ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಹಾಗೂ ನವೋದಯ ಸ್ವಸಹಾಯ ಗುಂಪುಗಳ ಸಂಸ್ಥಾಪಕರಾದ ಸಹಕಾರಿ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದಲ್ಲಿ ಗುರುವಾರ ಸಂಜೆ ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ವಾಸುದೇವ ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಕಾಪು ಸಿಎ ಬ್ಯಾಂಕ್ ಅಧ್ಯಕ್ಷ ಕಾಪು ದಿವಾಕರ್ ಶೆಟ್ಟಿ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ನವೋದಯ ಸ್ವಸಹಾಯ ಗುಂಪುಗಳ ಮೇಲ್ವಿಚಾರಕ ಹರಿನಾಥ್, ಸಹಾಯಕ ಮೇಲ್ವಿಚಾರಕ ಕೃಷ್ಣ, ಅನಿತಾ ಉದಯ್ ಕುಮಾರ್ ಸೇರಿದಂತೆ ನವೋದಯ ಸ್ವಸಹಾಯ ಗುಂಪುಗಳ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು.