ಕೆಎಸ್‌ಆರ್‌ಟಿಸಿ ಬಸ್‌ ಡಿಪೋದಲ್ಲಿ ರಾಜ್ಯೋತ್ಸವ ಸಂಭ್ರಮ

KannadaprabhaNewsNetwork |  
Published : Nov 28, 2024, 12:32 AM IST
27ಮಾಗಡಿ1 :ಮಾಗಡಿಪಟ್ಟಣದ ಸರ್ಕಾರಿ ಬಸ್ ಡಿಪೋದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿ ರಾಮನಗರ ವಿಭಾಗದ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷರಾದ ಡಾ. ಮನು ಬಳಿಗಾರ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಮಾಗಡಿ: ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷ, ನಾಡೋಜ ಡಾ. ಮನು ಬಳಿಗಾರ್ ಹೇಳಿದರು.

ಮಾಗಡಿ: ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷ, ನಾಡೋಜ ಡಾ. ಮನು ಬಳಿಗಾರ್ ಹೇಳಿದರು.

ಸರ್ಕಾರಿ ಬಸ್ ಡಿಪೋದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕನ್ನಡ ಕ್ರಿಯಾ ಸಮಿತಿ ರಾಮನಗರ ವಿಭಾಗದಿಂದ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾಗಡಿ ತಾಲೂಕು ಶ್ರೇಷ್ಠ ವ್ಯಕ್ತಿಗಳಿಗೆ ಜನ್ಮ ನೀಡಿದೆ. ತುಮಕೂರು ಮಠಾಧ್ಯಕ್ಷರಾದ ಡಾ. ಶಿವಕುಮಾರ ಸ್ವಾಮೀಜಿ, ಕವಿ ಸಿದ್ದಲಿಂಗಯ್ಯ, ಕಸಾಪ ಪ್ರಥಮ ಅಧ್ಯಕ್ಷ ಎಚ್.ವಿ.ನಂಜುಂಡಯ್ಯ ಇತ್ಯಾದಿ ಅನೇಕರು ತಾಲೂಕಿನಲ್ಲಿ ಜನಿಸಿರುವುದು ಹೆಮ್ಮೆಯ ವಿಚಾರ. ಬುದ್ಧ, ಬಸವರ ಕಾಲದಿಂದಲೂ ಕನ್ನಡ ಭಾಷೆಗೆ ಅಸ್ತಿತ್ವವಿದೆ ಎಂದರು.

ಕರಾರಸಾ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ವ.ಚ. ಚನ್ನೇಗೌಡ ಮಾತನಾಡಿ, ಕರ್ನಾಟಕ ಏಕೀಕರಣ ಹೋರಾಟದಲ್ಲಿ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಪಾತ್ರ ಪ್ರಮುಖವಾದುದು. ಮುಖ್ಯಮಂತ್ರಿ ಸ್ಥಾನವನ್ನೇ ತ್ಯಾಗ ಮಾಡಿದ ಮಹಾ ನಾಯಕರು. ಅವರ ಹೋರಾಟದ ಫಲವಾಗಿ ಕರ್ನಾಟಕ ಏಕೀಕರಣ ಮಾಡಲಾಯಿತು ಎಂದು ತಿಳಿಸಿದರು.

ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಿಂದ ಸೋಮೇಶ್ವರ ಕಾಲೋನಿಯ ಸರ್ಕಾರಿ ಡಿಪೋವರೆಗೂ ಕಲಾತಂಡಗಳೊಂದಿಗೆ ಭುವನೇಶ್ವರಿ ಸ್ತಬ್ಧ ಚಿತ್ರ ಅದ್ಧೂರಿ ಮೆರವಣಿಗೆ ಮಾಡಲಾಯಿತು. ಸರ್ಕಾರಿ ಬಸ್‌ಗಳಿಗೆ ಸಿಂಗರಿಸಿ ಕನ್ನಡದ ಪ್ರಸಿದ್ಧ ಕವಿಗಳು ಮತ್ತು ನಟರ ಭಾವಚಿತ್ರ ಹಾಕಿ ಬಾವುಟ ಕಟ್ಟಿ ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಸಿ ನಂಜುಂಡಯ್ಯನವರಿಗೆ ಸಾಹಿತಿ ಕೌಸ್ತುಭ ಹಾಗೂ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ ತೇಜಸ್‌ಗೆ ಕ್ರೀಡಾ ಕೌಸ್ತುಭ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಉತ್ತಮ ಚಾಲಕ ಮತ್ತು ನಿರ್ವಾಹಕ ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ರಾಮನಗರ ವಿಭಾಗೀಯ ನಿಯಂತ್ರಣ ಅಧಿಕಾರಿ ಎಸ್.ಆರ್.ಕಿರಣ್ ಕುಮಾರ್, ಕನ್ನಡ ಕ್ರಿಯಾ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಪ್ರಭುಸ್ವಾಮಿ, ರಾಜ್ಯ ಖಜಾಂಚಿ ಹುಸೇನ್, ವಲಯ ಕಾರ್ಯದರ್ಶಿ ಸುನಂದಾದೇವಿ, ರಾಮನಗರ ವಿಭಾಗದ ಅಧ್ಯಕ್ಷರಾದ ಎಸ್.ಎಂ.ಶ್ರೀನಿವಾಸ್, ಮಾಗಡಿ ಘಟಕದ ಅಧ್ಯಕ್ಷ ಮಂಜುಶೇಖರ್, ಪ್ರಧಾನ ಕಾರ್ಯದರ್ಶಿ ಕೆ.ನರಸಿಂಹಮೂರ್ತಿ, ಉಪಾಧ್ಯಕ್ಷರಾದ ಬಿ.ಗಿರೀಶ್, ಖಜಾಂಚಿ ವೆಂಕಟಸ್ವಾಮಿ, ಕಾರ್ಯದರ್ಶಿ ಹೆಚ್‌ಸಿ ಮಂಜುನಾಥ್, ಘಟಕದ ಪ್ರಕಾರ ವ್ಯವಸ್ಥಾಪಕ ಎಲ್.ವಿ.ನಾಗೇಶ್ ಇತರರು ಭಾಗವಹಿಸಿದ್ದರು.

27ಮಾಗಡಿ1 :

ಮಾಗಡಿ ಸರ್ಕಾರಿ ಬಸ್ ಡಿಪೋದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿ ರಾಮನಗರ ವಿಭಾಗದಿಂದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕಸಾಪ ನಿಕಟಪೂರ್ವ ಅಧ್ಯಕ್ಷರಾದ ಡಾ. ಮನು ಬಳಿಗಾರ್ ಉದ್ಘಾಟಿಸಿದರು.

PREV

Recommended Stories

ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''