ರಾಮಾಯಣ ಮಹಾಕಾವ್ಯ ಮಾನವೀಯತೆಯ ಪ್ರತೀಕ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

KannadaprabhaNewsNetwork |  
Published : Oct 18, 2024, 12:10 AM IST
ಕಾರವಾರದ ಡಿಸಿ ಕಚೇರಿಯಲ್ಲಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಪುರ್ಷಾರ್ಚನೆ ಸಲ್ಲಿಸಿದರು. | Kannada Prabha

ಸಾರಾಂಶ

ಸಾಧನೆಯ ಹಾದಿಗೆ ಕಷ್ಟ ಕಾರ್ಪಣ್ಯಗಳು ಅಡ್ಡಿಯಾಗಲಿದ್ದು, ಅವುಗಳನ್ನು ಎದುರಿಸಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದಲ್ಲಿ ಯಶಸ್ಸಿನ ಪ್ರತಿಫಲ ದೊರೆಯಲಿದೆ ಎಂಬುದನ್ನು ರಾಮಾಯಣದಲ್ಲಿ ಕಾಣಬಹುದು.

ಕಾರವಾರ: ಮಹರ್ಷಿ ವಾಲ್ಮೀಕಿ ಅವರು ತಾವು ರಚಿಸಿದ ರಾಮಾಯಣ ಮಹಾಕಾವ್ಯದಲ್ಲಿ ಧರ್ಮ, ಸಾಹಿತ್ಯ, ಪರಿಸರ ರಕ್ಷಣೆ, ಮಹಿಳೆಯರಿಗೆ ಗೌರವ ನೀಡುವುದು ಸೇರಿದಂತೆ ಹಲವು ಮಾನವೀಯ ಮೌಲ್ಯಗಳಿಗೆ ಮಹತ್ವ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾರದ ಮುನಿಗಳಿಂದ ಪರಿವರ್ತನೆಗೊಂಡ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯವನ್ನು ರಚಿಸಿದರು. ಎಲ್ಲರೂ ಜೀವನದಲ್ಲಿ ಸತ್ಯದ ಪರವಾಗಿ ನಿಂತುಕೊಂಡಾಗ ಮಾತ್ರ ಭವಿಷ್ಯದಲ್ಲಿ ಮುಂದೆ ಬರಲು ಸಾಧ್ಯವಿದೆ. ಸಾಧನೆಯ ಹಾದಿಗೆ ಕಷ್ಟ ಕಾರ್ಪಣ್ಯಗಳು ಅಡ್ಡಿಯಾಗಲಿದ್ದು, ಅವುಗಳನ್ನು ಎದುರಿಸಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದಲ್ಲಿ ಯಶಸ್ಸಿನ ಪ್ರತಿಫಲ ದೊರೆಯಲಿದೆ ಎಂಬುದನ್ನು ರಾಮಾಯಣದಲ್ಲಿ ಕಾಣಬಹುದು ಎಂದರು.ಜಿಲ್ಲಾ ಪೊಲೀಸ್ ವರಿಷ್ಠ ಎಂ. ನಾರಾಯಣ ಮಾತನಾಡಿ, ಮಾನವ ಸಂಬಂಧಗಳಿಗೆ ಬೆಲೆ ಕೊಡಬೇಕು. ಮಹಿಳೆಯರಿಗೆ ರಕ್ಷಣೆ, ಸಮಾನತೆ, ಸಹೋದರತ್ವ, ಗುರು- ಹಿರಿಯರಿಗೆ ಗೌರವ ನೀಡಬೇಕು ಎಂಬ ಸಾತ್ವಿಕ ಗುಣಗಳು ವಾಲ್ಮೀಕಿಯವರ ರಾಮಾಯಣದಲ್ಲಿ ಮತ್ತು ಡಾ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿವೆ ಎಂದರು.

ಶಿಕ್ಷಣ, ಉದ್ಯೋಗ, ವ್ಯಾಪಾರದಲ್ಲಿ ಹಿಂದುಳಿದ ಸಮುದಾದವರು ಮುಂದೆ ಬಂದಾಗ ಮಾತ್ರ ಸಂವಿಧಾನ ಮತ್ತು ವಾಲ್ಮೀಕಿ ಅವರ ಆಶಯಗಳು ಈಡೇರಲಿದ್ದು, ಪ್ರತಿಯೊಬ್ಬರೂ ಮಹಾನಾಯಕರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಭಾರತವನ್ನು ಜಾತ್ಯತೀತ ರಾಷ್ಟ್ರವಾಗಿ ಮಾಡೋಣ ಎಂದರು.ಶಿಕ್ಷಕ ಡಾ. ಗಣೇಶ ಬೀಷ್ಠಣ್ಣನವರ್ ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಇದೇ ವೇಳೆ ವಾಲ್ಮೀಕಿ ಸಮಾಜದ ಹಿತರಕ್ಷಣಾ ಸಂಘದ ಅಧ್ಯಕ್ಷ ನಾಗರಾಜ ತಳವಾರ ಹಾಗೂ ಶಿಕ್ಷಕ ಶಿಕ್ಷಕ ಗಣೇಶ ಬೀಷ್ಠಣ್ಣನವರ್ ಅವರನ್ನು ಗೌರವಿಸಲಾಯಿತು.

ಸಭಾ ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆಗೆ ಉಪವಿಭಾಗಾಧಿಕಾರಿ ಕನಿಷ್ಕ, ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೇಕರ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಪ್ರದರ್ಶನ ನೀಡುತ್ತಾ, ನಗರದ ಪ್ರಮುಖ ಬೀದಿಗಳ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರಕುಮಾರ ಕಾಂದೂ, ನಗರಸಭೆಯ ಪೌರಾಯುಕ್ತ ಜಗದೀಶ್ ಹುಲಗೆಜ್ಜಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಉಮೇಶ ವೈ.ಕೆ. ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು
ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ