುವೆ ಎಂದು ಬೀದರ್‌ ಸಂಸದ ಸಾಗರ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣಕ್ಕೆ ಶುಕ್ರವಾರ ಪ್ರಥಮ ಬಾರಿಗೆ ಆಗಮಿಸಿದ ಅವರು ಮೂಲನಂದೀಶ್ವರ(ಬಸವೇಶ್ವರ) ದೇವಸ್ಥಾನ, ಬಸವಜನ್ಮ ಸ್ಮಾರಕಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ಷೇತ್ರದ ಶಾಸಕ, ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ಸಮಾಲೋಚನೆ ಮಾಡಿ ಇಲ್ಲಿ ಕೈಗೊಳ್ಳಬೇಕಾದ ಕಾರ್ಯಗಳಿಗೆ ಬೇಕಾದ ಅನುದಾನ ಕುರಿತು ಚರ್ಚಿಸಿ ಸಂಸತ್ತಿನಲ್ಲಿ ಇದರ ಬಗ್ಗೆ ಚರ್ಚಿಸುತ್ತೇನೆ. ಈ ಭಾಗದ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನ ಸಿಗುವಂತೆ ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ತೆಲಗಿಯ ಬ.ಬಾಗೇವಾಡಿ ರೋಡ್ ರೈಲು ನಿಲ್ದಾಣದಲ್ಲಿ ಎಲ್ಲ ರೈಲು ನಿಲುಗಡೆಯಾಗುವಂತೆ ಕೇಂದ್ರದ ರೈಲು ಸಚಿವರ ಗಮನಕ್ಕೆ ತಂದು ಇದರ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.ಬೀದರ್‌ ಲೋಕಸಭಾ ಮತಕ್ಷೇತ್ರದ ಜನರು ನನ್ನ ಮೇಲೆ ವಿಶ್ವಾಸವಿಟ್ಟು ಸಂಸತ್ತಿಗೆ ಆಯ್ಕೆ ಮಾಡಿದ್ದಾರೆ. ಕ್ಷೇತ್ರದ ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸಿ ಕಾರ್ಯನಿರ್ವಹಿಸುತ್ತೇನೆ. ಯುವಕರ ಉದ್ಯೋಗಕ್ಕೆ ಆದ್ಯತೆ ನೀಡಲಾಗುವುದು. ನನ್ನ ಕ್ಷೇತ್ರದಲ್ಲಿ ಪದವಿ ಮುಗಿಸಿದ ಯುವಕರಿಗೆ ಕೌಶಲ್ಯ ತರಬೇತಿಯಂತಹ ಕಾರ್ಯಕ್ರಮ ರೂಪಿಸಿ ಅವರಿಗೆ ಉದ್ಯೋಗ ಸಿಗುವಂತೆ ಮಾಡಲಾಗುವುದು. ಜನರು ಕಷ್ಟ ಅಂತಾ ಬಂದಾಗ ಅವರಿಗೆ ಸ್ಪಂದಿಸಿ ಕಾರ್ಯ ಮಾಡುವುದು ಜನಪ್ರತಿನಿಧಿಗಳ ಕರ್ತವ್ಯ. ಅವರನ್ನು ಗೌರವಯುತವಾಗಿ ನೋಡಿಕೊಳ್ಳಬೇಕು. ನಮ್ಮ ಭಾಗದಲ್ಲಿ ರೈತರಿಗೆ ಪ್ರಧಾನಿ ಫಸಲ್‌ ವಿಮಾ ಯೋಜನೆಯಡಿ ವಿಮಾ ಹಣ ಜಮಾ ಆಗಿಲ್ಲ. ಇದರ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ವಿಮೆ ಹಣ ಸರಿಯಾಗಿ ಜಮಾ ಆಗುವಂತೆ ಮಾಡಲಾಗಿದೆ ಎಂದರು.ಈ ಸಂದರ್ಭದಲ್ಲಿ ನಂದಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಸತ್ಯಜೀತ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಪ್ರಧಾನ ಕಾರ್ಯದರ್ಶಿ ರವಿ ರಾಠೋಡ, ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಬಸವರಾಜ ಹಾರಿವಾಳ, ಬಸವರಾಜ ರಾಯಗೊಂಡ, ಸಂಗಮೇಶ ಓಲೇಕಾರ, ಜಟ್ಟಿಂಗರಾಯ ಮಾಲಗಾರ, ಪಿಂಟುಗೌಡ ಪಾಟೀಲ, ಮಹಾಂತೇಶ ಸಾಸಾಬಾಳ, ಪ್ರವೀಣ ಪೂಜಾರಿ, ಪುಟ್ಟುಗೌಡ ಪಾಟೀಲ, ಬಸವರಾಜ ನಾಯ್ಕೋಡಿ, ಮುತ್ತು ಡಂಬಳ, ಶಿವನಗೌಡ ಪಾಟೀಲ, ಎಂ.ಬಿ.ತೋಟದ ಇತರರು ಇದ್ದರು.

PREV

Recommended Stories

ಗುತ್ತಲದಲ್ಲಿ ಸಂಭ್ರಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಹಳಿಯಾಳದ ಮೆಕ್ಕೆಜೋಳದಲ್ಲಿ ಕೀಟನಾಶಕಗಳ ಪ್ರಮಾಣ ಅಧಿಕ