ಕನ್ನಡಪ್ರಭ ವಾರ್ತೆ ಬೆಂಗಳೂರು
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ), ಕರ್ನಾಟಕ ದಕ್ಷಿಣ ಪ್ರಾಂತದ ವತಿಯಿಂದ ನೆರಳೂರಿನ ಎಸ್‌ವಿವಿಎನ್ ಪಿಯು ಕಾಲೇಜಿನಲ್ಲಿ ವೀರರಾಣಿ ಅಬ್ಬಕ್ಕ ದೇವಿಯವರ 500ನೇ ಜಯಂತ್ಯುತ್ಸವದ ರಥ-02 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಾನ್ ಸಾಧಕ ಮಹಿಳೆಯರನ್ನು ಹಾಗೂ ಸ್ವಾತಂತ್ರ್ಯ ಹೋರಾಟಗಾರ್ತಿಯರ ಜೀವನವನ್ನು ಪ್ರಚುರಪಡಿಸುತ್ತಿರುವ ಎಬಿವಿಪಿ ಸಂಘಟನೆಯನ್ನು ನಾನು ಅಭಿನಂದಿಸುತ್ತೇನೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿ ಶಕ್ತಿಯನ್ನು ರಾಷ್ಟ್ರ ಶಕ್ತಿಯಾಗಿ ರೂಪಿಸುತ್ತಿರುವ ಸಂಘಟನೆಯಾಗಿದೆ. ಸುಮಾರು 75 ವರ್ಷಗಳಿಂದ ಈ ಸಂಘಟನೆ ವಿದ್ಯಾರ್ಥಿಗಳ ಹಿತಕ್ಕಾಗಿ ಕೆಲಸ ಮಾಡುತ್ತಿದ್ದು ಈ ರಥಯಾತ್ರೆ ಆನೇಕಲ್‌ನಿಂದ ಆರಂಭವಾಗುತ್ತಿರುವುದರಿಂದ ಇದನ್ನು ಉದ್ಘಾಟಿಸಲು ಬಹಳ ಹೆಮ್ಮೆಯಾಗುತ್ತಿದೆ ಎಂದು ಹೇಳಿದರು.ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾದ ನಾ.ತಿಪ್ಪೇಸ್ವಾಮಿ ಮಾತನಾಡಿ, ಇಂತಹ ಮಹಾನ್ ವ್ಯಕ್ತಿತ್ವಗಳನ್ನು ಸಮಾಜಕ್ಕೆ ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಹಿಂದೆಯೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನೆಯು ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜಯಂತಿ ಆಚರಿಸಿತ್ತು. ಈ ವರ್ಷ ರಾಣಿ ಅಬ್ಬಕ್ಕನವರ 500ನೇ ಜಯಂತಿಯನ್ನು ಆಚರಿಸುತ್ತಿದೆ ಎಂದು ಹೇಳಿದರು.