ಬ್ರಿಟಿಷರ ವಿರುದ್ಧ ಹೋರಾಡಿದ ರಾಣಿ ಕಿತ್ತೂರು ತನ್ನಮ್ಮ

KannadaprabhaNewsNetwork |  
Published : Oct 24, 2024, 12:48 AM IST
ಸಿಕೆಬಿ-4 ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯಲ್ಲಿ ಸಮುದಾಯದ ಉಮಾಸುರೇಶ್, ಗೀತಾರಾಜು,  ಅವರಿಗೆ ಜಿಲ್ಲಾಧಿಕಾರಿ ಪಿ.ಎನ್  ರವೀಂದ್ರ ಸನ್ಮಾನಿಸಿದರು. | Kannada Prabha

ಸಾರಾಂಶ

ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ದ ಹೋರಾಡಿದ ಕೆಳದಿಯ ರಾಣಿ ಅಬ್ಬಕ್ಕ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಪ್ರಮುಖರು. ದೈವ ಭಕ್ತಿ, ಶಕ್ತಿ ಧೈರ್ಯ,ಸ್ಪೂರ್ತಿ ಹಾಗೂ ಸಾಹಸವು ಮೇಳೈಸಿರುವ ರಾಣಿ ಎಂದರೆ ಚೆನ್ನಮ್ಮ ಇತಿಹಾಸ ಪುಟಗಳಲ್ಲಿ ಸದಾ ಕಾಲ ಚಿರಸ್ಥಾಯಿ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಕಿತ್ತೂರು ರಾಣಿ ಚೆನ್ನಮ್ಮ ಅವರು ಭಾರತದ ಸ್ವಾತಂತ್ರ್ಯ ಚಳವಳಿಯ ಮಹಿಳಾ ಹೋರಾಟಗಾರರಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇವರ ಹೆಸರು ಭಾರತ ಹಾಗೂ ಕರ್ನಾಟಕದ ಇತಿಹಾಸ ಪುಟಗಳಲ್ಲಿ ಸದಾ ಕಾಲ ಚಿರಸ್ಥಾಯಿಯಾಗಿರಲಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದರು.

ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯಕ್ಕಾಗಿ ದಿಟ್ಟ ಹೋರಾಟ

ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ದ ಹೋರಾಡಿದ ಕೆಳದಿಯ ರಾಣಿ ಅಬ್ಬಕ್ಕ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಪ್ರಮುಖರು. ದೈವ ಭಕ್ತಿ, ಶಕ್ತಿ ಧೈರ್ಯ,ಸ್ಪೂರ್ತಿ ಹಾಗೂ ಸಾಹಸವು ಮೇಳೈಸಿರುವ ರಾಣಿ ಎಂದರೆ ಚೆನ್ನಮ್ಮ ಎಂದು ಬಣ್ಣಿಸಿದರು.ಕಾರ್ಯಕ್ರಮದಲ್ಲಿ ಅನಿಲ್ ರವರು ಕಿತ್ತೂರು ರಾಣಿ ಚೆನ್ನಮ್ಮ ಅವರ ಸ್ವಾತಂತ್ರ್ಯ ಹೋರಾಟದ ಗತ ವೈಭವದ ಬಗ್ಗೆ ಉಪನ್ಯಾಸ ನೀಡಿದರು. ಈ ವೇಳೆ ಸಮುದಾಯದ ಮುಖಂಡರಾದ ಉಮಾಸುರೇಶ್, ಗೀತಾರಾಜು, ಅವರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್ ಭಾಸ್ಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವಿ ಕುಮಾರ್, ಅಖಿಲ ಭಾರತ ವೀರ ಶೈವ ಲಿಂಗಾಯತ ಸಮುದಾಯದ ಜಿಲ್ಲಾಧ್ಯಕ್ಷ ಮಹೇಶ್ ಬಸವಾಪುರ, ರಾಜೇಂದ್ರ ಬಾಬು, ಸಮುದಾಯದ ಮುಖಂಡರು ಹಾಗೂ ಪದಾಧಿಕಾರಿಗಳು , ಸಿಬ್ಬಂದಿ ಇಲಾಖೆಯ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ