ಕನ್ನಡಪ್ರಭ ವಾರ್ತೆ ಬೆಂಗಳೂರುಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ವರಿಷ್ಠರು ಬಯಸಿದರೆ ಅವರು ಲೋಕಸಭೆಗೆ ಸ್ಪರ್ಧೆ ಮಾಡುವ ಬಗ್ಗೆ ಒಲವು ಹೊಂದಿದ್ದಾರೆ ಎನ್ನಲಾಗಿದೆ.ಕನ್ನಡಪ್ರಭಕ್ಕೆ ನೀಡಿದ ಸಂದರ್ಶನದಲ್ಲಿ ರಾಜೀವ್ ಚಂದ್ರಶೇಖರ್ ಅವರೇ ಈ ಕುರಿತು ಸುಳಿವನ್ನೂ ನೀಡಿದ್ದಾರೆ.
ಆದರೆ, ಯಾವ ರಾಜ್ಯದಿಂದ ಸ್ಪರ್ಧೆ ಅಥವಾ ಯಾವ ಕ್ಷೇತ್ರದಿಂದ ಸ್ಪರ್ಧೆ ಎಂಬ ಬಗ್ಗೆ ಅವರು ಏನನ್ನೂ ಹೇಳಿಲ್ಲ.ಸ್ಪರ್ಧಿಸುವುದೇ ಆದರೆ ಯಾವ ಕ್ಷೇತ್ರ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದಷ್ಟೇ ಹೇಳಿದ್ದಾರೆ.