ರಾಜೀವ್‌ ಗಾಂಧಿ ಆರೋಗ್ಯ ವಿ.ವಿ. ವಾರ್ಷಿಕ ಕ್ರೀಡಾಕೂಟ

KannadaprabhaNewsNetwork |  
Published : Nov 21, 2025, 03:00 AM IST
ಅಥ್ಲೆಟಿಕ್ ಕ್ರೀಡಾಕೂಟ 2025-26  ಸ್ವರಾಜ್ ಮೈದಾನದಲ್ಲಿ ಸೋಮವಾರ ಉದ್ಘಾಟನೆಗೊಂಡಿತು. | Kannada Prabha

ಸಾರಾಂಶ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಆತಿಥ್ಯದಲ್ಲಿ ಮೂರು ದಿನಗಳ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಾಜ್ಯ ಮಟ್ಟದ 23ನೇ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ವಾರ್ಷಿಕ ಅಥ್ಲೆಟಿಕ್ ಕ್ರೀಡಾಕೂಟ 2025-26 ಸ್ವರಾಜ್ ಮೈದಾನದಲ್ಲಿ ಸೋಮವಾರ ಉದ್ಘಾಟನೆಗೊಂಡಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಆತಿಥ್ಯದಲ್ಲಿ ಮೂರು ದಿನಗಳ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಾಜ್ಯ ಮಟ್ಟದ 23ನೇ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ವಾರ್ಷಿಕ ಅಥ್ಲೆಟಿಕ್ ಕ್ರೀಡಾಕೂಟ 2025-26 ಸ್ವರಾಜ್ ಮೈದಾನದಲ್ಲಿ ಸೋಮವಾರ ಉದ್ಘಾಟನೆಗೊಂಡಿತು.ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕ್ರೀಡಾ ವಿಭಾಗದ ಕುಲಸಚಿವ ಡಾ. ವಸಂತ ಶೆಟ್ಟಿ ಮಾತನಾಡಿ, ಈ ಕ್ರೀಡಾಕೂಟವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಸಹಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ದೀಪನಕ್ಕೆ ನೀಡುವ ಪ್ರೋತ್ಸಾಹವನ್ನು ಸಾಕ್ಷೀಕರಿಸುತ್ತದೆ ಎಂದರು.ಕರ್ನಾಟಕ ಕೌನ್ಸಿಲ್ ಫಾರ್ ಅಲೈಡ್ ಮತ್ತು ಹೆಲ್ತ್ಕೇರ್ ಪ್ರೊಫೆಶನ್ಸ್ನ ಅಧ್ಯಕ್ಷ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಪ್ರೊ. ಯು. ಟಿ. ಇಫ್ತಿಖಾರ್ ಅಲಿ ಉದ್ಘಾಟನೆ ನೆರವೇರಿಸಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಉಮಾನಾಥ್ ಎ. ಕೋಟ್ಯಾನ್, ಕ್ರೀಡೆಯಲ್ಲಿ ಸೋಲು- ಗೆಲುವು ಮುಖ್ಯವಲ್ಲ. ಇಲ್ಲಿ ಸ್ಪರ್ಧೆ, ಪ್ರಯತ್ನ ಮತ್ತು ಕಲಿಕೆ ಮುಖ್ಯ ಎಂದರು.ರಾಷ್ಟ್ರದ ನಷಾ ಮುಕ್ತ ಭಾರತ ಅಭಿಯಾನಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಕ್ರಿಯ ಬೆಂಬಲ ನೀಡುತ್ತಿದೆ. ಈ ಹಿನ್ನಲೆಯಲ್ಲಿ ಈ ಕ್ರೀಡಾಕೂಟದ ಪಥಸಂಚಲನದಲ್ಲಿ ಆಳ್ವಾಸ್ ನರ್ಸಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ವಿಶೇಷ ಪ್ಲಕಾರ್ಡ್‌ಗಳು ಮತ್ತು ಬ್ಯಾನರ್‌ಗಳು ಹಿಡಿದು ನಷಾ ಮುಕ್ತ ಭಾರತ ಸಂದೇಶವನ್ನು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ತಲುಪಿಸಿದರು.ಜೇಷ್ಯಾ ಡಿಸೋಜಾ, ಉಷಾರಾಣಿ ಜಿ ಎಚ್, ವಿಶಾಲ್ ವಿ ಸಾಲ್ಯಾನ್, ಕ್ಯಾಥರಿನ್ ತೋಮಸ್, ಮಹೇಂದರ್ ಚೌಧರಿ ಕ್ರೀಡಾಜ್ಯೋತಿ ಹಸ್ತಾಂತರಿಸಿದರು.ಮೊದಲ ದಿನದ ಅಂತ್ಯಕ್ಕೆ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ಸ್ ಕಾಲೇಜಿನ ವಿದ್ಯಾರ್ಥಿಗಳು 14 ಪಾಯಿಂಟ್‌ಗಳೊಂದಿಗೆ ಮುನ್ನಡೆ ಕಾಪಾಡಿಕೊಂಡರೆ, ಸೈಂಟ್ ಅಥೆನಾ ಕಾಲೇಜು 13 ಪಾಯಿಂಟ್‌ಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.ಮೂರು ದಿನಗಳ ಕ್ರೀಡಾಕೂಟದಲ್ಲಿ ರಾಜ್ಯದ 127 ಕಾಲೇಜುಗಳಿಂದ 924 ಕ್ರೀಡಾಪಟುಗಳು ಪಾಲ್ಗೊಂಡರು. ಪಥಸಂಚನಲದಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ, ಸಿಂಡಿಕೇಟ್ ಸದಸ್ಯರಾದ ಡಾ ಶಿವಶರಣ್ ಶೆಟ್ಟಿ, ಸೆನೆಟ್ ಸದಸ್ಯೆ ಪ್ರೋ ವೈಶಾಲಿ ಶ್ರೀಜಿತ್, ಕ್ರೀಡಾಕೂಟದ ವೀಕ್ಷಕರಾದ ಡಾ ಅನಿಲ್ ಜೋಸೆಫ್, ಡಾ ಜಯಕುಮಾರ್, ಆಳ್ವಾಸ್ ಟ್ರಸ್ಟಿ ವಿವೇಕ್ ಆಳ್ವ ಇದ್ದರು. ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಚರ‍್ಯ ಡಾ ಸುಶೀಲ ಶೆಟ್ಟಿ ಸ್ವಾಗತಿಸಿ, ಉಪನ್ಯಾಸಕ ರಾಜೇಶ್ ಡಿಸೋಜಾ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿಡ್ನಾಪ್‌ ಆದ 1094 ಮಕ್ಕಳು ಇನ್ನೂ ಪತ್ತೆಯಾಗಿಲ್ಲ!
ತನಗೆ ಮದುವೆ ಮಾಡಿದ್ದ ಪುರೋಹಿತಗೂ ರಾಜೀವ್‌ ಲಾಂಗ್‌ ತೋರಿಸಿ ಧಮ್ಕಿ