ಹೊನ್ನಾಳಿ: ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದಿಂದ ಪಟ್ಟಣದ ಪುರಸಭೆ ಆವರಣದಲ್ಲಿನ ಕನಕ ರಂಗಮಂದಿರದಲ್ಲಿ ನ.27 ರಂದು ಸಂಜೆ 4ಕ್ಕೆ 69ನೇ ಅದ್ಧೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣ ವೇದಿಕೆ ತಾಲೂಕು ಅಧ್ಯಕ್ಷ ಮಂಜುನಾಥ್.ಜೆ ತಿಳಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕಾರ್ಯಕ್ರಮದ ಕರಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಹಿರೇಕಲ್ಮಠದ ಡಾ.ಒಡೆಯರ ಚನ್ನಮಲ್ಲಿಕಾರ್ಜನ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಶಾಸಕ ಡಿ.ಜಿ.ಶಾಂತನಗೌಡ ನೆರವೆರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ.ರ.ವೇ ಮತ್ತು ಯುವ ಸೇನೆ ಸಂಸ್ಥಾಪಕ ಅಧ್ಯಕ್ಷ ಹರೀಶ್ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.ಕನ್ನಡ ಮಾತೆ ಭವನೇಶ್ವರಿ ಭಾವಚಿತ್ರಕ್ಕೆ ದಾವಣಗೆರೆ ಇನ್‌ಸೈಟ್ ತರಬೇತಿ ಸಂಸ್ಥೆಯ ಸಂಸ್ಥಾಪಕ ಜಿ.ಬಿ.ವಿನಯಕುಮಾರ ಪುಷ್ಪಾರ್ಚನೆ ಮಾಡಲಿದ್ದು, ಕಾಗ್ರೆಸ್‌ನ ಹಿರಿಯ ಮುಖಂಡ ಬಿ.ಸಿದ್ದಪ್ಪ ಅವರು ಅಭಿನಂದನೆ ಪತ್ರವಿತರಣೆ ಮಾಡಲಿದ್ದಾರೆ ಎಂದರು.
ಅತಿಥಿಗಳಾಗಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ, ಮುಖಂಡರಾದ ಎಚ್.ಬಿ.ಶಿವಯೋಗಿ, ಎಚ್.ಎ.ಉಮಾಪತಿ, ಎಚ್.ಎ.ನರಸಿಂಹಪ್ಪ, ಬಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್, ಜಿ.ಪಂ ಮಾಜಿ ಸದಸ್ಯ ಎಂ.ಆರ್.ಮಹೇಶ್, ಪುರಸಭೆ ಅಧ್ಯಕ್ಷ ಎ.ಕೆ.ಮೈಲಪ್ಪ, ಉಪಾಧ್ಯಕ್ಷೆ ಸಾವಿತ್ರಮ್ಮ ವಿಜೇಂದ್ರಪ್ಪ, ಉಪ ವಿಭಾಗಾಧಿಕಾರಿ ಅಭಿಷೇಕ್, ಹೊನ್ನಾಳಿ ತಹಸೀಲ್ದಾರ ಪಟ್ಟರಾಜಗೌಡ, ನ್ಯಾಮತಿ ತಹಸೀಲ್ದಾರ ಗೋವಿಂದಪ್ಪ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮುರುಗಪ್ಪಗೌಡ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಅವಳಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಕಾರ್ಯಕ್ರಮದಲ್ಲಿ ವಿಶೇಷವಾಗಿ ಸನ್ಮಾನಿಸಲಾಗುವುದು. ವೇದಿಕೆ ಕಾರ್ಯಕ್ರಮದ ಬಳಿಕ ಶಿವಮೊಗ್ಗ, ಭದ್ರಾವತಿ ಯ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದರು. ಈ ಸಂದರ್ಭದಲ್ಲಿ ಕ.ರ,ವೇ ಗೌರವಧ್ಯಕ್ಷ ಜಿ.ಎಚ್.ತಮ್ಮಣ್ಣ, ಉಪಾಧ್ಯಕ್ಷ ಡಿ.ಆರ್.ದೇವರಾಜ್, ಪ್ರಧಾನ ಕಾರ್ಯದರ್ಶಿ ಹರೀಶ್.ಎಚ್.ಕೆ ಹಾಗೂ ಬೀರಪ್ಪ ಸೇರಿದಂತೆ ಅನೇಕ ಪದಾಧಿಕಾರಿಗಳು ಇದ್ದರು.