ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಶನಿವಾರ ರಂಜಾನ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಪ್ರವಚನ ನೀಡಿದ ಧರ್ಮಗುರುಗಳು. ಮಾನವಕುಲದ ಒಳಿತಿಗಾಗಿ ಸರ್ವರೂ ಪ್ರಾರ್ಥಿಸುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ - ವಿಶ್ವಾಸದಿಂದ ಬಾಳುವುದು ಮುಖ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು. ಯಾವುದೇ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಎಲ್ಲ ಧರ್ಮಗಳೂ ಪ್ರೀತಿಯನ್ನು ಬೋಧಿಸುತ್ತವೆ. ಇದನ್ನು ಅರಿತು ಬಾಳಿದರೆ ಸಮಾಜದಲ್ಲಿ ಶಾಂತಿ - ಸೌಹಾರ್ದತೆ ನೆಲೆಸಲು ಸಾಧ್ಯ ಎಂಬ ಸಂದೇಶ ನೀಡಿದರು.
ಈ ಹಬ್ಬವು ದಯೆ, ಕರುಣೆಯ ಸಂದೇಶವನ್ನು ನೀಡುತ್ತದೆ. ಪ್ರೀತಿ, ಸಹೋದರತ್ವ , ಶಾಂತಿ ಮತ್ತು ಪರಸ್ಪರ ಸಾಮರಸ್ಯದ ಸಂಕೇತವಾದ ರಂಜಾನ್ ಎಲ್ಲರಿಗೂ ಶುಭ ತರಲಿ. ನಂಬಿಕೆ, ಸಹಬಾಳ್ವೆ ಮತ್ತು ಸಾಮರಸ್ಯ ಮೂಡಿಸುವಂತಹ ಪವಿತ್ರ ಸಂದರ್ಭ ಇದಾಗಿದೆ. ಎಲ್ಲರಿಗೂ ಈ ಸಂದರ್ಭದಲ್ಲಿ ಯಶಸ್ಸು ದೊರೆಯಲಿ ಎಂದು ಶುಭ ಹಾರೈಸಿದರು.ಜಾಗತಿಕ ಮಟ್ಟದಲ್ಲಿ ಯುದ್ದಗಳು ಕೊನೆಗೊಂಡು ಶಾಂತಿ ನೆಲೆಸಲಿ. ಈ ಹಬ್ಬವು ಎಲ್ಲೆಡೆ ಸಹೋದರತ್ವ ಮತ್ತು ದಯೆಯ ಶಕ್ತಿಯನ್ನು ಬಲಪಡಿಸಲಿ. ಎಲ್ಲರಿಗೂ ಸಂತೋಷ, ಆರೋಗ್ಯ ಮತ್ತು ಸಮೃದ್ಧಿ ದೊರೆಯಲಿ ಎಂದು ಆಶಿಸಿದರು.
ಒಂದು ತಿಂಗಳ ಉಪವಾಸ ವ್ರತಾಚರಣೆ ಕೊನೆಗೊಂಡು ಹಬ್ಬವನ್ನು ಸಡಗರದಿಂದ ಆಚರಿಸಿದರು. ಪರಸ್ಪರ ಶುಭಾಶಯ ವಿನಿಮಯದ ದೃಶ್ಯಗಳು ಎಲ್ಲೆಡೆ ಕಂಡು ಬಂದವು.
21ಕೆಡಿಬಿಪಿ1- ದೊಡ್ಡಬಳ್ಳಾಪುರದಲ್ಲಿ ರಂಜಾನ್ ಹಬ್ಬದ ಅಂಗವಾಗಿ ಶನಿವಾರ ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಾರು ಜನ ಭಾಗಿಯಾದರು.21ಕೆಡಿಬಿಪಿ2- ದೊಡ್ಡಬಳ್ಳಾಪುರದಲ್ಲಿ ರಂಜಾನ್ ಹಬ್ಬದ ಅಂಗವಾಗಿ ಮಕ್ಕಳು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುವ ದೃಶ್ಯ ಕಂಡು ಬಂತು.