ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ

KannadaprabhaNewsNetwork |  
Published : Apr 01, 2025, 12:45 AM IST
ತುಮಕೂರಿನಲ್ಲಿ ಸಂಭ್ರಮದ ರಂಜಾನ್ ಆಚರಿಸಲಾಯಿತು. | Kannada Prabha

ಸಾರಾಂಶ

ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ರಂಜಾನ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ, ತುಮಕೂರುಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ರಂಜಾನ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲೆಯಾದ್ಯಂತ ರಂಜಾನ್ ಪ್ರಯುಕ್ತ ಮಸೀದಿ , ದರ್ಗಾಗಳನ್ನು ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸಲಾಗಿತ್ತು. ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲೂ ಸಹ ಮುಸ್ಲಿಂರು ರಂಜಾನ್ ಹಬ್ಬವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಜಮಾಯಿಸಿದ ಸಾವಿರಾರು ಮುಸ್ಲಿಂರು ಬೆಳಿಗ್ಗೆ ೧೦ಕ್ಕೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಹಬ್ಬದ ಶುಭಾಶಯವನ್ನು ವಿನಿಮಯ ಮಾಡಿಕೊಂಡರು.ಹೊಸ ಉಡುಪುಗಳನ್ನು ಧರಿಸಿ, ಒಬ್ಬರಿಗೊಬ್ಬರು ಆಲಿಂಗನ ಮಾಡಿ ಹಬ್ಬದ ಶುಭಾಶಯ ಕೋರಿದರು. ಈದ್ಗಾ ಮೈದಾನಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ, ಮಾಜಿ ಶಾಸಕರಾದ ಎಸ್. ಷಫಿಅಹಮದ್, ಡಾ. ರಫೀಕ್ ಅಹಮದ್, ಇಕ್ಬಾಲ್ ಅಹಮದ್, ಅಸ್ಲಾಂಪಾಷ, ಅಪ್ತಾಫ್, ನಯಾಜ್ ಅಹಮದ್ ಮತ್ತಿತರರು ಭೇಟಿ ನೀಡಿ ಮುಸ್ಲಿಂರಿಗೆ ರಂಜಾನ್ ಹಬ್ಬದ ಶುಭಾಶಯ ಕೋರಿದರು.

ಶುಭಕೋರಿದ ಗೃಹ ಸಚಿವರು....

ಇದೇ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ಒಂದು ತಿಂಗಳು ರೋಜಾ ಆಚರಣೆ ಮಾಡಿ ಅತ್ಯಂತ ಪವಿತ್ರವಾಗಿ ಆಚರಿಸುವ ಹಬ್ಬ ರಂಜಾನ್. ಎಲ್ಲಾ ಮುಸ್ಲಿಂರಿಗೆ ಪವಿತ್ರ ರಂಜಾನ್ ಹಬ್ಬದ ಶುಭಾಶಯ ಕೋರುತ್ತೇನೆ. ಅವರ ಜೀವನದಲ್ಲಿ ಎಲ್ಲ ಕಷ್ಟಗಳು ದೂರವಾಗಲಿ ಮಹಮದ್ ಪೈಂಗಬರರು ಇಡೀ ವಿಶ್ವಕ್ಕೆ ಎಲ್ಲರೂ ಸಹೋದರತ್ವದಿಂದ ಬಾಳಬೇಕು ಎಂಬ ಶಾಂತಿಯ ಸಂದೇಶವನ್ನು ಸಾರಿದರು ಎಂದರು.

ಹಿಂದೂ ಮತ್ತು ಮುಸ್ಲಿಂ ನಾವೆಲ್ಲರೂ ಸಹೋದರತ್ವ ಭಾವನೆಯಿಂದ ಒಟ್ಟಾಗಿ ಬಾಳೋಣ ಎಂದು ಕರೆ ನೀಡಿದರು. ಯುಗಾದಿ ಹಬ್ಬ ಸಹ ಆಚರಣೆಯಾಗಿದೆ. ಯುಗಾದಿ ಮತ್ತು ರಂಜಾನ್ ಎರಡೂ ಹಬ್ಬಗಳು ಒಟ್ಟೊಟ್ಟಿಗೆ ಬಂದಿದ್ದು, ಇಬ್ಬರು ಸಹೋದರತ್ವದಿಂದ ಬಾಳಬೇಕು ಎಂದು ಆ ದೇವರೇ ಒಟ್ಟಿಗೆ ಹಬ್ಬವನ್ನು ಕೊಟ್ಟಿದ್ದಾನೆ. ನಾವೆಲ್ಲರೂ ಅಣ್ಣ ತಮ್ಮಂದಿರಂತೆ ಬಾಳೋಣ ಎಂದರು.ಹಬ್ಬದ ಪ್ರಯುಕ್ತ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಅಡಿಷನಲ್ ಎಸ್ಪಿ ಅಬ್ದುಲ್ ಖಾದರ್, ಡಿವೈಎಸ್ಪಿ ಚಂದ್ರಶೇಖರ್ ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಜ್ರ, ಚಿನ್ನ ಪತ್ತೆಗೆ 6.71 ಲಕ್ಷ ಹೆಕ್ಟೇರ್‌ ಭೂ ಗುರುತು
ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ