ವಿಘ್ನೇಶ್ ಎಂ. ಭೂತನಕಾಡು
ಕೊಡಗಿನ ಇತಿಹಾಸ ಪ್ರಸಿದ್ಧ ಹಾಗೂ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿರುವ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಕಲಾಕೃತಿ ಈ ಬಾರಿಯ ಮಡಿಕೇರಿ ರಾಜಾಸೀಟು ಫಲಪುಷ್ಪ ಪ್ರದರ್ಶನದ ಪ್ರಮುಖ ಕಲಾಕೃತಿಯಾಗಿ ಮೂಡಿಬರಲಿದೆ.
ಜಿಲ್ಲಾಡಳಿತ, ಜಿಪಂ ಹಾಗೂ ತೋಟಗಾರಿಕಾ ಇಲಾಖೆಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಜ.24ರಿಂದ 26ರವರೆಗೆ ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಶಾಲೆಯಿಂದ ಶಾಲಾ ಸಮವಸ್ತ್ರದಲ್ಲಿ ಭಾಗವಹಿಸುವ ಶಾಲಾ ಮಕ್ಕಳಿಗೆ ಉಚಿತವಾಗಿ ಪ್ರವೇಶ ನೀಡಲು ತೀರ್ಮಾನಿಸಲಾಗಿದೆ.33 ಅಡಿ ಎತ್ತರದಲ್ಲಿ 18 ಅಡಿ ಉದ್ದ, 23 ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಹೂವುಗಳಿಂದ ಕೊಡಗಿನ ಇತಿಹಾಸ ಪ್ರಸಿದ್ದ ಶ್ರೀ ಭಗಂಡೇಶ್ವರ ದೇವಸ್ಥಾನದ ಕಲಾಕೃತಿ ನಿರ್ಮಾಣವಾಗಲಿದೆ. ಫಲಪುಷ್ಪ ಪ್ರದರ್ಶನ ಅಂಗವಾಗಿ ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ ಸುಮಾರು 8000 ಸಾವಿರ ಕುಂಡಗಳಲ್ಲಿ ವಿವಿಧ ಜಾತಿಯ ಹೂವುಗಳು ಹಾಗೂ ಬೆಡ್ ಗಳಲ್ಲಿ ಸುಮಾರು 20000 ವಿವಿಧ ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚೆಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಇತ್ಯಾದಿಗಳನ್ನು ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ.
ಸಂಗೀತ ಕಲಾಕೃತಿಗಳಾದ 2 ಸಂಖ್ಯೆ ತಬಲ ಕಲಾಕೃತಿಯನ್ನು 2.5 ಅಡಿ ಎತ್ತರ ಮತ್ತು 3.0 ಅಡಿ ಎತ್ತರ ಕಲಾಕೃತಿಗಳು, ಪಿಯಾನೊ ಕಲಾಕೃತಿಯನ್ನು 5.0 ಅಡಿ ಎತ್ತರ, 4.0 ಅಡಿ ಅಗಲ ಮತ್ತು 3.0 ಅಡಿ ಉದ್ದದ ಕಲಾಕೃತಿಗಳು, ಹರ್ಪ್ ಕಲಾಕೃತಿಯನ್ನು 6.0 ಅಡಿ ಎತ್ತರ, 3.0 ಅಡಿ ಅಗಲ ಕಲಾಕೃತಿಗಳನ್ನು ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಹೂವುಗಳಿಂದ ಆಕರ್ಷಣೀಯವಾಗಿ ಮೂಡಿಬರಲಿದೆ. ಗಣರಾಜ್ಯೋತ್ಸವ ಅಂಗವಾಗಿ ಅಮರ್ ಜವಾನ್ ಕಲಾಕೃತಿಯನ್ನು 8.0 ಅಡಿ ಎತ್ತರದಲ್ಲಿ ಕಲಾಕೃತಿಗಳನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಲಾಗುತ್ತದೆ. ಹಾರುವ ಹಕ್ಕಿಯ ಕಲಾಕೃತಿಯನ್ನು ವಿವಿಧ ಬಣ್ಣದ ಹೂವಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುತ್ತದೆ. ಮೀನಿನ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ತಯಾರಿಸಲಾಗುತ್ತದೆ.
ವಿವಿಧ ಕ್ಷೇತ್ರಗಳ ಗಣ್ಯರ ಕಲಾಕೃತಿಗಳನ್ನು ಹಣ್ಣು / ತರಕಾರಿಗಳಿಂದ ಕೆತ್ತನೆ ಮಾಡಿ ಪ್ರದರ್ಶಿಸಲಾಗುತ್ತಿದೆ. ವಿವಿಧ ಅಲಂಕಾರಿಕ ಗಿಡಗಳು ಬೋನ್ಸಾಯ್ ಗಿಡಗಳ ಪ್ರರ್ದಶನ, ಇಕೆಬಾನೆ ಹೂವಿನ ಜೋಡಣೆ ಪ್ರದರ್ಶನ ಇರಲಿದೆ. ಈ ರೀತಿಯಾಗಿ ಹದಿನಾರು ವಿವಿಧ ರೀತಿಯ ಹೂವಿನ ಕಲಾಕೃತಿಗಳನ್ನು ಒಟ್ಟು 8.00ರಿಂದ 10.00 ಲಕ್ಷ ಸಂಖ್ಯೆಯ ಸೇವಂತಿಗೆ, ಆರ್ಕಿಡ್, ಡೆಸ್ಸಿ ಹಾಗೂ ವಿವಿಧ ಹೂವುಗಳಿಂದ ಸಿದ್ಧಪಡಿಸಲಾಗುತ್ತದೆ. ವಿವಿಧ ಬಗೆಯ ಮಳಿಗೆಗಳು
...ಬಾಕ್ಸ್...
ತೋಟಗಾರಿಕೆಯಲ್ಲಿ ಆಸಕ್ತಿ ಇರುವ ಮಹಿಳೆಯರಿಗೆ ಹಾಗೂ ಸಾರ್ವಜನಿಕರಿಗೆ ಒಣ ಹೂ ಜೋಡಣೆ, ಬಿಡಿ ಹೂಗಳ ಜೋಡಣೆ, ಇಕೆಬಾನ, ರಂಗೋಲಿ ಸ್ಪರ್ಧೆಗಳನ್ನು ರಾಜಾಸೀಟಿನ ಒಳಭಾಗದಲ್ಲಿ ಆಯೋಜಿಸಲಾಗುವುದು. ಆಸಕ್ತರು ಇಂದಿನಿಂದಲೇ ಅಥವಾ ನೇರವಾಗಿ ಜ.24ರ ಬೆಳಗ್ಗೆ 8.00 ಗಂಟೆಗೆ ರಾಜಾಸೀಟು ಉದ್ಯಾನವನದಲ್ಲಿ (ದೂರವಾಣಿ ಸಂಖ್ಯೆ: 9448613355) ಹೆಸರನ್ನು ನೊಂದಾಯಿಸಿಕೊಂಡು ಸ್ಪರ್ಧೆಯಲ್ಲಿ ಭಾಗವಹಿಸಬಾಗಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಜ. 24ರಿಂದ 26ರವರೆಗೆ ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದ್ದು, ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಕಲಾಕೃತಿ ಮುಖ್ಯವಾಗಿರಲಿದೆ. ಇದರೊಂದಿಗೆ ಹಲವು ವಿಶೇಷತೆಗಳು ಈ ಪ್ರದರ್ಶನದಲ್ಲಿ ಕಂಡು ಬರಲಿವೆ. ಫಲಪುಷ್ಪ ಪ್ರದರ್ಶನ ಅಂಗವಾಗಿ ವಿವಿಧ ಬಗೆಯ ಮಳಿಗೆಗಳು ಇರಲಿವೆ. ಅಲ್ಲದೆ ನಾನಾ ಇಲಾಖೆಗಳ ಮಾಹಿತಿ ನೀಡುವ ಸಲುವಾಗಿ ಮಳಿಗೆಗಳನ್ನು ತೆರೆಯಲಾಗುತ್ತದೆ. ಸಾರ್ವಜನಿಕರಿಗಾಗಿ ವಿವಿಧ ಬಗೆಯ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ.
ಅಧ್ಯಕ್ಷರು ರಾಜಾಸೀಟು ಅಭಿವೃದ್ದಿ ಸಮಿತಿ ಮಡಿಕೇರಿ