ಕನ್ನಡಪ್ರಭ ವಾರ್ತೆ ಬೆಂಗಳೂರು
ತಮಿಳುನಾಡು ಮೂಲದ 19 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಉತ್ತರ ಭಾರತದ ಡಿಕ್ಸನ್ ಸ್ಯಾಂಡ್ರೋ (21) ಹಾಗೂ ಬೆಂಗಳೂರು ಮೂಲದ ನಿಖಿಲ್ (35) ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ವಿವರ:ತಮಿಳುನಾಡು ಮೂಲದ ಯುವತಿ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಮನೋವೈದ್ಯ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂ ಮೂಲಕ ಡಿಕ್ಸನ್ ಸಂದ್ರ ಎಂಬಾತನ ಪರಿಚಯವಾಗಿದೆ. ಬಳಿಕ ಕೋರಮಂಗಲದ ಕೆಫೆಯಲ್ಲಿ ಇಬ್ಬರು ಭೇಟಿಯಾಗಿದ್ದರು. ಈ ವೇಳೆ ಆರೋಪಿ ಪ್ರೇಮ ನಿವೇದನೆ ಮಾಡಿಕೊಂಡಿದ್ದು, ಈಕೆಯೂ ಒಪ್ಪಿದ್ದಳು. ಈ ಮಧ್ಯೆ ಫೆ.14ರಂದು ಡಿಕ್ಸನ್ ಸಂದ್ರ ಜಕ್ಕೂರಿನಲ್ಲಿರುವ ವಿಲ್ಲಾವೊಂದಕ್ಕೆ ಬರುವಂತೆ ಕರೆ ಮಾಡಿದ್ದ. ಅದರಂತೆ ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತೆ ವಿಲ್ಲಾಗೆ ಹೋಗಿದ್ದರು. ಈ ವೇಳೆ ಡಿಕ್ಸನ್ ಹಾಗೂ ನಿಖಿಲ್ ಬಲವಂತವಾಗಿ ತನಗೆ ಮತ್ತುಬರುವ ಮಾತ್ರೆಯೊಂದನ್ನು ತಿನ್ನಿಸಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಸಂತ್ರಸ್ತ ಯುವತಿ ವಿರುದ್ಧವೇ ಹನಿಟ್ರ್ಯಾಪ್ ಆರೋಪ:
ಸ್ನೇಹಿತ ಡಿಕ್ಸನ್ ಸಂದ್ರನ ಮೂಲಕ ಪರಿಚಯವಾದ ಯುವತಿ ಹಾಗೂ ಖಾಸಗಿ ಸುದ್ದಿ ವಾಹಿನಿಯ ಹೆಸರಿನಲ್ಲಿ ಕರೆ ಮಾಡಿಸಿ ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಫೆ.14ರಂದು ಜಕ್ಕೂರಿನಲ್ಲಿರುವ ವಿಲ್ಲಾದಲ್ಲಿ ತನ್ನೊಂದಿಗೆ ಪಾರ್ಟಿ ಮಾಡಿದ್ದ ಯುವತಿ ತನ್ನೊಂದಿಗೆ ತೀರಾ ಸಲುಗೆಯಿಂದ ವರ್ತಿಸುತ್ತಿದ್ದಳು. ಅದೇ ದಿನ ಆಕೆಯನ್ನು ಸುರಕ್ಷಿತವಾಗಿ ರಾಜಾಜಿನಗರದ ವಾರಿಯರ್ ಬೇಕರಿ ಬಳಿ ಡ್ರಾಪ್ ಮಾಡಿದ್ದೆ. ಆ ನಂತರ ಇನ್‌ಸ್ಟಾಗ್ರಾಂ ವಿಡಿಯೋ ಮೂಲಕ ಯುವತಿ ಸುಳ್ಳು ಆರೋಪ ಮಾಡಿದ್ದಾಳೆ. ನಂತರ ಖಾಸಗಿ ವಾಹಿನಿಯ ಪ್ರತಿನಿಧಿಯ ಹೆಸರಿನಲ್ಲಿ ಇಮ್ರಾನ್ ಎಂಬಾತನ ಮೂಲಕ ಕರೆ ಮಾಡಿಸಿ ಹಣಕ್ಕೆ ಬೇಡಿಕೆಯಿಟ್ಟಿರುವುದಾಗಿ ನಿಖಿಲ್ ದೂರು ನೀಡಿದ್ದಾರೆ.