ದಾಬಸ್‌ಪೇಟೆ: ಚಿಕ್ಕಬಳ್ಳಾಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ನಡೆದಾಡುವ ದೇವರು ಶ್ರೀ ಡಾ. ಶಿವಕುಮಾರ ಮಹಾಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು, ಶ್ರೀ ಸಿದ್ಧಲಿಂಗ ಸ್ವಾಮೀಜಿ ಹಾಗೂ ಕಿರಿಯ ಶ್ರೀಗಳ ಆಶೀರ್ವಾದ ಪಡೆದರು. ಅವರಿಗೆ ಶಾಸಕರಾದ ಎನ್.ಶ್ರೀನಿವಾಸ್ ಮತ್ತು ಶರತ್ ಬಚ್ಚೇಗೌಡ ಸಾಥ್ ನೀಡಿದರು.
ಶಾಸಕ ಎನ್.ಶ್ರೀನಿವಾಸ್ ಮಾತನಾಡಿ, ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಯುವ ಅಭ್ಯರ್ಥಿ ರಕ್ಷಾರಾಮಯ್ಯ ಗೆಲವು ಸಾಧಿಸಲಿದ್ದಾರೆ. ಕಾರ್ಯಕರ್ತರ ಒಗ್ಗಟ್ಟು ಇಡೀ ಕ್ಷೇತ್ರದಲ್ಲಿ ಕಾಣುತ್ತಿದೆ. ನಮ್ಮ ಪಕ್ಷದ ಮುಖಂಡರೆಲ್ಲರು ಪ್ರತಿ ಮನೆಗೆ ಭೇಟಿ ನೀಡಿ ನಮ್ಮ ಪಕ್ಷದ ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ತಿಳಿಸಿಕೊಟ್ಟು ಮತ ನೀಡುವಂತೆ ಮನವಿ ಮಾಡೋಣ ಎಂದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ರಾಜೇಂದ್ರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು, ಬ್ಲಾಕ್ ಅಧ್ಯಕ್ಷ ಜಗದೀಶ್, ಅಗಳಕುಪ್ಪೆ ಗೋವಿಂದರಾಜು, ನೆ.ಯೋ.ಪ್ರಾಧಿಕಾರ ಅಧ್ಯಕ್ಷ ನಾರಾಯಣಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಶಿವಕುಮಾರ್, ಸದಸ್ಯರಾದ ರಂಗಸ್ವಾಮಿ, ಪ್ರಕಾಶ್ ಬಾಬು, ವಕೀಲ ಹನುಮಂತೇಗೌಡ, ಅಂಚೆಮನೆ ಪ್ರಕಾಶ್, ತಟ್ಟೆಕೆರೆ ಬಾಬು, ಸಿದ್ದರಾಜು, ಯೋಗನಂದೀಶ್, ದಿನೇಶ್ ನಾಯಕ್, ಖಲೀಂ ಉಲ್ಲಾ, ಹನುಮಂತರಾಜು, ಅಂಗಡಿ ಚಂದ್ರಣ್ಣ, ಮನು ಪ್ರಸಾದ್, ಇತರರು ಹಾಜರಿದ್ದರು. ಫೋಟೋ 1 : ಚಿಕ್ಕಬಳ್ಳಾಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವ ಸಿದ್ದೇಶ್ವರ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಈ ವೇಳೆ ಶಾಸಕರಾದ ಎನ್.ಶ್ರೀನಿವಾಸ್, ಶರತ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ ಇತರರಿದ್ದರು.