ಶ್ರೀರಾಮನ ಬಗ್ಗೆ ರಾಜಣ್ಣ ಹಗುರ ಹೇಳಿಕೆ ಸಲ್ಲದು: ಎಂ.ಪಿ.ರೇಣುಕಾಚಾರ್ಯ

KannadaprabhaNewsNetwork |  
Published : Jan 20, 2024, 02:00 AM IST
19ಕೆಡಿವಿಜಿ9, 10-ದಾವಣಗೆರೆ ಶ್ರೀ ಜಯದೇವ ವೃತ್ತದಲ್ಲಿ ಬಿಜೆಪಿ ಹಾಗೂ ಹಿಂದು ಪರ ಸಂಘಟನೆಗಳ ಮುಖಂಡರ ಜೊತೆಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಡಾ.ಟಿ.ಜಿ.ರವಿಕುಮಾರ, ಮಾಡಾಳ ಮಲ್ಲಿಕಾರ್ಜುನ ಇತರರು. | Kannada Prabha

ಸಾರಾಂಶ

ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿರುವ ರಾಜಣ್ಣ ಬಾಯಿಯಿಂದ ಇಂತಹ ಪದಗಳು ಬರಬಾರದು. ನೀವು ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಯಾರನ್ನೋ ಓಲೈಕೆ ಮಾಡಲು ಹೀಗೆಲ್ಲಾ ಮಾತನಾಡಬಾರದು. ಕೇಂದ್ರ ಪುರಾತತ್ವ ಇಲಾಖೆಯ ಉಪ ನಿರ್ದೇಶಕರಿದ್ದ ಮಹಮ್ಮದ್ ಅಲ್ಲಿ ರಾಮಲಲ್ಲಾ ಇದ್ದ ಬಗ್ಗೆ ಪ್ರಮಾಣಪತ್ರ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ದಾವಣಗೆರೆ

ಟೆಂಟ್‌ನಲ್ಲಿ ಮೂರು ಬೊಂಬೆ ಇಟ್ಟಿದ್ದರೆಂದು ಶ್ರೀರಾಮನ ಬಗ್ಗೆ ತೀರಾ ಹಗುರ ಹೇಳಿಕೆ ನೀಡಿದ ಸಹಕಾರಿ ಸಚಿವ ಕೆ.ಎನ್.ರಾಜಣ್ಣಗೆ ಶ್ರೀರಾಮನ ಶಾಪ ತಟ್ಟೇ ತಟ್ಟುತ್ತದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ನಗರದ ಶ್ರೀ ಜಯದೇವ ವೃತ್ತದಲ್ಲಿ ಹಿಂದೂ ಸಂಘಟನೆಗಳು ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳು ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು ಶುಕ್ರವಾರ ರಾತ್ರಿ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಶ್ರೀರಾಮ, ಸೀತೆ, ಲಕ್ಷ್ಮಣರ ಬಗ್ಗೆ ಹಗುರವಾಗಿ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣಗೆ ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿದರು.

ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿರುವ ರಾಜಣ್ಣ ಬಾಯಿಯಿಂದ ಇಂತಹ ಪದಗಳು ಬರಬಾರದು. ನೀವು ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಯಾರನ್ನೋ ಓಲೈಕೆ ಮಾಡಲು ಹೀಗೆಲ್ಲಾ ಮಾತನಾಡಬಾರದು. ಕೇಂದ್ರ ಪುರಾತತ್ವ ಇಲಾಖೆಯ ಉಪ ನಿರ್ದೇಶಕರಿದ್ದ ಮಹಮ್ಮದ್ ಅಲ್ಲಿ ರಾಮಲಲ್ಲಾ ಇದ್ದ ಬಗ್ಗೆ ಪ್ರಮಾಣಪತ್ರ ನೀಡಿದ್ದಾರೆ. ಸುಪ್ರೀಂ ಕೋರ್ಟ್‌ಗೆ ರಾಮ ಮಂದಿರ ಇದ್ದ ಬಗ್ಗೆ ಸಾಕ್ಷ್ಯ ನೀಡಲಾಗಿತ್ತು ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್‌ನಲ್ಲಿ ರಾಮ ಮಂದಿರ ಪರ ತೀರ್ಪು ಬಂದಿದ್ದರೂ, ಅಲ್ಲಿ ಮೂರು ಬೊಂಬೆ ಇಟ್ಟಿದ್ದರು ಅಂತಾ ಹೇಳುತ್ತೀರಾ? ಶ್ರೀರಾಮನ ಶಾಪ ನಿಮಗೆ ತಟ್ಟೇ ತಟ್ಟುತ್ತದೆ. ಹೀಗೆಲ್ಲಾ ಮಾತನಾಡುವವರು ಯಾರೇ ಆಗಲಿ ಅಂತಹವರನ್ನು ಸಂಪುಟದಿಂದ ವಜಾ ಮಾಡುವ ಕೆಲಸ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಬೇಕು ಎಂದು ಒತ್ತಾಯಿಸಿದರು.

ರಾಮ ಮಂದಿರ ಹೋರಾಟದ ವೇಳೆ ಕರ ಸೇವಕರ ಮೇಲೆ ಗುಂಡು ಹಾರಿಸಿದ್ದು, ದೌರ್ಜನ್ಯ ಎಸಗಿದ್ದು ಇದೇ ಕಾಂಗ್ರೆಸ್ ಸರ್ಕಾರ. ಶ್ರೀರಾಮ ಅಯೋಧ್ಯೆಯಲ್ಲೇ ಹುಟ್ಟಿದ್ದನಾ ಎಂಬುದಾಗಿ ಪ್ರಶ್ನೆ ಮಾಡಿದ್ದು ಇದೇ ಕಾಂಗ್ರೆಸ್. ಈಗ ಶ್ರೀರಾಮ ಪ್ರತಿಷ್ಠಾಪನೆ ಹಾಗೂ ಶ್ರೀ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ಪತ್ರಿಕೆ ಬಂದಿಲ್ಲವೆಂದು ಹೇಳಿದ್ದು ಇದೇ ಕಾಂಗ್ರೆಸ್. ಈಗ ರಾಮ ಮಂದಿರಕ್ಕೆ ಭಾರತವಷ್ಟೇ ಅಲ್ಲ, ಜಗತ್ತಿನಾದ್ಯಂತ ಶ್ರೀರಾಮ ಭಕ್ತರ ಭಕ್ತಿಯನ್ನು ಕಂಡು ಸ್ವತಃ ಕಾಂಗ್ರೆಸ್ಸಿಗರು ಭಯಭೀತರಾಗಿದ್ದಾರೆ. ನಮಗೆ ಆಹ್ವಾನ ಪತ್ರಿಕೆಯೇ ಬಂದಿಲ್ಲವೆನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ ಮುಖಂಡರಾದ ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ.ಟಿ.ಜಿ.ರವಿಕುಮಾರ, ಮಾಡಾಳ್ ಮಲ್ಲಿಕಾರ್ಜುನ, ಕಕ್ಕರಗೊಳ್ಳ ಕೆ.ಪಿ.ಕಲ್ಲಿಂಗಪ್ಪ, ಪ್ರವೀಣ ಜಾಧವ್, ರಾಜು ವೀರಣ್ಣ, ಅಣಜಿ ಬಸವರಾಜ, ಕೆಟಿಜೆ ನಗರ ಜಯಣ್ಣ, ಚೇತನಾ ಶಿವಕುಮಾರ ಇತರರು ಇದ್ದರು.

ಹುಬ್ಬಳ್ಳಿಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಫ್ಲೆಕ್ಸ್ ತೆರವುಗೊಳಿಸಿರುವುದು ಖಂಡನೀಯ. ಯಾರ ಅಪ್ಪನ ಅನುಮತಿ ಕೇಳಿ, ಫ್ಲೆಕ್ಸ್ ಹಾಕಬೇಕಾ? ಬಾಬರ್‌ನ ಫ್ಲೆಕ್ಸ್ ಹಾಕುವಾಗ ನೀವು ಇದೇ ರೀತಿ ಅನುಮತಿ ಕೊಟ್ಟಿದ್ದಿರಾ? ಇದು ಹಿಂದುಗಳ ದೇಶ, ಯಾರ ಅನುಮತಿ ಬೇಕಾಗಿಲ್ಲ. ಈ ದೇಶದಲ್ಲಿ ಹುಟ್ಟಿದ ಹಿಂದು, ಮುಸ್ಲಿಂ, ಕ್ರೈಸ್ತರು ಹೀಗೆ ಎಲ್ಲರೂ ಒಟ್ಟಾಗಿದ್ದೇವೆ.

ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ

ಜ.22ಕ್ಕೆ ಮದ್ಯ ಮಾರಾಟ ನಿಷೇಧಿಸಿ: ರೇಣುಕಾಚಾರ್ಯ

ಅಯೋಧ್ಯೆಯಲ್ಲಿ ಜ.22ರಂದು ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಜ.21ರ ಮಧ್ಯರಾತ್ರಿಯಿಂದಲೇ 24 ಗಂಟೆ ಕಾಲ ಮದ್ಯ ಮಾರಾಟ ನಿಷೇಧಿಸಬೇಕು, ನೇರಪ್ರಸಾರ ವೀಕ್ಷಿಸಲು ಅನುಕೂಲವಾಗುವಂತೆ ರಾಜ್ಯವ್ಯಾಪಿ ಎಲ್‌ಇಡಿ ಪರದೆಗಳ ವ್ಯವಸ್ಥೆ ಕಲ್ಪಿಸುವ ಜೊತೆಗೆ ರಾಜ್ಯಾದ್ಯಂತ ಎಲ್ಲಾ ದೇವಸ್ಥಾನಗಳಲ್ಲೂ ರಾಜ್ಯ ಸರ್ಕಾರದಿಂದಲೇ ವಿಶೇಷ ಪೂಜೆ, ಅಲಂಕಾರ, ಪ್ರಾರ್ಥನೆಗೆ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರಗೆ ಒತ್ತಾಯಿಸಿದ್ದಾರೆ. ರಾಮ ಮಂದಿರ ಉದ್ಘಾಟನೆ ಬಿಜೆಪಿ ಕಾರ್ಯಕ್ರಮವಲ್ಲ. ಅದು ಸಂಘ ಪರಿವಾರದ ಕಾರ್ಯಕ್ರಮ. ದೇಶದ ಲಕ್ಷಾಂತರ ಕರ ಸೇವಕರ ತ್ಯಾಗ, ಬಲಿದಾನದಿಂದ ಭವ್ಯ ಮಂದಿರ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರವು ಅಂದು ಅರ್ಧ ದಿನ ರಜೆ ಘೋಷಿಸಿದ್ದು ರಾಜ್ಯ ಸರ್ಕಾರವೂ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ