ಯಲಬುರ್ಗಾ: ಈ ಸಾರಿ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಸುಯೋಗ ಕೂಡಿಬಂದಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಬಿಜೆಪಿಯವರು ಮತ್ತೆ ೪೦೦ ಸ್ಥಾನ ಪಡೆಯುತ್ತೇವೆಂದು ಹೇಳುತ್ತಿದ್ದಾರೆ. ಆದರೆ ದೇಶದ ಜನತೆ ಪ್ರಜ್ಞಾವಂತರಿದ್ದಾರೆ. ಬಿಜೆಪಿಯವರಿಗೆ ೨೦೨೪ರ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ. ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿ ಮಾತನಾಡಿ, ಜನರು ಹಣಕ್ಕಾಗಿ ಮತ ಹಾಕುವುದಿಲ್ಲ. ಕಾಂಗ್ರೆಸ್ ಅಭಿವೃದ್ಧಿಯನ್ನು ಗಮನಿಸಿ ಮತ ಹಾಕುತ್ತಾರೆ. ಈ ಹಿಂದೆ ಕಾಂಗ್ರೆಸ್ ೫೦ ವರ್ಷಗಳ ಕಾಲ ಈ ದೇಶವನ್ನಾಳಿದೆ. ನದಿ, ಸೇತುವೆ, ರಸ್ತೆ, ಡ್ಯಾಂಗಳು ಸೇರಿದಂತೆ ಸಾಕಷ್ಟು ಅಭಿವೃದ್ಧಿಗೊಳಿಸಿ ಜನಮಾಸದಲ್ಲಿ ಉಳಿದುಕೊಂಡಿದೆ. ಆದರೆ ಮೋದಿ ಅವರು ೧೦ ವರ್ಷಗಳಲ್ಲಿ ಯಾವ ಅಭಿವೃದ್ಧಿಯನ್ನೂ ಮಾಡಿಲ್ಲ. ಅಂಥವರಿಗೆ ದೇಶದ ಜನತೆ ಮತ ಹಾಕುವುದಿಲ್ಲ. ಬರೀ ಸುಳ್ಳು ಹೇಳುವ ಮೋದಿ ಅವರ ಮಾತಿಗೆ ಮರುಳಾಗಿ ಯಾರೂ ಬಿಜೆಪಿಗೆ ಮತ ಹಾಕಬೇಡಿ ಎಂದರು.ಲೋಕಸಭಾ ನಿಯೋಜಿತ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಮಾತನಾಡಿ, ಈಗಾಗಲೇ ನಾನು ಎರಡು ಬಾರಿ ಸೋತಿದ್ದೇನೆ. ಈ ಬಾರಿ ಜಿಲ್ಲೆಯ ಅಭಿವೃದ್ಧಿಯ ಸೇವೆ ಮಾಡಲು ಒಂದು ಅವಕಾಶ ಮಾಡಿಕೊಡಿ ಎಂದು ಜನರಲ್ಲಿ ಮನವಿ ಮಾಡಿಕೊಂಡರು.
೨೨ವೈಎಲ್‌ಬಿ೧: ಯಲಬುರ್ಗಾದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಪೂರ್ವಭಾವಿ ಸಭೆ ಜರುಗಿತು.