ಹಿರಿಯೂರು: ಪಿಯುಸಿ ಓದುತ್ತಿರುವ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿ ಮಾಡಿದ ಯುವಕನ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಂಬಂಧಿಕರ ಮನೆಯಲ್ಲಿದ್ದುಕೊಂಡು ನಗರದ ಕಾಲೇಜಿಗೆ ಬರುತ್ತಿದ್ದ ಬಾಲಕಿಯನ್ನು ಸಂಗೇನಹಳ್ಳಿ ಗ್ರಾಮದ ದರ್ಶನ್ ಎಂಬ ಯುವಕ ಪರಿಚಯಿಸಿಕೊಂಡು ಆಕೆಯಿಂದ ಮೊಬೈಲ್ ನಂಬರ್ ಪಡೆದು ಮೆಸೇಜ್, ಪೋನ್ ಕಾಲ್ ಮಾಡುತ್ತಾ ಮದುವೆಯಾಗುವುದಾಗಿ ನಂಬಿಸಿ ಬಾಲಕಿಯನ್ನು ದೈಹಿಕವಾಗಿ ಬಳಸಿಕೊಂಡು ಪ್ರಾಣ ಬೆದರಿಕೆ ಹಾಕಿದ್ದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆಂದು ಬಾಲಕಿಯ ಪೋಷಕರು ಆರೋಪಿಯ ವಿರುದ್ಧ ಪೋಕ್ಸೋ, ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾರೆ.