ಜಿಲ್ಲೆಯಾದ್ಯಂತ ಸಂಭ್ರಮದ ರಾಮನವಮಿ

KannadaprabhaNewsNetwork |  
Published : Mar 28, 2026, 01:15 AM IST
99999 | Kannada Prabha

ಸಾರಾಂಶ

ಕಲ್ಪತರು ನಾಡಿನ ಶ್ರೀರಾಮ ಹಾಗೂ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಶ್ರೀರಾಮನವಮಿಯನ್ನು ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ತುಮಕೂರುಕಲ್ಪತರು ನಾಡಿನ ಶ್ರೀರಾಮ ಹಾಗೂ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಶ್ರೀರಾಮನವಮಿಯನ್ನು ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶ್ರೀರಾಮ ಮತ್ತು ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಇಂದು ಮುಂಜಾನೆಯಿಂದಲೇ ಶ್ರೀರಾಮನಾಮ ಸ್ಮರಣೆ ಮೊಳಗಿದವು.

ನಗರದ ಬಾರ್‌ಲೈನ್ ರಸ್ತೆಯಲ್ಲಿರುವ ಶ್ರೀರಾಮ ದೇವಾಲಯದಲ್ಲಿ ಶ್ರೀರಾಮನಮವಿ ಅಂಗವಾಗಿ ಇಂದು ಶ್ರೀಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು. ಶ್ರೀರಾಮನವಮಿ ಪ್ರಯುಕ್ತ ಶ್ರೀರಾಮ ದೇವಾಲಯಕ್ಕೆ ಶಾಸಕ ಜ್ಯೋತಿಗಣೇಶ್ ಭೇಟಿ ನೀಡಿ ದೇಗುಲದಲ್ಲಿ ನೆರವೇರಿದ ಧಾರ್ಮಿಕ ಪೂಜಾ ಕಾರ್ಯಗಳಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಅದೇ ರೀತಿ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ, ಶೆಟ್ಟಿಹಳ್ಳಿ ಗೇಟ್‌ನಲ್ಲಿರುವ ಅಭಯ ಆಂಜನೇಯಸ್ವಾಮಿ ದೇವಾಲಯ, ಕೋಟೆ ಆಂಜನೇಯಸ್ವಾಮಿ ದೇವಾಲಯ ಸೇರಿದಂತೆ ವಿವಿಧೆಡೆ ಇರುವ ಶ್ರೀರಾಮ ಹಾಗೂ ಆಂಜನೇಯ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದ್ದು, ಶ್ರೀರಾಮನಮಮಿಯನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ಶ್ರೀರಾಮ ಹಾಗೂ ಆಂಜನೇಯ ದೇವಾಲಯಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ಶ್ರೀರಾಮನವಮಿ ಅಂಗವಾಗಿ ದೇವಾಲಯಗಳಲ್ಲಿ ಪೂಜೆಯ ನಂತರ ಭಕ್ತಾದಿಗಳಿಗೆ ಪಾನಕ, ಮಜ್ಜಿಗೆ, ಹೆಸರುಬೇಳೆ ಹಂಚಲಾಯಿತು. ಶಾಸಕ ಜ್ಯೋತಿ ಗಣೇಶ್ ಶ್ರೀರಾಮಂದಿರ ಸೇರಿದಂತೆ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕೆಲವು ಸಂಘ ಸಂಸ್ಥೆಗಳು, ಯುವಕ ಸಂಘಗಳು ಸಹ ಶ್ರೀರಾಮನಮವಿ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಭಕ್ತಾದಿಗಳಿಗೆ ಹಬ್ಬದ ವಿಶೇಷವಾಗಿ ಪಾನಕ, ಮಜ್ಜಿಗೆ, ಹೆಸರು ಬೇಳೆ, ಅನ್ನದಾಸೋಹ ವ್ಯವಸ್ಥೆ ಮಾಡಿದ್ದು ಸಹ ಗಮನ ಸೆಳೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನಗಣತಿ 2027ಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ
ವೇಣುಗೋಪಾಲಸ್ವಾಮಿ ದೇಗುಲದಲ್ಲಿ ಪೂಜೆ