ಜ್ಞಾನಸಾಗರದ ಕನ್ನಡದ ಮನಸ್ಸುಗಳಿಂದ ರಾಜ್ಯೋತ್ಸವ

KannadaprabhaNewsNetwork |  
Published : Nov 02, 2025, 02:30 AM IST
1ಎಚ್ಎಸ್ಎನ್16 :  | Kannada Prabha

ಸಾರಾಂಶ

ನಮ್ಮ ಭಾಷೆ ಪ್ರಪಂಚದ ಭಾಷೆಗಳ ಪಟ್ಟಿಯಲ್ಲಿ ಮೊದಲ ಮೂವತ್ತು ಭಾಷೆಗಳಲ್ಲಿ ಒಂದಾಗಿರುವುದು ಹೆಮ್ಮೆಯ ವಿಚಾರ ಎಂದರು. ಕನ್ನಡಕ್ಕಾಗಿ ಕೈಯೆತ್ತು ನಿನ್ನ ಕೈ ಕಲ್ಪವೃಕ್ಷವಾಗುತ್ತದೆ ಎಂಬ ನುಡಿಯೊಂದಿಗೆ ಈ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸಿ ಗೌರವ ಸಮರ್ಪಿಸಿದರು. ಕನ್ನಡ ರಾಜ್ಯೋತ್ಸವ ಸಮಾರಂಭಗಳು ನಮ್ಮ ರಾಜ್ಯದಲ್ಲಷ್ಟೇ ಅಲ್ಲದೇ ಹೊರ ರಾಜ್ಯಗಳಲ್ಲಿ, ಹೊರದೇಶಗಳಲ್ಲಿಯೂ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ನಮ್ಮ ಮಾತೃಭಾಷೆ ಕನ್ನಡವನ್ನು ಉಳಿಸುವ, ಬೆಳಸುವ, ಬಳಸುವ ಸಂಕಲ್ಪ ಹೊಂದಬೇಕು ಎಂದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಪಟ್ಟಣದ ಪ್ರತಿಷ್ಠಿತ ವಿದ್ಯಾ ಸಂಸ್ಥೆ ಜ್ಞಾನಸಾಗರದಲ್ಲಿ ೭೦ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನಾಗೇಶ್ ಎಜುಕೇಷನ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಡಾ. ಕೆ. ನಾಗೇಶ್ ಅವರು ರಾಷ್ಟ್ರಧ್ವಜ ಹಾಗೂ ನಾಡ ಬಾವುಟ ಧ್ವಜಾರೋಹಣ ನೆರವೇರಿಸಿದರು. ರಾಜ್ಯೋತ್ಸವವನ್ನು ಕುರಿತು ಮಾತನಾಡಿದ ಅವರು, ನಮ್ಮ ಭಾಷೆ ಪ್ರಪಂಚದ ಭಾಷೆಗಳ ಪಟ್ಟಿಯಲ್ಲಿ ಮೊದಲ ಮೂವತ್ತು ಭಾ?ಗಳಲ್ಲಿ ಒಂದಾಗಿರುವುದು ಹೆಮ್ಮೆಯ ವಿಚಾರ ಎಂದರು. ಕನ್ನಡಕ್ಕಾಗಿ ಕೈಯೆತ್ತು ನಿನ್ನ ಕೈ ಕಲ್ಪವೃಕ್ಷವಾಗುತ್ತದೆ ಎಂಬ ನುಡಿಯೊಂದಿಗೆ ಈ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸಿ ಗೌರವ ಸಮರ್ಪಿಸಿದರು. ಕನ್ನಡ ರಾಜ್ಯೋತ್ಸವ ಸಮಾರಂಭಗಳು ನಮ್ಮ ರಾಜ್ಯದಲ್ಲಷ್ಟೇ ಅಲ್ಲದೇ ಹೊರ ರಾಜ್ಯಗಳಲ್ಲಿ, ಹೊರದೇಶಗಳಲ್ಲಿಯೂ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ನಮ್ಮ ಮಾತೃಭಾಷೆ ಕನ್ನಡವನ್ನು ಉಳಿಸುವ, ಬೆಳಸುವ, ಬಳಸುವ ಸಂಕಲ್ಪ ಹೊಂದಬೇಕು ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಭಾರತಿ ನಾಗೇಶ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸರ್ವರಿಗೂ ಶುಭಾಶಯ ತಿಳಿಸಿದರು. ವಿದ್ಯಾರ್ಥಿಗಳು ನಾಡಿನ ಹಿರಿಮೆಯನ್ನು ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿ ನೆರೆದಿದ್ದ ಎಲ್ಲರನ್ನು ರಂಜಿಸಿದರು.

ಕಾರ್ಯಕ್ರಮದಲ್ಲಿ ನಾಗೇಶ್ ಸಮೂಹ ಶಿಕ್ಷಣ ಸಂಸ್ಥೆಗಳ ಡೀನ್ ಡಾ. ಸುಜಾ ಫಿಲಿಫ್, ಆಡಳಿತಾಧಿಕಾರಿ ಫಿಲಿಪ್, ಉಪ ಪ್ರಾಂಶುಪಾಲ ಡಾ. ನವೀನ್ ಆರಾಧ್ಯ, ಫಿರೋಜ್ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ