ಚನ್ನಮ್ಮನ ಕಿತ್ತೂರು
ಹುಬ್ಬಳ್ಳಿಯಿಂದ ಬೆಳಗಾವಿಗೆ ಆಗಮಿಸುತ್ತಿದ್ದ ತಡೆ ರಹಿತ ಬಸ್ ನಲ್ಲಿ 28 ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಪ್ರಯಾಣಿಕರಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಪಟ್ಟಣದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ 8-10 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಿತ್ತೂರಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಕಿತ್ತೂರು ಸಿಪಿಐ ಮಲ್ಲಿಕಾರ್ಜುನ ಡಪ್ಪಿನ ಹಾಗೂ ಪಿಎಸೈ ಪ್ರವೀಣ ಗಂಗೋಳ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.