ಚೇತನ್‌ ಮನೆಗೆ ರಾಜ್‌ ಅಭಿಮಾನಿಗಳ ಮುತ್ತಿಗೆ

KannadaprabhaNewsNetwork |  
Published : Apr 26, 2026, 02:45 AM ISTUpdated : Apr 26, 2026, 12:49 PM IST
Chetan kumar Chethan kumar

ಸಾರಾಂಶ

ವರನಟ ಡಾ.ರಾಜ್ ಕುಮಾರ್ ಸಮಾಧಿ ಜಾಗ ಕುರಿತು ಪ್ರಶ್ನೆ ಮಾಡಿದ್ದ ನಟ ಚೇತನ್‌ ಅಹಿಂಸಾಗೆ ರಾಜ್‌ಕುಮಾರ್‌ ಅಭಿಮಾನಿಗಳು ಬಿಸಿ ಮುಟ್ಟಿಸಿದ ಬೆನ್ನಲ್ಲೇ ಅವರು ತಮ್ಮ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ.

 ಬೆಂಗಳೂರು : ವರನಟ ಡಾ.ರಾಜ್ ಕುಮಾರ್ ಸಮಾಧಿ ಜಾಗ ಕುರಿತು ಪ್ರಶ್ನೆ ಮಾಡಿದ್ದ ನಟ ಚೇತನ್‌ ಅಹಿಂಸಾಗೆ ರಾಜ್‌ಕುಮಾರ್‌ ಅಭಿಮಾನಿಗಳು ಬಿಸಿ ಮುಟ್ಟಿಸಿದ ಬೆನ್ನಲ್ಲೇ ಅವರು ತಮ್ಮ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ.

ರಾಜ್‌ಕುಮಾರ್‌ ಸಮಾಧಿಗೆ ನೀಡಿದ 2.5 ಎಕರೆ ಜಾಗವನ್ನು ಸಾರ್ವಜನಿಕರ ಉಪಯೋಗಕ್ಕೆ ತಕ್ಕಂತೆ ಹಂಚಬೇಕು, ಮತಗಳ ಲಾಭದ ಅವಕಾಶವಾದಿ ಉದ್ದೇಶದಿಂದಲ್ಲ ಎಂದು ನಟ ಚೇತನ್ ಫೋಸ್ಟ್‌ ಮಾಡಿದ್ದರು. ಇದರಿಂದ ಕೆರಳಿದ ಡಾ.ರಾಜ್ ಅಭಿಮಾನಿಗಳು, ಕನ್ನಡ ಹೋರಾಟಗಾರರು ಶನಿವಾರ ಶೇಷಾದ್ರಿಪುರದಲ್ಲಿರುವ ನಟ ಚೇತನ್ ಮನೆಗೆ ಮುತ್ತಿಗೆ ಹಾಕಿದರು.

ಚೇತನ್ ಮನೆಗೆ ಆಗಮಿಸಿದ ಸಾ.ರಾ.ಗೋವಿಂದು ಸೇರಿ ಹಲವು ಹೋರಾಟಗಾರರು ತೀವ್ರ ಪ್ರತಿಭಟನೆ ನಡೆಸಿದರು. ಚೇತನ್‌ ಹೊರ ಬಂದು ಸಾರ್ವಜನಿಕವಾಗಿ ಕ್ಷಮಾಪಣೆ ಕೇಳಬೇಕು ಅಂತ ಆಗ್ರಹಿಸಿದರು.ಬಹಿರಂಗವಾಗಿ ಕ್ಷಮೆಯಾಚನೆ:

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಮನೆಯಿಂದ ಹೊರಬಂದ ನಟ ಚೇತನ್ ಸಮರ್ಥನೆ ನೀಡುವ ಪ್ರಯತ್ನ ಮಾಡಿದರು. ಹೀಗಾಗಿ ಸಾ.ರಾ.ಗೋವಿಂದ್ ಹಾಗೂ ನಟ ಚೇತನ್ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಹೋರಾಟಗಾರರು ಮನೆಗೆ ನುಗ್ಗಲು ಯತ್ನಿಸಿದರು. ಹೋರಾಟಗಾರರ ಒತ್ತಾಯಕ್ಕೆ ಮಣಿದ ಚೇತನ್‌ ಅಂತಿಮವಾಗಿ ಸಾರ್ವಜನಿಕವಾಗಿ ಕ್ಷಮೆ ಕೋರಿದ್ದು, ಬಳಿಕ ಸಾಮಾಜಿಕ ಕಾಳಜಿಯಿಂದ ಹಾಗೆ ಹೇಳಿದೆ ಎಂದು ತಿಳಿಸಿದರು. 

ನಿರ್ಮಾಪಕರ ಸಂಘ ಖಂಡನೆ:

ಡಾ.ರಾಜ್‌ ಕುಮಾರ್‌ ಅವರ ಸಮಾಧಿ ಜಾಗ ಕುರಿತು ಅಕ್ಷೇಪಾರ್ಹವಾಗಿ ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟ್‌ ಮಾಡಿದ್ದ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್‌ ಅಹಿಂಸ ಅವರ ನಡೆಯನ್ನು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ ಖಂಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಸಂಘದ ಅಧ್ಯಕ್ಷ ಎಂ.ಜಿ.ರಾಮಮೂರ್ತಿ, ‘ ಏ.24ರಂದು ಕರ್ನಾಟಕದ ಮೆಚ್ಚಿನ ನಾಯಕ ಡಾ.ರಾಜ್‌ಕುಮಾರ್ ಅವರ ಹುಟ್ಟುಹಬ್ಬ. ಅದೇ ದಿನ ನಟ ಚೇತನ್‌ ಅಹಿಂಸ ಅವರು ಡಾ.ರಾಜ್‌ಕುಮಾರ್ ಅವರ ಸಮಾಧಿಗೆ ಸರ್ಕಾರ ಜಾಗ ನೀಡಿರುವ ಬಗ್ಗೆ ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಆ ಮೂಲಕ ವರನಟ ರಾಜ್‌ಕುಮಾರ್ ಅವರಿಗೆ ಚೇತನ್ ಅಹಿಂಸ ಅವರು ಅಗೌರವ ತೋರಿದ್ದಾರೆ. ಅವರ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇವೆ’ ಎಂದಿದ್ದಾರೆ. 

ಸಮಾಧಿ ಕಾಂಪ್ಲೆಕ್ಸ್’ಗಾಗಿ 2.5 ಎಕರೆ ಭೂಮಿ 

ಏ.24ರಂದು ನಟ ಚೇತನ್‌ ಅಹಿಂಸ ಅವರು ತಮ್ಮ ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ‘ನಾವು ರಾಜ್‌ಕುಮಾರ್‌ ಅವರನ್ನು ಒಬ್ಬ ಮಹಾನ್‌ ಕಲಾವಿದರಾಗಿ ಗೌರವಿಸುತ್ತೇವೆ. ಆದರೆ, ಬೆಂಗಳೂರು ನಗರ ಮಧ್ಯದಲ್ಲಿ 2006ರಲ್ಲಿ ಒಬ್ಬ ನಟನ ‘ಸಮಾಧಿ ಕಾಂಪ್ಲೆಕ್ಸ್’ಗಾಗಿ 2.5 ಎಕರೆ ಭೂಮಿ ನೀಡುವುದು ತಿಳುವಳಿಕೆಯ ನಿರ್ಧಾರವಾಗಿತ್ತೇ ಎಂಬುದನ್ನು ಪ್ರಶ್ನಿಸಬೇಕಾಗಿದೆ. 21ನೇ ಶತಮಾನದ ಭಾರತದಲ್ಲಿ ಪ್ರಮುಖ ಹೋರಾಟವೇ ಭೂಮಿ. ಸರ್ಕಾರವು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಾಗೂ ಸಾರ್ವಜನಿಕ ಉಪಯೋಗಕ್ಕೆ ತಕ್ಕಂತೆ ಭೂಮಿ ಹಂಚಬೇಕು. ಮತಗಳ ಲಾಭದ ಅವಕಾಶವಾದಿ ಉದ್ದೇಶದಿಂದ ಅಲ್ಲ’ ಎಂದು ಬರೆದುಕೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಅತಿಥಿ ತಂದು ಕೊಟ್ಟಿದ್ದ ಮಾವಿನ ಹಣ್ಣು ಸೇವಿಸಿ ಇಬ್ಬರು ಬಾಲಕಿಯರು ಸಾವು!
ಮೆಡಿಕಲ್‌ ಸೀಟು ಶುಲ್ಕ ಈ ವರ್ಷ ಹೆಚ್ಚಿಸದಿರಲು ಸರ್ಕಾರ ನಿರ್ಧಾರ