ಕೆ.ಆರ್.ಪೇಟೆ:
ಜಗದ್ಗುರು ಪದ್ಮಭೂಷಣ ಭೈರವೈಕ್ಯ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಉತ್ತರಾಧಿಕಾರಿಗಳಾಗಿ ಶ್ರೀಮಠವನ್ನು ನಿರ್ಮಲಾನಂದನಾಥ ಸ್ವಾಮೀಜಿಗಳು ಜಾತ್ಯತೀತ ಹಾಗೂ ಧರ್ಮಾತೀತವಾಗಿ ಸಮರ್ಥವಾಗಿ ಮುನ್ನಡೆಸುತ್ತಾ ಹಿರಿಯ ಶ್ರೀಗಳ ಆಶಯಗಳಿಗೆ ಪೂರಕವಾಗಿ ಕರ್ತವ್ಯ ನಿರ್ವಹಿಸುತ್ತಾ ನಾಡಿನ ಇತರ ಮಠಗಳಿಗೆ ಆದರ್ಶವಾಗಿದ್ದಾರೆ ಎಂದು ತಿಳಿಸಿದ್ದಾರೆ.
ಜಗದ್ಗುರು ಡಾ.ನಿರ್ಮಲಾನಂದನಾಥ ಶ್ರೀಗಳ ನಡೆ-ನುಡಿಯ ಬಗ್ಗೆ ಮಾತನಾಡುವಷ್ಟು ನೀವು ದೊಡ್ಡವರಲ್ಲ. ಶ್ರೀರಂಗಪಟ್ಟಣ ಜನತೆಯ ಆಶೀರ್ವಾದದ ಬಲದಿಂದ ಮೂರು ಅವಧಿಗೆ ಶಾಸಕರಾಗಿರುವ ನಿಮಗೆ ನಮ್ಮ ಭಾರತೀಯ ಹಿಂದೂ ಧರ್ಮದ ಸಂಸ್ಕಾರಗಳು ಹಾಗೂ ಆಚಾರ ವಿಚಾರಗಳ ಅರಿವಿಲ್ಲ ಎಂದು ಕಿಡಿಕಾರಿದ್ದಾರೆ.ನೀವು ಶ್ರೀಗಳ ಪಾದದ ಧೂಳಿಗೂ ಸಮವಲ್ಲ, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಮೂರು ಅವಧಿಗೆ ಶಾಸಕರಾಗಿ ಆಯ್ಕೆಯಾಗಿರುವ ನೀವು ಮುಂದಿನ ದಿನಗಳಲ್ಲಿ ತಾಲೂಕಿನ ಮತದಾರರು ಹಾಗೂ ಭಕ್ತರ ಆಕ್ರೋಶಕ್ಕೆ ಗುರಿಯಾಗಿ ರಾಜಕೀಯ ಜೀವನದಲ್ಲಿ ತೀವ್ರ ಹಿನ್ನಡೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಮಂಡ್ಯ: ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಬಗ್ಗೆ ಮಾತನಾಡಿರುವುದು ಅಕ್ಷಮ್ಯ ಅಪರಾಧ. ಶ್ರೀಗಳ ಬಗ್ಗೆ ಬಹಿರಂಗ ವೇದಿಕೆಯಲ್ಲಿ ಗುರುನಿಂದನೆ ಮಾಡಿರುವ ಶಾಸಕರು ಬಹಿರಂಗ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಶ್ರೀಗಳು ಕೋಟ್ಯಂತರ ಒಕ್ಕಲಿಗರ ಮುಖವಾಣಿಯಂತಿದ್ದು, ಸಮಾಜ ಸೇವೆಯಲ್ಲಿ ಮಾಡುತ್ತಾ ಬಂದಿದ್ದಾರೆ. 450ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಅನಾಥಾಲಯಗಳು ಇವುಗಳನ್ನು ನಡೆಸುವ ಮೂಲಕ ಜ್ಞಾನದಾಸೋಹ ಹಾಗೂ ಅನ್ನದಾಸೋಹ ಮಾಡುತ್ತಾ ನೂರಾರು ಸಮಾಜಮುಖಿ ಕೆಲಸಗಳನ್ನು ನಡೆಸಿಕೊಂಡು ಬಂದಿದ್ದಾರೆ ಎಂದು ಶ್ಲಾಘಿಸಿದ್ದಾರೆ.ದೇಶ ಹಾಗೂ ಹಿಂದೂ ಧರ್ಮದ ಬಗ್ಗೆ ಅಪಾರವಾದ ಕಾಳಜಿ ಇದ್ದು, ವೈಜ್ಞಾನಿಕ ತಳಹದಿ ಉಳ್ಳವರಾಗಿರುತ್ತಾರೆ. ಶ್ರೀಗಳನ್ನು ಅಪಮಾನ ಮಾಡುವ ಮೂಲಕ ಇಡೀ ಒಕ್ಕಲಿಗ ಸಮುದಾಯವನ್ನು ಅಪಮಾನಿಸಿರುವ ಶಾಸಕ ರಮೇಶ ಬಂಡಿಸಿದ್ದೇಗೌಡರು ಬಹಿರಂಗವಾಗಿ ಕೂಡಲೇ ಶ್ರೀಗಳು ಹಾಗೂ ಸಮುದಾಯದವರಲ್ಲಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.