ಬಾಲಕಿ ಮೇಲೆ ಅತ್ಯಾಚಾರ: ಖಾಸಗಿ ಬಸ್ ಕ್ಲೀನರ್ ಬಂಧನ

KannadaprabhaNewsNetwork |  
Published : Jan 14, 2024, 01:30 AM IST
ಪೋಟೋ 3 : ಆರೋಪಿ ಆನಂದ್ | Kannada Prabha

ಸಾರಾಂಶ

ದಾಬಸ್‌ಪೇಟೆ: ಶಾಲೆಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್ ಕ್ಲೀನರ್ ಅತ್ಯಾಚಾರ ಎಸಗಿರುವ ಪ್ರಕರಣ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ದಾಬಸ್‌ಪೇಟೆ: ಶಾಲೆಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್ ಕ್ಲೀನರ್ ಅತ್ಯಾಚಾರ ಎಸಗಿರುವ ಪ್ರಕರಣ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಅಕ್ಕತಮ್ಮನಹಳ್ಳಿ ಆನಂದ್ ಅಲಿಯಾಸ್ ಗಾಂಚಾಲಿ(24) ಬಂಧಿತ ಆರೋಪಿ. ಸೋಂಪುರ ಮೂಲದ ಬಾಲಕಿ ವಾರದ ಹಿಂದೆ ಶಾಲೆಗೆ ಹೋಗಿ ಮತ್ತೆ ಮನೆಗೆ ಬಾರದೇ ನಾಪತ್ತೆಯಾಗಿದ್ದಳು. ಮಗಳು ನಾಪತ್ತೆಯಾಗಿರುವ ಬಗ್ಗೆ ದಾಬಸ್‌ಪೇಟೆ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು. ಕರೆ ಆಧಾರದ ಮೇಲೆ ತನಿಖೆ ಆರಂಭಿಸಿದ ದಾಬಸ್‌ಪೇಟೆ ಪೊಲೀಸರು, ಯಲಹಂಕ ಬಳಿ ಬಾಡಿಗೆ ಮನೆಯಲ್ಲಿರಿಸಿದ್ದ 14 ವರ್ಷದ ಬಾಲಕಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿ ದಿನನಿತ್ಯ ದಾಬಸ್‌ಪೇಟೆಯಿಂದ ತ್ಯಾಮಗೊಂಡ್ಲುನಲ್ಲಿರುವ ಶಾಲೆಗೆ ಖಾಸಗಿ ಬಸ್ ನಲ್ಲಿ ಹೋಗಿ ಬರುತ್ತಿದ್ದಳು. ಆಗ ಬಸ್‌ನಲ್ಲಿ ಆರೋಪಿ ಪರಿಚಯವಾಗಿದೆ. ಅನಂತರ ಪ್ರೇಮಕ್ಕೆ ತಿರುಗಿ ಬಾಲಕಿಯನ್ನು ಕರೆದುಕೊಂಡು ಹೋಗಿದ್ದನೆನ್ನಲಾಗಿದೆ. ಅರೋಪಿ 2021ರಲ್ಲಿ ಬ್ಯಾಡರಹಳ್ಳಿ ಠಾಣೆಯಲ್ಲಿ ಇದೇ ರೀತಿ ಫೋಕ್ಸೊ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಅನುಭವಿಸಿ ಜೈಲಿನಿಂದ ಬಿಡುಗಡೆಯಾಗಿದ್ದನು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ-30,000 ಕೋಟಿ ರು. ವಿತರಣೆಯ ಗುರಿ
ಏಪ್ರಿಲ್‌ನಿಂದ ಆಲ್ಕೋಹಾಲ್‌ ಪ್ರಮಾಣಕ್ಕೆ ತಕ್ಕಂತೆ ಮದ್ಯ ಸುಂಕ