ದೆವ್ವ ಬಿಡಿಸುವ ನೆಪದಲ್ಲಿ ಅತ್ಯಾಚಾರ ಆರೋಪ

KannadaprabhaNewsNetwork |  
Published : Oct 13, 2026, 01:15 AM IST
 | Kannada Prabha

ಸಾರಾಂಶ

ಚಿಕ್ಕಮಗಳೂರುದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನ ಅರ್ಚಕ ನನ್ನು ಪೊಲೀಸರು ಬೆಂಗಳೂರಿನ ಜೆ.ಪಿ.ನಗರದಲ್ಲಿ ಬಂಧಿಸಿದ್ದಾರೆ.

ಸತೀಶ್ ಪಾತ್ರಿ ಬೆಂಗಳೂರಿನಲ್ಲಿ ಬಂಧನ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನ ಅರ್ಚಕ ನನ್ನು ಪೊಲೀಸರು ಬೆಂಗಳೂರಿನ ಜೆ.ಪಿ.ನಗರದಲ್ಲಿ ಬಂಧಿಸಿದ್ದಾರೆ.

ಅರ್ಚಕ ಸತೀಶ್ ಪಾತ್ರಿ ಬಂಧಿತ ಆರೋಪಿ. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಈತ ಕಳೆದ ಒಂದೂವರೆ ತಿಂಗಳಿನಿಂದ ಪೊಲೀಸರಿಗೆ ಸಿಗದೆ ಸ್ಥಳ ಬದಲಿಸುತ್ತಿದ್ದ. ಪೊಲೀಸ್ ಸಿಬ್ಬಂದಿಯಿಂದಲೇ ಪೊಲೀಸರ ಚಲನವಲನದ ಮಾಹಿತಿ ಪಡೆದು, ಪೊಲೀಸರು ತಲುಪುವ ಮುನ್ನವೇ ತನ್ನ ವಾಸಸ್ಥಳ ಬದಲಾಯಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.ದೆವ್ವ ಬಿಡಿಸುವ ನೆಪದಲ್ಲಿ ಅತ್ಯಾಚಾರ ಆರೋಪ:

ಹಾಸನ ಮೂಲದ ಮಹಿಳೆ ನೀಡಿದ ದೂರಿನ ಮೇರೆಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಸತೀಶ್ ಪಾತ್ರಿ ವಿರುದ್ಧ ಪ್ರಕರಣ ದಾಖಲಾಗಿತ್ತು. ತೀರ್ಥಹಳ್ಳಿ ತಾಲೂಕಿನ ಕುದುರೆಗುಂಡಿಗೆ ಮಹಿಳೆಯನ್ನು ಕರೆದೊಯ್ದು, ಆಕೆಯಲ್ಲಿರುವ ಭೂತ-ದೆವ್ವವನ್ನು ಬಿಡಿಸುವುದಾಗಿ ನಂಬಿಸಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಅಲ್ಲದೆ, ಅಪ್ರಾಪ್ತ ಬಾಲಕಿಯೊಬ್ಬಳಿಗೂ ಭೂತ ಬಿಡಿಸುವ ನೆಪದಲ್ಲಿ ಕೋಳಿ ರಕ್ತ ಕುಡಿಯುವಂತೆ ಒತ್ತಾಯಿಸಿದ್ದ ಆರೋಪವೂ ಸತೀಶ್ ಪಾತ್ರಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಪ್ರಕರಣದ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಪೇದೆಯಿಂದ ಮಾಹಿತಿ ಪಡೆಯುತ್ತಿದ್ದ ಆರೋಪ:ಆರೋಪಿ ಸತೀಶ್ ಪಾತ್ರಿ, ಎನ್.ಆರ್.ಪುರ ಪೊಲೀಸ್ ಠಾಣೆ ಪೇದೆ ಕಾಂತೇಶ್‌ನಿಂದ ಪೊಲೀಸರ ಕಾರ್ಯಾಚರಣೆ ಹಾಗೂ ಚಲನವಲನದ ಬಗ್ಗೆ ಮಾಹಿತಿ ಪಡೆಯುತ್ತಿದ್ದ ಎಂಬ ಆರೋಪ ಪ್ರಕರಣಕ್ಕೆ ಮತ್ತೊಂದು ತಿರುವು ನೀಡಿದೆ. ಪೊಲೀಸರ ತಂಡ ತನ್ನತ್ತ ಬರುತ್ತಿರುವ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳ ಬದಲಾಯಿಸುತ್ತಿದ್ದ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಪೇದೆ ಕಾಂತೇಶ್ ನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅಮಾನತುಗೊಳಿಸಿದ್ದರು.ಎರಡು ಠಾಣೆಗಳಲ್ಲಿ ಪ್ರಕರಣ:

ಸತೀಶ್ ಪಾತ್ರಿ ವಿರುದ್ಧ ಕೊಪ್ಪ ಮತ್ತು ಎನ್.ಆರ್.ಪುರ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಮಹಿಳೆ ಮೇಲಿನ ಅತ್ಯಾಚಾರ ಆರೋಪ, ಮಾಟಮಂತ್ರ ಹಾಗೂ ಬ್ಲ್ಯಾಕ್ ಮ್ಯಾಜಿಕ್‌ಗೆ ಸಂಬಂಧಿಸಿದ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೊಡ್ಡಬಳ್ಳಾಪುರ: ಐತಿಹಾಸಿಕ ವೀರಗಲ್ಲುಗಳ ಸಂರಕ್ಷಣೆ
ಮಕ್ಕಳಲ್ಲಿ ದೈವತ್ವ ಕಾಣುವುದು ಜೀವನದ ಭಾಗ್ಯ