22, 23ರಂದು ರಾಮ ಕ್ಷತ್ರಿಯರ ಸಮಾವೇಶ ‘ಕ್ಷಾತ್ರ ಸಂಗಮ’

KannadaprabhaNewsNetwork |  
Published : Feb 21, 2025, 12:47 AM IST
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಕೃಷ್ಣ ಪಾಲೇಮಾರ್‌. | Kannada Prabha

ಸಾರಾಂಶ

ರಾಮ ಕ್ಷತ್ರಿಯರ ಸಮಾವೇಶ ‘ಕ್ಷಾತ್ರ ಸಂಗಮ-3’ ಫೆ.22 ಮತ್ತು 23ರಂದು ಮೋರ್ಗನ್ಸ್ ಗೇಟ್‌ನಲ್ಲಿರುವ ಪಾಲೆಮಾರ್ ಗಾರ್ಡನ್‌ನಲ್ಲಿ ನಡೆಯಲಿದೆ. ಸಮಾವೇಶದಲ್ಲಿ ರಾಮ ಕ್ಷತ್ರಿಯ ಸಮಾಜದ ಎಲ್ಲ ಹಿರಿಯ, ಕಿರಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಮಾಜದ ಯುವಕರು, ಪುರುಷರು- ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ರಾಮ ಕ್ಷತ್ರಿಯ ಸೇವಾ ಸಂಘ ಮಂಗಳೂರು ನೇತೃತ್ವದಲ್ಲಿ ರಾಮ ಕ್ಷತ್ರಿಯರ ಸಮಾವೇಶ ‘ಕ್ಷಾತ್ರ ಸಂಗಮ-3’ ಫೆ.22 ಮತ್ತು 23ರಂದು ಮೋರ್ಗನ್ಸ್ ಗೇಟ್‌ನಲ್ಲಿರುವ ಪಾಲೆಮಾರ್ ಗಾರ್ಡನ್‌ನಲ್ಲಿ ನಡೆಯಲಿದೆ.

ಸಮಾವೇಶದಲ್ಲಿ ರಾಮ ಕ್ಷತ್ರಿಯ ಸಮಾಜದ ಎಲ್ಲ ಹಿರಿಯ, ಕಿರಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಮಾಜದ ಯುವಕರು, ಪುರುಷರು- ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ರಾಮಕ್ಷತ್ರಿಯ ಸಮಾಜದ ಸುಮಾರು 52 ಸಂಘಗಳ ಪ್ರತಿನಿಧಿಗಳು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ ಎಂದು ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ ಮುರಳೀಧರ ಸಿ.ಎಚ್. ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಫೆ.22ರಂದು ಬೆಳಗ್ಗೆ 9ರಿಂದ ರಾಮತಾರಕ ಯಜ್ಞ ಮತ್ತು ಜಪ ನಡೆಯಲಿದೆ. ಬಳಿಕ ಹನುಮಾನ್ ಚಾಲೀಸ ಕಂಠಪಾಠ ಸ್ಪರ್ಧೆ, ಪುಷ್ಪ ಜೋಡಣೆ, ರಂಗದಲ್ಲಿ ಸ್ಪರ್ಧೆಗಳು ನಡೆಯಲಿವೆ. ಜತೆಗೆ ವಧುವರರ ಅನ್ವೇಷಣೆ ಮತ್ತು ಉದ್ದಿಮೆದಾರರ ಸಮಾವೇಶ ಇರಲಿದೆ. ಸಂಜೆ 4 ಗಂಟೆಯಿಂದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮಾಜಿ ಸಚಿವ, ಕಾರ್ಯಕ್ರಮದ ಪ್ರಧಾನ ಸಲಹೆಗಾರ ಜೆ. ಕೃಷ್ಣ ಪಾಲೆಮಾರ್ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಮುರಳೀಧರ್ ಸಿ.ಎಚ್. ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ‘ಕರ್ನಾಟಕ ವೈಭವ’ ಎಂಬ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಪ್ರಧಾನ ಸಂಚಾಲಕ ಜೆ.ಕೆ. ರಾವ್ ಮಾತನಾಡಿ, ಫೆ.23ರಂದು ರಾಮಕ್ಷತ್ರಿಯ ಸಮಾಜದ ಊರ, ಪರವೂರ ವಿವಿಧ ಸಂಘಗಳ ಸದಸ್ಯರಿಂದ ಪ್ರತಿಭಾ ಸ್ಪರ್ಧೆ, ರಾಮಕ್ಷತ್ರಿಯರ ಪಾರಂಪರಿಕ ಸಸ್ಯಹಾರಿ ಆಹಾರೋತ್ಸವ ಸ್ಪರ್ಧೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ ಯುವ ಮತ್ತು ಮಹಿಳಾ ಸಮ್ಮೇಳನ, 3ರಿಂದ ವಿಚಾರ ಗೋಷ್ಠಿ ನಡೆಯಲಿದೆ. ಸಂಜೆ 5ರಿಂದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಜೆ. ಕೃಷ್ಣ ಪಾಲೆಮಾರ್ ವಹಿಸುವರು. ಸಮಾವೇಶಕ್ಕೆ ವಿಶೇಷ ಅತಿಥಿಯಾಗಿ ಮೈಸೂರು ಮಹಾರಾಜ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಉಮನಾಥ್ ಕೋಟ್ಯಾನ್ ಭಾಗವಹಿಸಲಿದ್ದಾರೆ ಎಂದರು.

ಮಾಜಿ ಸಚಿವ, ಕಾರ್ಯಕ್ರಮದ ಪ್ರಧಾನ ಸಲಹೆಗಾರ ಜೆ. ಕೃಷ್ಣ ಪಾಲೆಮಾರ್ ಮಾತನಾಡಿ, ಸಮಾಜವನ್ನು ಒಟ್ಟುಗೂಡಿಸುವುದು ಮತ್ತು ಯುವ ಜನತೆಗೆ ನಮ್ಮ ಸಮಾಜದ ಸಂಸ್ಕೃತಿ, ಆಚಾರ, ವಿಚಾರ, ಆಚರಣೆ, ಪರಂಪರೆಯನ್ನು ತಿಳಿಯಪಡಿಸುವುದು ಸಮಾವೇಶದ ಉದ್ದೇಶ ಎಂದು ವಿವರಿಸಿದರು.

ಸಂಘದ ಗೌರವಾಧ್ಯಕ್ಷ ರವೀಂದ್ರ ಕೆ., ಉಪಾಧ್ಯಕ್ಷ ಜಯಕರ ಕೆ., ಕಾರ್ಯದರ್ಶಿ ರವೀಂದ್ರ ರಾವ್ ಕೆ., ಕೋಶಾಧಿಕಾರಿ ದಿನೇಶ್ ಕುಮಾರ್ ಬೇಕಲ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''