ಜಿಲ್ಲಾದ್ಯಂತ ಸಂಭ್ರಮದ ರಂಜಾನ್‌ ಸಡಗರ

KannadaprabhaNewsNetwork |  
Published : Mar 22, 2026, 01:30 AM IST
ಆಚರಣೆ | Kannada Prabha

ಸಾರಾಂಶ

ಮುಸ್ಲಿಮರ ಪವಿತ್ರ ಹಬ್ಬ ರಂಜಾನ್‌ ನಗರದ ಹೊರವಲಯದಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮೂಲಕ ಸಂಭ್ರಮ ಸಡಗರದಿಂದ ಆಚರಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಮುಸ್ಲಿಮರ ಪವಿತ್ರ ಹಬ್ಬ ರಂಜಾನ್‌ ನಗರದ ಹೊರವಲಯದಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮೂಲಕ ಸಂಭ್ರಮ ಸಡಗರದಿಂದ ಆಚರಿಸಿದರು.ನಗರದ ಸತ್ತಿ ರಸ್ತೆಯಲ್ಲಿರುವ ಈದ್ಗಾ ಮೈದಾನ ಮತ್ತು ಕ್ರೀಡಾಂಗಣದ ಬಳಿ ಇರುವ ಈದ್ಗಾ ಮೈದಾನದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಮರು ಏಕಕಾಲಕ್ಕೆ ಪ್ರಾರ್ಥನೆ ಮಾಡಿದರು. ಧರ್ಮಗುರುಗಳು ಬೋಧನೆ ಮಾಡುತ್ತಿದ್ದಂತೆಯೇ, ವಿಶೇಷ ಪ್ರಾರ್ಥನೆ ಮಾಡಿದರು. ಬಡವ - ಶ್ರೀಮಂತರೆನ್ನುವ ಭೇದವಿಲ್ಲದೆ ಎಲ್ಲರೂ ವೃತಾಚರಣೆಯಲ್ಲಿ ತೊಡಗಿದರು. ದೇವಲೀನರಾಗಿ ಅಲ್ಲಾಹನನ್ನು ಪ್ರಾರ್ಥಿಸಿ, ಸುಖ, ಶಾಂತಿ, ಸಹಬಾಳ್ವೆ ನೆಮ್ಮದಿಯ ಜೀವನವನ್ನು ಕೋರಿದರು.ಪ್ರಾರ್ಥನೆ ಮುಗಿದ ಬಳಿಕ ಪರಸ್ಪರ ಅಪ್ಪಿಕೊಂಡು ಹಬ್ಬದ ಶುಭಾಶಯವನ್ನು ಖುಷಿಯಿಂದಲೇ ವಿನಿಯಮ ಮಾಡಿಕೊಂಡರು.

ರಂಜಾನ್ ಹಿನ್ನೆಲೆ ಕಳೆದೊಂದು ತಿಂಗಳಿಂದ ಉಪವಾಸ ಮಾಡಿದ ಮುಸ್ಲಿಮರು, ಹಬ್ಬದ ಮುನ್ನಾ ದಿನವೇ ಅದನ್ನು ಪೂರ್ಣಗೊಳಿಸಿ ಬೆಳಗ್ಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ರಂಜಾನ್ ಆಚರಣೆ ಮೂಲಕ ಇದಕ್ಕೆ ತೆರೆ ಬಿದ್ದಿತು.ಮಸೀದಿ, ಈದ್ಗಾಗಳಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ತಮ್ಮ ಶಕ್ತ್ಯಾಸಾರವಾಗಿ ದಾನ ಮಾಡುತ್ತಿರುವುದು ಕಂಡು ಬಂದಿತು. ಅದಲ್ಲದೇ ಹಿರಿಯರು ಮಕ್ಕಳ ಕೈಗೂ ಕೂಡ ಹಣ ಕೊಟ್ಟು ದಾನ ಮಾಡಿಸಿದರು.ತಮಗೆ ಆಪ್ತವಾಗಿರುವ ಹಿಂದೂ ಸ್ನೇಹಿತರನ್ನು ಮನೆಗೆ ಕರೆಯಿಸಿಕೊಂಡು ಅವರಿಗೂ ಸಿಹಿ ಜತೆಗೆ ಬಾಡೂಟ ಬಡಿಸಿ ಖುಷಿಪಟ್ಟರು.

ಶಾಸಕ ಸಿ. ಪುಟ್ಟರಂಗಶೆಟ್ಟಿ ಭಾಗಿ:ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಭಾಗವಹಿಸಿ ಮುಸ್ಲಿಂ ಧರ್ಮಗುರುಗಳನ್ನು ಸನ್ಮಾನಿಸಿ ಮುಸ್ಲಿಂ ಭಾಂದವರಿಗೆ ಶುಭಾಶಯಗಳು ಕೋರಿದರು---೨೧ಸಿಎಚ್‌ಎನ್ ೩

ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ನಗರದದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿ ಇರುವ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೋಕಕಲ್ಯಾಣಕ್ಕಾಗಿ ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆ
ಜೀವನದ ಉನ್ನತಿಗೆ ಧರ್ಮ ಪಾಲನೆ ಮುಖ್ಯ: ರಂಭಾಪುರಿ ಶ್ರೀ