ಕನ್ನಡಪ್ರಭ ವಾರ್ತೆ ಮೈಸೂರು
ದೈತ್ಯ ಏಕಸ್ವಾಮ್ಯ ಬಂಡವಾಳಶಾಹಿಗಳ ಅಣತಿಯ ಮೇರೆಗೆ ಕೇಂದ್ರ ಬಿಜೆಪಿ ಸರ್ಕಾರವು ದುಡಿಯುವ ಜನರ ಜೀವನ ಮತ್ತು ಜೀವನೋಪಾಯದ ಮೇಲೆ ನಿರಂತರ ಫ್ಯಾಸಿಸ್ಟ್ ದಾಳಿಗಳನ್ನು ಎಸುಗುತ್ತಿದೆ. ಕಾರ್ಪೋರೇಟ್ ಗಳ ಹಿತಾಸಕ್ತಿಗಾಗಿ ದುಡಿಯುವ ಜನರ ಮೇಲೆ ವಾಸ್ತವವಾಗಿ ಗುಲಾಮಗಿರಿಯ ಷರತ್ತುಗಳನ್ನು ಹೇರುವ ಸಮಗ್ರ ನೀಲನಕ್ಷೆಗೆ ಅನುಗುಣವಾಗಿ ಸರ್ಕಾರ ಮುಂದಾಗಿದೆ ಎಂದು ಅವರು ಆರೋಪಿಸಿದರು.
29 ಕಾರ್ಮಿಕ ಪರವಾದ ಕಾನೂನುಗಳನ್ನು ಹರಣಗೊಳಿಸಿ ಕಾರ್ಮಿಕ ವಿರೋಧಿ 4 ಕಾಯಿದೆಗಳನ್ನು ಜಾರಿಗೆ ತರಲು ಮುಂದಾಗಿದೆ. ಇದರಿಂದ ಕಾರ್ಮಿಕರು ತಮ್ಮ ಬಹುತೇಕ ಹಕ್ಕುಗಳನ್ನು ಕಳೆದುಕೊಳ್ಳಲಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.ಅಸ್ತಿತ್ವದಲ್ಲಿರುವ ಉದ್ಯೋಗಗಳನ್ನು ಕಡಿತಗೊಳಿಸಿ, ಕಾಯಂ ಉದ್ಯೋಗಗಳನ್ನು ಶಾಶ್ವತವಾಗಿ ರದ್ದುಗೊಳಿಸಲಾಗುತ್ತದೆ. ಗುತ್ತಿಗೆ, ಹೊರಗುತ್ತಿಗೆ, ಹೊಸದಾಗಿ ಜಾರಿಗೊಳಿಸಲಾಗುವ ನಿಗದಿತ ಅವಧಿ ಉದ್ಯೋಗ ಇತ್ಯಾದಿಗಳು ಆಳುವ ಬಂಡವಾಳಶಾಹಿ ವರ್ಗ ಮತ್ತು ಅದರ ಅಧೀನ ಸರ್ಕಾರಗಳು ತಮ್ಮ ಇಚ್ಛೆಯಂತೆ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮತ್ತು ವಜಾ ಮಾಡಲು ಕೈಗೊಂಡ ಕರಾಳ ವಿನ್ಯಾಸವಾಗಿದೆ ಎಂದು ಅವರು ಕಿಡಿಕಾರಿದರು.
ಜಂಟಿ ಸಮಿತಿಯ ಮುಖಂಡರಾದ ಎಚ್.ಆರ್. ಶೇಷಾದ್ರಿ, ಬಿ. ರಾಮಕೃಷ್ಣ, ದೇವದಾಸ್, ಚಂದ್ರಶೇಖರ ಮೇಟಿ, ಉಮಾದೇವಿ, ಪಿ.ಎಸ್. ಸಂಧ್ಯಾ, ಹರೀಶ್, ಮುದ್ದುಕೃಷ್ಣ, ಜಯರಾಂ, ಎನ್.ಕೆ. ಬಾಲಾಜಿ ರಾವ್, ಕರ್ನಾಟಕ ರಾಜ್ಯ ರೈತ ಸಂಘದ ವಿಭಾಗೀಯ ಕಾರ್ಯದರ್ಶಿ ಹೊಸಕೋಟೆ ಬಸವರಾಜ್, ಜಿಲ್ಲಾ ಕಾರ್ಯದರ್ಶಿ ಪಿ. ಮರಂಕಯ್ಯ, ಮಂಡಕಳ್ಳಿ ಮಹೇಶ್, ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ಎಚ್.ಎಂ. ಬಸವರಾಜು, ಕರ್ನಾಟಕ ರೈತ ಸಂಘದ ಕಂದೇಗಾಲ ಶ್ರೀನಿವಾಸ್, ಪ್ರಾಂತ ರೈತ ಸಂಘದ ಜಗದೀಶ್ ಸೂರ್ಯ, ಕೆ. ಬಸವರಾಜು ಮೊದಲಾದವರು ಇದ್ದರು.
-----------------eom/mys/shekar/