- ನೂರಕ್ಕೂ ಹೆಚ್ಚು ಕವಿಗಳಿಂದ ಕವನ ವಾಚನ: ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ
ಕನ್ನಡಪ್ರಭ ವಾರ್ತೆ ಜಗಳೂರು
ಕನ್ನಡ ರಾಜ್ಯೋತ್ಸವ ಅಂಗವಾಗಿ ಹಾಗೂ ‘ಶುಕ್ರದೆಸೆ’ ಕನ್ನಡ ಪತ್ರಿಕೆ ಮತ್ತು ಶುಕ್ರದೆಸೆ ನ್ಯೂಸ್ ಮೀಡಿಯಾದ 5ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನ.29ರಂದು ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಪತ್ರಿಕೆ ಸಂಪಾದಕ ಎಂ. ರಾಜಪ್ಪ ವ್ಯಾಸಗೊಂಡನಹಳ್ಳಿ ತಿಳಿಸಿದರು.ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕವಿಗೋಷ್ಠಿ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಎನ್.ಟಿ. ಎರ್ರಿಸ್ವಾಮಿ ವಹಿಸಲಿದ್ದಾರೆ. ಕವಿ ಪಿ.ಎಲ್. ಮಂಜುನಾಥ್ ಜಮ್ಮಾಪುರ ಉಸ್ತುವಾರಿ ನಿರ್ವಹಿಸಲಿದ್ದಾರೆ. ನಾಡಿನ ವಿವಿಧೆಡೆಯಿಂದ ಆಗಮಿಸುವ 100ಕ್ಕೂ ಹೆಚ್ಚು ಹಿರಿಯ ಹಾಗೂ ಯುವ ಕವಿಗಳು, ಕವಯಿತ್ರಿಯರು ಕವನ ವಾಚನ ಮಾಡಲಿದ್ದಾರೆ. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲಾಗುವುದು. ಕೆಚ್ಚೇನಹಳ್ಳಿ ವೃಷಭೇಂದ್ರ ಮತ್ತು ತಂಡದವರಿಂದ ಕನ್ನಡ ನಾಡು-ನುಡಿಯ ಗೀತಗಾಯನ ನಡೆಯಲಿದೆ ಎಂದರು.
ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅವರು ಜ್ಯೋತಿ ಬೆಳಗಿಸುವ ಮೂಲಕ ಸಮಾರಂಭ ಉದ್ಘಾಟಿಸಲಿದ್ದಾರೆ. ಹಿರಿಯ ಪತ್ರಕರ್ತ ಹಾಗೂ ಕಲಾಪೋಷಕ ಬಸವನಕೋಟೆ ಎಂ.ಎಚ್. ಚೌಡಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕರಾದ ಎಸ್.ವಿ. ರಾಮಚಂದ್ರ, ಎಚ್.ಪಿ. ರಾಜೇಶ್, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಂ.ಎಚ್. ಬಸವರಾಜ್, ಮಾಜಿ ಜಿಪಂ ಸದಸ್ಯ ಕೆ.ಪಿ. ಪಾಲಯ್ಯ, ಬಯಲುಸೀಮೆ ಅಭಿವೃದ್ಧಿ ಮಂಡಳಿ ನಿರ್ದೇಶಕ ಎಂ.ಡಿ. ಕೀರ್ತಿಕುಮಾರ್, ಮುಖಂಡರಾದ ಬಿಸ್ತುವಳ್ಳಿ ಬಾಬು, ಎಂ.ಬಸವರಾಜ್ ನಿಬಗೂರು, ಬರ್ಕತ್ ಸೇರಿದಂತೆ ಹಲವು ಗಣ್ಯರು ಶ್ರೀ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ ಎಂದರು.
ಬಸವನಕೋಟೆ ಎಂ.ಎಚ್. ಚೌಡಪ್ಪ, ಜಗಳೂರು ಬರಪೀಡಿತ ತಾಲೂಕಾದರೂ ಕಲೆ, ಸಾಹಿತ್ಯ ಮತ್ತು ಸಂಗೀತಕ್ಕೆ ಇಲ್ಲಿ ಎಂದಿಗೂ ಬರವಿಲ್ಲ. ಈ ನೆಲದ ಸಾಂಸ್ಕೃತಿಕ ಶ್ರೀಮಂತಿಕೆ ಎತ್ತಿಹಿಡಿಯುವ ನಿಟ್ಟಿನಲ್ಲಿ ಪತ್ರಿಕೆ ವಾರ್ಷಿಕೋತ್ಸವ ಹಾಗೂ ಕನ್ನಡ ಹಬ್ಬವನ್ನು ನಾವೆಲ್ಲರೂ ಒಗ್ಗೂಡಿ ಸಂಭ್ರಮಿಸೋಣ. ಸಾಹಿತ್ಯಪ್ರೇಮಿಗಳು ಹಾಗೂ ಭಾಷಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ತಹಸೀಲ್ದಾರ್ ಗುರುಬಸವರಾಜ್, ತಾಪಂ ಇಒ ಕೆಂಚಪ್ಪ, ಸಿಪಿಐ ಸಿದ್ದರಾಮಯ್ಯ, ಪಪಂ ಮುಖ್ಯಾಧಿಕಾರಿ ಲೋಕ್ಯಾ ನಾಯ್ಕ್, ಚಳ್ಳಕೆರೆಯ ಹಿರಿಯ ಸಾಹಿತಿ ಕೊರ್ಲಕುಂಟೆ ತಿಪ್ಪೇಸ್ವಾಮಿ, ವಕೀಲ ಆರ್. ಓಬಳೇಶ್, ಕಾ.ನಿ.ಪ. ಅಧ್ಯಕ್ಷ ಲೋಕೇಶ್ ಐಹೊಳೆ, ಎಸ್ಸಿ/ ಎಸ್ಟಿ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಎಚ್.ಬಸವರಾಜ್, ಕಸಾಪ ಪ್ರಧಾನ ಕಾರ್ಯದರ್ಶಿ ಮಾರಪ್ಪ ನಾಯಕ, ಸಾಹಿತಿ ನಿಬಗೂರು ರಾಜಪ್ಪ, ಪಪಂ ಮಾಜಿ ಅಧ್ಯಕ್ಷ ನಾಗೇಂದ್ರ ರೆಡ್ಡಿ, ಮುಖಂಡರಾದ ಎಚ್.ಹನುಮಂತಪ್ಪ, ರುದ್ರೇಶ್, ಮರೇನಹಳ್ಳಿ ಬಸವರಾಜ್, ಮಹೇಶ್ವರಪ್ಪ, ಡಿಎಸ್ಎಸ್ ಶಂಭುಲಿಂಗಪ್ಪ ಹಾಗೂ ಡಿ.ಸಿ. ಮಲ್ಲಿಕಾರ್ಜುನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
- - -
ರಾಜ್ಯೋತ್ಸವ ಕಾರ್ಯಕ್ರಮ ಕುರಿತು ಎಂ.ರಾಜಪ್ಪ ವ್ಯಾಸಗೊಂಡನಹಳ್ಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.