ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು 2026ರ ಸೆಪ್ಟಂಬರ್‌ಗೆ ಪೂರ್ಣಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು 2026ರ ಸೆಪ್ಟಂಬರ್‌ಗೆ ಪೂರ್ಣಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ಮೇರಿಹಿಲ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಪ್ರಾದೇಶಿಕ ಕಚೇರಿ ಕಟ್ಟಡ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿದ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಮಂಗಳೂರು ಸೇರಿದಂತೆ ರಾಜ್ಯದ ಕಲಬುರಗಿ, ಮೈಸೂರು, ಹುಬ್ಬಳ್ಳಿ, ಬೆಂಗಳೂರು, ದಾವಣಗೆರೆ ಸೇರಿ ಆರು ಕಡೆಗಳಲ್ಲಿ ಸ್ಟೇಟ್ ಆಫ್ ಆರ್ಟ್ ಸ್ಕಿಲ್ ಲ್ಯಾಬ್‌ಗಳನ್ನು ನಿರ್ಮಾಣ ಮಾಡಲು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ದಾವಣಗೆರೆ ಹಾಗೂ ಕಲಬುರಗಿಯ ಕಟ್ಟಡ ಕಾಮಗಾರಿ ಸಂಪೂರ್ಣವಾಗಿದೆ ಎಂದವರು ಹೇಳಿದರು.ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡದ ಕಾರ್ಯಪಾಲಕ ಅಭಿಯಂತರ ಧನಂಜಯ್ ಅವರು ಕೇಂದ್ರದ ಬಗ್ಗೆ ಮಾಹಿತಿ ನೀಡಿ, ಮೇರಿಹಿಲ್‌ನಲ್ಲಿ ಸುಮಾರು 49 ಕೋ. ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ 1,20,000 ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ. ತಳ ಅಂತಸ್ತು ನೆಲ ಮಹಡಿ ಸೇರಿ ಆರು ಅಂತಸ್ತುಗಳನ್ನು ಒಳಗೊಂಡಿರಲಿದೆ. ಕೆಳ ತಳ ಅಂತಸ್ತು ಪಾರ್ಕಿಂಗ್ ವ್ಯವಸ್ಥೆ, ತಳ ಅಂತಸ್ತಿನಲ್ಲಿ ವಿಶ್ವವಿದ್ಯಾನಿಲಯದ ಕುಲಪತಿ, ರಿಜಿಸ್ಟ್ರಾರ್, ಹಣಕಾಸು ಸೇರಿದಂತೆ ಇತರ ಕಚೇರಿಗಳು ಇರಲಿವೆ. ಮೊದಲ ಹಾಗೂ ಎರಡನೇ ಮಹಡಿಯಲ್ಲಿ ಸ್ಕಿಲ್ ಲ್ಯಾಬ್‌ಗಳು ಹಾಗೂ ಉಳಿದ ಮಹಡಿಯಲ್ಲಿ ಸ್ಪೋರ್ಟ್ಸ್‌ಗೆ ಮೀಸಲಿಡಲಾಗುತ್ತದೆ ಎಂದು ಅವರು ತಿಳಿಸಿದರು.ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ, ರಾಜ್ಯ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷ ಡಾ. ಇಪ್ತಿಕಾರ್ ಅಲಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯ ಡಾ.ಶಿವಶರಣ್ ಶೆಟ್ಟಿ, ಕಣಚೂರು ವಿದ್ಯಾಸಂಸ್ಥೆಯ ಅಧ್ಯಕ್ಷ ಕಣಚೂರು ಮೋನು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.