ಶಾಶ್ವತವಾಗಿರುವ ರಾಜೀವ್‌, ಅರಸು ಯೋಜನೆಗಳು: ಡಾ.ಕೆ.ಪಿ.ಅಂಶುಮಂತ್

KannadaprabhaNewsNetwork |  
Published : Aug 21, 2025, 01:00 AM IST
ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು. ಡಾ ಅಂಶುಮಂತ್‌, ಸಂದೀಪ್‌, ಮಂಜೇಗೌಡ, ಶಿವಾನಂದಸ್ವಾಮಿ ಹಾಗೂ ಕಾಂಗ್ರೆಸ್‌ ಪಕ್ಷದ ಮುಖಂಡರು ಇದ್ದರು. | Kannada Prabha

ಸಾರಾಂಶ

ದೇಶದ ಯುವ ಜನರ ಭವಿಷ್ಯ, ಕಲ್ಪನೆ ಹಾಗೂ ಭರವಸೆಗಳನ್ನು ಮನಗಂಡು ರಾಜೀವ್ ಗಾಂಧಿಯವರು ಜನಪರವಾದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವುಗಳು ಇಂದು ಶಾಶ್ವತವಾಗಿ ನೆಲೆಯೂರಿವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಅವರು ಹೇಳಿದರು.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ದೇಶದ ಯುವ ಜನರ ಭವಿಷ್ಯ, ಕಲ್ಪನೆ ಹಾಗೂ ಭರವಸೆಗಳನ್ನು ಮನಗಂಡು ರಾಜೀವ್ ಗಾಂಧಿಯವರು ಜನಪರವಾದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವುಗಳು ಇಂದು ಶಾಶ್ವತವಾಗಿ ನೆಲೆಯೂರಿವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಅವರು ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡ ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮ ದಿನಾಚರಣೆಯಲ್ಲಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಸಮಾನತೆಯ ಹರಿಕಾರ ಸಮಾಜವನ್ನು ಸುಧಾರಿಸಿದ ಮಹಾನ್ ನಾಯಕರಾದ ದೇವರಾಜ ಅರಸ್ ಅವರು ಹಿಂದುಳಿದ ವರ್ಗ ಮತ್ತು ದೀನ ದಲಿತರ ಉದ್ದಾರಕ್ಕಾಗಿ ಶ್ರಮಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಪ್ರತಿಯೊಬ್ಬರೂ ಸಾಗಬೇಕು. ಅವರು ಹಾಕಿಕೊಟ್ಟಂತಹ ದಾರಿಯಲ್ಲಿ ಮುನ್ನಡೆಯುವಂತೆ ಸಲಹೆ ನೀಡಿದರು.

ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿ ಆದ ಸಂದರ್ಭದಲ್ಲಿ ಜನಪರವಾದ ಉತ್ತಮವಾದ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೊಳಿದ್ದರು. ಹಾಗೆಯೇ ಡಿ.ದೇವರಾಜ ಅರಸು ಅವರು ಹಿಂದುಳಿದ ವರ್ಗದವರಿಗೆ ಹಾಗೂ ದೀನ ದಲಿತರಿಗೆ ಪ್ರಜಾಪ್ರಭುತ್ವದಲ್ಲಿ ಸಿಗಬೇಕಾದ ಸೌಲಭ್ಯಗಳನ್ನು ಕೊಟ್ಟಿರುವುದು ಅಚ್ಚಳಿಯದೆ ಉಳಿದಿವೆ ಎಂದರು.

ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರಿಗೆ ಸವಲತ್ತು, ಯೋಜನೆಗಳು ಸಕಾಲದಲ್ಲಿ ಸಿಗಲು ಮತ್ತು ಸ್ಥಳಿಯ ಸಂಸ್ಥೆಗಳಿಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಲು ರಾಜೀವ್ ಗಾಂಧಿಯವರ ಕೊಡುಗೆ ಅಪಾರವಾಗಿದೆ. ಉಳುವವನೆ ಭೂ ಒಡೆಯ ಯೋಜನೆಯನ್ನು ಜಾರಿಗೆ ತರುವ ಮೂಲಕ ಚಿಕ್ಕ ಸಮಾಜವನ್ನು ಗುರುತಿಸಿ ಪ್ರಜಾಪ್ರಭುತ್ವದಲ್ಲಿ ಆದ್ಯತೆಯನ್ನು ಕೊಡಿಸಿದವರು ಅರಸು ಎಂದು ಬಣ್ಣಿಸಿದರು.

ರಾಜೀವ್ ಗಾಂಧಿಯವರ ಪಂಚಾಯತ್ ರಾಜ್ ವ್ಯವಸ್ಥೆ ಮತ್ತು ಮೀಸಲಾತಿಗಳಿಂದ ಬಹುತೇಕರಿಗೆ ಅಧಿಕಾರ ದೊರೆಯುವಂತಾಗಿದೆ ತಾಂತ್ರಿಕ ಜಗತ್ತಿನಲ್ಲಿ ಪ್ರಪಂಚಕ್ಕೆ ಸವಾಲ್ ಎಂಬಂತೆ ನಮ್ಮ ದೇಶವನ್ನು ರೂಪಿಸಿದ ರಾಜೀವ್ ಗಾಂಧಿ ಅವರನ್ನು ಈ ದೇಶದ ಜನ ಮರೆಯಬಾರದು ಎಂದರು.

ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ, ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ, ವಕೀಲರಾದ ಡಿ.ಸಿ.ಪುಟ್ಟೇಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ, ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ನಗರಸಭಾ ಸದಸ್ಯ ಪರಮೇಶ್ ರಾಜ್ ಅರಸ್, ಎಸ್.ಸಿ. ಘಟಕದ ಜಿಲ್ಲಾಧ್ಯಕ್ಷ ಮಲ್ಲೇಶ್, ನಗರ ಆಶ್ರಯ ಸಮಿತಿ ಸದಸ್ಯ ಪ್ರಸಾದ್ ಅಮಿನ್, ಸಿಡಿಎ ಸದಸ್ಯ ಶೃದೀಪ್, ಜಿಲ್ಲಾ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ಜಯರಾಜ್ ಅರಸ್, ಶಿವರಾಂ, ನಾಗೇಶ್ ರಾಜ್ ಅರಸ್, ನಾಗೇಶ್, ಎಚ್.ಎಸ್.ಜಗದೀಶ್, ಸುನೀಲ್, ಸುರೇಶ್ ಕುಮಾರ್ ಹಾಜರಿದ್ದರು.

PREV

Recommended Stories

ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಎಮ್ಮೆ ಕೊಡಿಸುವುದಾಗಿ ಪ್ರೇಮ್‌ಗೆ ವಂಚನೆ : ₹4.75 ಲಕ್ಷ ಮೋಸ