ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ರಾಜಶೇಖರ ಎರಡನೇ ಬಾರಿ ಆಯ್ಕೆ: ಸನ್ಮಾನ

KannadaprabhaNewsNetwork |  
Published : Jan 12, 2024, 01:46 AM IST
51 | Kannada Prabha

ಸಾರಾಂಶ

ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಟವಾಗಿದ್ದು, ಅದರ ಜವಾಬ್ದಾರಿ ಅರಿತು ಕೆಲಸ ಮಾಡಿದರೆ ಸದೃಢ ಸಮಾಜ ಕಟ್ಟುವುದರ ಜತೆಗೆ ದೇಶಕ್ಕೆ ಉತ್ತಮ ಪ್ರಜೆಗಳನ್ನು ನೀಡಬಹುದಾಗಿದೆ. ಎಲ್ಲಾ ಶಿಕ್ಷಕರು ತಮ್ಮ ಸೇವೆಯನ್ನು ಪ್ರಾಮಾಣಿಕತೆಯಿಂದ ಮಾಡಬೇಕು

ಕನ್ನಡಪ್ರಭ ವಾರ್ತೆ ಕೆ.ಆರ್.ನಗರ

ಶಿಕ್ಷಕ ವೃತ್ತಿಯ ಜತೆಗೆ ಸಮಾಜ ಮುಖಿ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿರುವ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ ಅವರ ವ್ಯಕ್ತಿತ್ವ ಬಹುಮುಖ ಪ್ರತಿಭೆಯಿಂದ ಕೂಡಿದೆ ಎಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಡಿ. ಶ್ರೀನಿವಾಸ್ ಹೇಳಿದರು.

ಪಟ್ಟಣದ ಬನ್ನಿಮಂಟಪ ಬಡಾವಣೆಯಲ್ಲಿರುವ ನಿವೃತ್ತ ಉಪನ್ಯಾಸಕ ದಿ.ಕೆ.ಎಲ್. ಲಕ್ಕೇಗೌಡರ ನಿವಾಸದಲ್ಲಿ ಎರಡನೇ ಬಾರಿಗೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಜಶೇಖರ್ ಅವರಿಗೆ ಸ್ನೇಹಿತರು ಮತ್ತು ಹಿತೈಷಿಗಳು ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಟವಾಗಿದ್ದು, ಅದರ ಜವಾಬ್ದಾರಿ ಅರಿತು ಕೆಲಸ ಮಾಡಿದರೆ ಸದೃಢ ಸಮಾಜ ಕಟ್ಟುವುದರ ಜತೆಗೆ ದೇಶಕ್ಕೆ ಉತ್ತಮ ಪ್ರಜೆಗಳನ್ನು ನೀಡಬಹುದಾಗಿದ್ದು ಎಲ್ಲಾ ಶಿಕ್ಷಕರು ತಮ್ಮ ಸೇವೆಯನ್ನು ಪ್ರಾಮಾಣಿಕತೆಯಿಂದ ಮಾಡಬೇಕು ಎಂದು ಸಲಹೆ ನೀಡಿದರು.

ಸಮಾಜ ಮುಖಿ ಚಿಂತಕ ಮಿರ್ಲೆ ಸುಜಯ್ ಗೌಡ, ಪುರಸಭೆ ಸದಸ್ಯ ಕೆ.ಎಲ್.ಜಗದೀಶ್, ಮಾಜಿ ಸದಸ್ಯ ಶಿವಕುಮಾರ್, ಶಿಕ್ಷಕರಾದ ಕೃಷ್ಣನಾಯಕ, ಪುರುಷೋತ್ತಮ್, ಪುಟ್ಟರಾಜು, ಚಂದ್ರಶೇಖರ್, ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ಕೆ.ಎಸ್.ಮಲ್ಲಪ್ಪ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಪ್ರತಿಭಾ ಮಾತನಾಡಿ, ನೂತನ ಅಧ್ಯಕ್ಷರಿಗೆ ಶುಭ ಕೋರಿದರು.

ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾಗಿರುವ ರಾಜಶೇಖರ ಅವರನ್ನು ತಾಲೂಕು ಜೆಡಿಎಸ್ ವಕ್ತಾರ ಕೆ.ಎಲ್. ರಮೇಶ್ ಅವರ ನೇತೃತ್ವದಲ್ಲಿ ಸ್ನೇಹಿತರು ಮತ್ತು ಹಿತೈಷಿಗಳು ಸನ್ಮಾನಿಸಿ ಸಂಭ್ರಮಿಸಿದರು.

ತಾಲೂಕು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎಚ್.ಡಿ. ಮಂಜುನಾಥ್, ನಿರ್ದೇಶಕ ಬಿ.ಎಲ್. ಮಹದೇವ್, ಸಾಲಿಗ್ರಾಮ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಧು, ನಿವೃತ್ತ ಸಹಾಯಕ ಎಂಜಿನಿಯರ್ಎಸ್.ವಿ. ಪ್ರಕಾಶ್, ಉಪನ್ಯಾಸಕ ಎಚ್.ಡಿ.ರಾಘವೇಂದ್ರ, ಶಿಕ್ಷಕರಾದ ಮಾರುತಿ, ಮುರುಳಿ, ಪ್ರಕಾಶ್, ಮುತ್ತೇಶಾಚಾರ್, ಮಂಜುನಾಥ್, ನವ ನಗರ ಬ್ಯಾಂಕ್ ನಿರ್ದೇಶಕ ಕೇಶವ್, ಸಾ.ರಾ. ಸ್ನೇಹ ಬಳಗದ ಕಾರ್ಯದರ್ಶಿ ಸಿ.ಜೆ. ಆನಂದ್, ಮುಖಂಡರಾದ ರಂಗನಾಥ್, ಚಂದ್ರಶೇಖರ್, ಪಾಲಾಕ್ಷ ಇದ್ದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ