ರೇಂಜರ್ಸ್ ಪ್ರೇರಣಾ ಕಾರ್ಯಕ್ರಮ ಉದ್ಘಾಟನೆ

KannadaprabhaNewsNetwork |  
Published : Sep 04, 2026, 01:15 AM IST
ಚಿತ್ರದುರ್ಗ ಎರಡನೇ ಪುಟದ ಮಿಡ್ಲ್  | Kannada Prabha

ಸಾರಾಂಶ

Rangers motivational program inaugurated

​ಚಿತ್ರದುರ್ಗ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಚಿತ್ರದುರ್ಗ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಸಹಯೋಗದೊಂದಿಗೆ ರೇಂಜರ್ಸ್ ಪ್ರೇರಣಾ ಕಾರ್ಯಕ್ರಮವನ್ನು ನಗರದ ಸರ್ಕಾರಿ ಕಲಾ ಕಾಲೇಜಿನ ಡಾ.ಬಿ.ಆರ್ ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ ಆಯೋಜಿಸಿತ್ತು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಸರ್ಕಾರಿ ವಿಜ್ಞಾನ ಕಾಲೇಜು, ಎಸ್ ಜೆ ಎಂ ಕಾಲೇಜು, ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ.ತಾರಿಣಿ ಆರ್. ಶುಭದಾಯಿನಿ ಉದ್ಘಾಟಿಸಿದರು. ಜಿಲ್ಲಾ ಉಪಾಧ್ಯಕ್ಷೆ ಶೀಲಾ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.

​ವಿಷಯ ತಜ್ಞೆ ಮತ್ತು ಸಂಪನ್ಮೂಲ ವ್ಯಕ್ತಿಗಳಾಗಿ ಸುನೀತಾ ನರ್ಸಿಂಗ್ ಹೋಮ್‌ ಸ್ತ್ರೀರೋಗ ತಜ್ಞೆ ಡಾ.ಎಸ್. ಸೌಮ್ಯ ಹಾಗೂ ಸರಸ್ವತಿ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಹರ್ಷ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಜಿಲ್ಲಾ ಕಾರ್ಯದರ್ಶಿ ಬಿ.ಎ. ಲಿಂಗಾರೆಡ್ಡಿ, ಜಿಲ್ಲಾ ರೋವರ್ ನೋಡಲ್ ಅಧಿಕಾರಿ ಹೆಚ್. ತಿಪ್ಪೇಸ್ವಾಮಿ, ಜಿಲ್ಲಾ ಕಮಿಷನರ್ ಎಲ್. ಸವಿತಾ ಶಿವಕುಮಾರ್, ಜಿಲ್ಲಾ ಕಮಿಷನರ್ ಪಿ.ವೈ. ದೇವರಾಜ್ ಪ್ರಸಾದ್, ಜಿಲ್ಲಾ ಕೇಂದ್ರ ಕಚೇರಿ ಕಮಿಷನರ್ ಎಂ.ಕೆ. ಅನಂತ್ ರೆಡ್ಡಿ, ಐಕ್ಯುಎಸಿ ಸಂಯೋಜಕಿ ಡಾ. ಲೀಲಾವತಿ ಕೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರೇಂಜರ್ ಸಂಚಾಲಕಿ ಡಾ. ಗಾಯಿತ್ರಿ ಉಪಸ್ಥಿತರಿದ್ದರು.

---------------

ಪೋಟೋ ಕ್ಯಾಪ್ಸನ್

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಸಹಯೋಗದೊಂದಿಗೆ ಚಿತ್ರದುರ್ಗದ ಕಲಾ ಕಾಲೇಜಿನಲ್ಲಿ ರೇಂಜರ್ಸ್ ಪ್ರೇರಣಾ ಕಾರ್ಯಕ್ರಮ ಆಯೋಜಿಸಿತ್ತು.

---------ಫೋಟೋ ಫೈಲ್ ನೇಮ್-3 ಸಿಟಿಡಿ 1-

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಕರಿಗೆ ಸಂವೇದನಾಶೀಲತೆ ಗುಣ ಅಗತ್ಯ
ಸಿದ್ದೇಶ್ವರ ಸ್ವಾಮೀಜಿ ಶತಮಾನದ ಶ್ರೇಷ್ಠ ಸಂತ