ಬಂಟ್ವಾಳ: ಪಂಚಾಯತ್ ರಾಜ್ ವ್ಯವಸ್ಥೆ ಮೂಲಕ ಗ್ರಾಮೀಣ ಜನರಿಗೆ ಅಧಿಕಾರ ವಿಕೇಂದ್ರೀಕರಣ ಮಾಡುವ ಉದ್ದೇಶದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮಂಡಿಸಿದ್ದ ಪಂಚಾಯತ್ ರಾಜ್ ತಿದ್ದುಪಡಿ ಮಸೂದೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ಆದರೆ ನಂತರ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೊಂಡು ಗ್ರಾಮೀಣ ಜನರ ಸಬಲೀಕರಣಕ್ಕೆ ಮಹತ್ವದ ಹೆಜ್ಜೆಯಾಯಿತು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಸಭೆಯ ಮುಖ್ಯ ಭಾಷಣಕಾರ ಸುಧೀರ್ ಕುಮಾರ್ ಮರೋಳಿ ಮಾತನಾಡಿ, ಕೇಂದ್ರ ಸರ್ಕಾರದ ನೀತಿಗಳ ಪರಿಣಾಮವಾಗಿ ಬಡ ಮತ್ತು ಮಧ್ಯಮ ವರ್ಗದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು. ಕಾರ್ಯಕ್ರಮದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಎಸ್. ಗಟ್ಟಿ, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಾಲೆಟ್ ಪಿಂಟೋ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ಸೇರಿದಂತೆ ಹಲವು ನಾಯಕರು ಮಾತನಾಡಿದರು.
ಈ ಸಂದರ್ಭದಲ್ಲಿ ಚಂದ್ರಪ್ರಕಾಶ್ ಶೆಟ್ಟಿ, ಅಶ್ವನಿ ಕುಮಾರ್ ರೈ, ಬಿ. ಪದ್ಮಶೇಖರ್ ಜೈನ್, ಪಿ.ಪಿ. ವರ್ಗೀಸ್, ಶಾಹುಲ್ ಹಮೀದ್, ಸರ್ವೋತ್ತಮ ಗೌಡ ನೆಲ್ಯಾಡಿ, ದಿನೇಶ್ ಮೂಳೂರು, ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್, ಅರುಣ್ ಕುಮಾರ್ ಶೆಟ್ಟಿ, ಪದ್ಮನಾಭ ಸಾಲ್ಯಾನ್, ರಾಧಾಕೃಷ್ಣ ಬೊಲ್ಲೂರು, ಅಭಿಲಾಷ್ ಪಿ.ಕೆ., ಪ್ರಶಾಂತ್ ಕಾಜವ, ರಮೇಶ್ ಶೆಟ್ಟಿ, ಕುಮಾರಿ ಅಪ್ಪಿ, ಉಷಾ ಅಂಚನ್, ಜಯಂತಿ ಪೂಜಾರಿ, ಸುಧೀರ್ ಕುಮಾರ್ ಶೆಟ್ಟಿ, ಐಡಾ ಸುರೇಶ್, ಶೈಲಜಾ ರಾಜೇಶ್ ಹಾಗೂ ಅಬ್ದುಲ್ ರಹಿಮಾನ್ ಉಪಸ್ಥಿತರಿದ್ದರು.ಜಗದೀಶ್ ಕೊಯಿಲ ಸ್ವಾಗತಿಸಿದರು. ಕುಳಾಲು ಸುಭಾಶ್ಚಂದ್ರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೃಂದಾ ಪೂಜಾರಿ ವಂದಿಸಿದರು. ಅಬ್ದುಲ್ ರಝಾಕ್ ಕುಕ್ಕಾಜೆ ನಿರೂಪಿಸಿದರು.