ಹರಿಹರದಲ್ಲಿ ರಂಭಾಪುರಿ ಶ್ರೀಗಳ ಆಷಾಢ ಮಾಸ ಇಷ್ಟಲಿಂಗ ಪೂಜೆ ಕಾರ್ಯಕ್ರಮ

KannadaprabhaNewsNetwork |  
Published : Jul 15, 2025, 01:00 AM IST
12ಎಚ್‍ಆರ್‍ಆರ್1ರಂಭಾಪುರಿ ಶ್ರೀ | Kannada Prabha

ಸಾರಾಂಶ

ಬಾಳೆಹೊನ್ನೂರು ರಂಭಾಪುರಿ ಶ್ರೀಗಳ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಜಾಗೃತಿ ಸಮಾರಂಭ ಜು.14 ರಿಂದ 16ರವರೆಗೆ ನಗರದ ದೇವಸ್ಥಾನ ರಸ್ತೆಯ ಹಳೇ ಪೇಟೆ ಶ್ರೀ ಬಸವೇಶ್ವರ ದೇವಸ್ಥಾನ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

- ಹಳೇ ಪೇಟೆ ಶ್ರೀ ಬಸವೇಶ್ವರ ದೇವಸ್ಥಾನ ಸಭಾ ಭವನದಲ್ಲಿ ಆಯೋಜನೆ

- - -

ಹರಿಹರ: ಬಾಳೆಹೊನ್ನೂರು ರಂಭಾಪುರಿ ಶ್ರೀಗಳ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಜಾಗೃತಿ ಸಮಾರಂಭ ಜು.14 ರಿಂದ 16ರವರೆಗೆ ನಗರದ ದೇವಸ್ಥಾನ ರಸ್ತೆಯ ಹಳೇ ಪೇಟೆ ಶ್ರೀ ಬಸವೇಶ್ವರ ದೇವಸ್ಥಾನ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 6.30 ರಿಂದ 11 ಗಂಟೆವರೆಗೆ ಪೂಜಾ ಕಾರ್ಯಕ್ರಮ ನಡೆಯಲಿದೆ. ಸೋಮವಾರ ಬೆಳಗ್ಗೆ ಮಹಾಪೂಜೆ, ಸಂಜೆ ಧರ್ಮಜಾಗೃತಿ ಸಭೆ ನಡೆಯಿತು. 15ರಂದು ಸಂಜೆ 6.30ಕ್ಕೆ ನಡೆಯುವ ಸಭೆಯಲ್ಲಿ ಹರಪನಹಳ್ಳಿ, ತೆಗ್ಗಿನಮಠ ಸಂಸ್ಥಾನದ ವರಸದ್ಯೋಜಾತ ಶಿವಾಚಾರ್ಯ ಶ್ರೀ, ಮುಖ್ಯ ಅತಿಥಿಗಳಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ. ಚಿದಾನಂದಪ್ಪ, ತಪೋವನದ ಶಶಿಕುಮಾರ್ ಮೆಹರ್ವಾಡೆ ಮತ್ತಿತರರು ಭಾಗವಹಿಸುವರು.

16ರಂದು ಸಂಜೆ 6.30 ಗಂಟೆಯ ಸಭೆಯಲ್ಲಿ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಶ್ರೀ, ಅವಧೂತ ಕವಿ ಗುರುರಾಜ ಗುರೂಜಿ ಇರುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ, ಮಾಜಿ ಶಾಸಕ ಅರುಣ್ ಪೂಜಾರ, ಬಿಜೆಪಿ ಮುಖಂಡ ಚಂದ್ರಶೇಖರ್ ಪೂಜಾರ, ಅ.ಭಾ.ವೀ.ಮ. ಅಧ್ಯಕ್ಷ ಡಿ.ಜಿ. ಶಿವಾನಂದಪ್ಪ, ನಗರಸಭೆ, ಮಾಜಿ ಸದಸ್ಯ ಡಿ. ಹೇಮಂತರಾಜ್, ಜವಳಿ ಸಮಾಜದ ಅಧ್ಯಕ್ಷ ಕೊಂಡಜ್ಜಿ ಈಶ್ವರಪ್ಪ ಮತ್ತಿತರರು ಪಾಲ್ಗೊಳ್ಳುವರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಾಗೂ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ, ಸನ್ಮಾನ ನಡೆಯಲಿದೆ ಎಂದು ರೇಣುಕಾ ಮಂದಿರ ದೇವಸ್ಥಾನ ಕಾರ್ಯದರ್ಶಿ ಪಂಚಾಕ್ಷರಿ ತಿಳಿಸಿದ್ದಾರೆ.

- - -

-12ಎಚ್‍ಆರ್‍ಆರ್1: ರಂಭಾಪುರಿ ಶ್ರೀ

PREV

Latest Stories

ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಸಂಸ್ಕಾರ ಅಗತ್ಯ
ಕುಮ್ಕಿ ಹಕ್ಕು ರದ್ದುಪಡಿಸಿ ದಲಿತರಿಗೆ ಹಂಚಿ: ಶ್ಯಾಮರಾಜ್‌ ಬಿರ್ತಿ ಆಗ್ರಹ
ದಲಿತರನ್ನು ಭೂಮಿ ಹಕ್ಕಿನಿಂದ ಹೊರಗಟ್ಟಲು ಕುತಂತ್ರ