ಮಾಜಿ ಸಚಿವ ಹಾಗೂ ಶಾಸಕನಾಗಿ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಕ್ಷೇತ್ರದ ಅಭಿವೃದ್ಧಿ ಕಾರ್ಯ ಮಾಡುವುದು ಹೊಸತೇನು ಅಲ್ಲ. ಆದರೆ ಬಂಟ್ವಾಳ ಶಾಸಕರು ವಿಧಾನಸಭೆಯಲ್ಲಿ ಮಂಡಿಸಿರುವ ಹಕ್ಕುಚ್ಯುತಿಯಿಂದ ನನಗೆ ನೋವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
ಮಾಜಿ ಸಚಿವ ಹಾಗೂ ಶಾಸಕನಾಗಿ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಕ್ಷೇತ್ರದ ಅಭಿವೃದ್ಧಿ ಕಾರ್ಯ ಮಾಡುವುದು ಹೊಸತೇನು ಅಲ್ಲ. ಆದರೆ ಬಂಟ್ವಾಳ ಶಾಸಕರು ವಿಧಾನಸಭೆಯಲ್ಲಿ ಮಂಡಿಸಿರುವ ಹಕ್ಕುಚ್ಯುತಿಯಿಂದ ನನಗೆ ನೋವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆಯಾ ಕ್ಷೇತ್ರದ ಜನರ ಬೇಡಿಕೆಗೆ ಅನುಗುಣವಾಗಿ ಸರ್ಕಾರದಿಂದ ಅನುದಾನ ಒದಗಿಸಲಾಗುತ್ತದೆ. ಪರಿಶಿಷ್ಟ ಕಾಲನಿಗಳಿಗೆ ಅನುದಾನ ತರಿಸಿರುವುದನ್ನೇ ಮುಂದಿಟ್ಟುಕೊಂಡು ಸದನದಲ್ಲಿ ಗಲಾಟೆ ಮಾಡಿ ಹಕ್ಕುಚ್ಯುತಿ ಮಂಡಿಸಿರುವುದು ಸಂಕುಚಿತ ಮನೋಭಾವವಾಗಿದೆ ಎಂದರು.ಹಿಂದೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಹಣ ಮಂಜೂರಾಗುತ್ತಿರಲಿಲ್ಲ. ಈಗ ತಲಾ 10 ಕೋಟಿ ರು. ಶಾಸಕರಿಗೆ ಮಂಜೂರಾಗುತ್ತಿದೆ. ಶಾಸಕರು ತಮ್ಮ ವಿವೇಚನೆ ಮೇರೆಗೆ ಈ ಅನುದಾನದಲ್ಲಿ ಕಾಮಗಾರಿ ನಡೆಸಬಹುದು. ಈ ರೀತಿ ರಾಜ್ಯ ಸರ್ಕಾರದ ಅನುದಾನದಡಿ ನಡೆಸಲಾದ ಕಾಮಗಾರಿಗೆ ಕ್ಷೇತ್ರದಲ್ಲಿ ಕಟೌಟ್ ಹಾಕಲಾಗುತ್ತದೆ. ಅದರಲ್ಲಿ ಪ್ರಧಾನಿ ಮೋದಿ ಫೋಟೋ ಯಾಕೆ ಹಾಕುವುದು ಎಂದವರು ಪ್ರಶ್ನಿಸಿದರು.ಮುಖಂಡರಾದ ಶಶಿಧರ ಹೆಗ್ಡೆ, ಶುಭೋದಯ ಆಳ್ವ, ಅಪ್ಪಿ, ದಿನೇಶ್ ಕುಮಾರ್, ಸುಹಾನ್ ಆಳ್ವ, ರಮಾನಂದ ಪೂಜಾರಿ, ರಿಯಾಝ್, ಅಶೋಕ್ ಡಿ.ಕೆ., ಪ್ರೇಮಾನಂದ ಬಳ್ಳಾಲ್‌ಬಾಗ್, ವಿಕಾಸ್ ಶೆಟ್ಟಿ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.