ಇತ್ತೀಚೆಗೆ ಮಾದಗುಡನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ 5 ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಒಟ್ಟು 10 ಸ್ಥಾನಗಳ ಪೈಕಿ 8 ಸ್ಥಾನಗಳಲ್ಲಿ ಜೆಡಿಎಸ್ ಬೆಂಬಲಿತ ನಿರ್ದೇಶಕರು ಆಯ್ಕೆಗೊಂಡಿದ್ದರು. ಸಂಘದಲ್ಲಿ ಬಹುಮತ ಹೊಂದಿರುವ ಜೆಡಿಎಸ್ ಬೆಂಬಲಿತ ನಿರ್ದೇಶಕರು ಸರ್ವಾನುಮತದಿಂದ ಅಧ್ಯಕ್ಷ ಸ್ಥಾನಕ್ಕೆ ರಾಮಚಂದ್ರು ಅವರನ್ನು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.
ಬಾಗೂರು: ಹೋಬಳಿಯ ಮಾದಗುಡನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ರಾಮಚಂದ್ರ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಅನುಸೂಯ ಅವಿರೋಧವಾಗಿ ಆಯ್ಕೆಯಾದರು.
ಇತ್ತೀಚೆಗೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ 5 ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಒಟ್ಟು 10 ಸ್ಥಾನಗಳ ಪೈಕಿ 8 ಸ್ಥಾನಗಳಲ್ಲಿ ಜೆಡಿಎಸ್ ಬೆಂಬಲಿತ ನಿರ್ದೇಶಕರು ಆಯ್ಕೆಗೊಂಡಿದ್ದರು. ಸಂಘದಲ್ಲಿ ಬಹುಮತ ಹೊಂದಿರುವ ಜೆಡಿಎಸ್ ಬೆಂಬಲಿತ ನಿರ್ದೇಶಕರು ಸರ್ವಾನುಮತದಿಂದ ಅಧ್ಯಕ್ಷ ಸ್ಥಾನಕ್ಕೆ ರಾಮಚಂದ್ರು ಅವರನ್ನು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಬೂದೇಶ್ ಮಾತನಾಡಿ ತಾಲೂಕಿನಲ್ಲಿ ಡೇರಿ ಉದ್ಯಮ ಹೆಚ್ಚು ಅಭಿವೃದ್ಧಿ ಹೊಂದಲು ಶಾಸಕರ ಪರಿಶ್ರಮವೇ ಕಾರಣ ಇದರ ಜೊತೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮೂಲಕ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಕೊಡಿಸುವ ಮೂಲಕ ರೈತರ ಕಷ್ಟ ಸುಖಗಳಿಗೆ ಶಾಸಕರು ಸ್ಪಂದಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಲು ಕಾರಣವಾಗಿತ್ತು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಶವೇಗೌಡ, ಲೋಲಣ್ಣ, ದಿನೇಶ್, ಕಾಳೇಗೌಡ, ಪ್ರಕಾಶ್, ಶಿವಣ್ಣ, ಮಮತಾ, ಮುಖಂಡರಾದ ಮಾಜಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ಬೂದೇಶ್, ರಂಗೇಗೌಡ, ವೆಂಕಟರಾಮು, ಶಿವೇಗೌಡ, ರಂಗೇಗೌಡ, ಮಲ್ಲಿಕ್, ಲತಾ ಶಂಕರ್ ಸೇರಿದಂತೆ ಸಂಘದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.