- ಕಾಂಗ್ರೆಸ್ ಮುಖಂಡ ದಿವಂಗತ ಎಂ.ರಮೇಶ್ ಮನೆಗೆ ಭೇಟಿ, ಕುಟುಂಬಕ್ಕೆ ಸಾಂತ್ವನ- - - ಕನ್ನಡಪ್ರಭ ವಾರ್ತೆ ಹೊನ್ನಾಳಿ
ಕೆಲವು ದಿನಗಳ ಹಿಂದೆ ನಿಧನರಾದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ರಮೇಶ್ ಅವರ ಮನೆಗೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು. ಈ ವೇಳೆ ರಮೇಶ್ ನಿಧನಕ್ಕೆ ಅವರಿಗೆ ಸಂತಾಪ ಸೂಚಿಸಿ, ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.ಭಾನುವಾರ ಹೊನ್ನಾಳಿಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶಕ್ಕೆ ಭಾಗವಹಿಸಲು ಹೊನ್ನಾಳಿಗೆ ಆಗಮಿಸಿದ್ದ ಸಂದರ್ಭದಲ್ಲಿ ಅವರು ದಿವಂಗತ ಎಂ.ರಮೇಶ್ ನಿವಾಸಕ್ಕೆ ಭೇಟಿ ನೀಡಿದರು.
ಈ ಸಂದರ್ಭ ಸಿದ್ದರಾಮಯ್ಯ ಮಾತನಾಡಿ, ರಮೇಶ್ ಅವರು ಅಂದಿನ ಅವಿಭಜಿತ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಹೊನ್ನಾಳಿ ತಾಲೂಕು ಇದ್ದ ಸಮಯದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಿದ್ದರು. ಅವರ ನಿಧನ ನಿಜಕ್ಕೂ ಪಕ್ಷ, ಕುಟುಂಬಕ್ಕೆ ಭರಿಸಲಾಗದ ನಷ್ಟವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.ಜಿಲ್ಲಾ ಉಸ್ತುನಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕ ಡಿ.ಜಿ. ಶಾಂತನಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಎಚ್.ಎ. ಉಮಾಪತಿ, ಹಿರಿಯ ಮುಖಂಡರ ಬಿ.ಸಿದ್ದಪ್ಪ, ಪುರಸಭೆ ಸದಸ್ಯ ಎಂ.ಸುರೇಶ್, ಯುವ ಮುಖಂಡ ರಂಜಿತ್, ಮನೋಜ್ ವಾಲಜ್ಜಿ, ಮುಖಂಡರು ಇದ್ದರು.
- - - -5ಎಚ್.ಎಲ್ಐ2:ಹೊನ್ನಾಳಿಯಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ನಿಧನರಾದ ಜಿಪಂ ಮಾಜಿ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಎಂ.ರಮೇಶ್ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.