ರಾಸಲೀಲೆ ವಿಡಿಯೋ: ಕಾಮಚಂದ್ರರಾವ್‌ ಸಸ್ಪೆಂಡ್‌

KannadaprabhaNewsNetwork |  
Published : Jan 21, 2026, 02:15 AM IST
Ramachandra Rao

ಸಾರಾಂಶ

ಪೊಲೀಸ್‌ ಸಮವಸ್ತ್ರದಲ್ಲಿ ಅಧಿಕೃತ ಕಚೇರಿಯಲ್ಲಿ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿ ಡಾ.ಕೆ.ರಾಮಚಂದ್ರರಾವ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸೋಮವಾರ ತಡರಾತ್ರಿ ಸರ್ಕಾರ ಆದೇಶ ಹೊರಡಿಸಿದೆ.

 ಬೆಂಗಳೂರು :  ಪೊಲೀಸ್‌ ಸಮವಸ್ತ್ರದಲ್ಲಿ ಅಧಿಕೃತ ಕಚೇರಿಯಲ್ಲಿ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿ ಡಾ.ಕೆ.ರಾಮಚಂದ್ರರಾವ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸೋಮವಾರ ತಡರಾತ್ರಿ ಸರ್ಕಾರ ಆದೇಶ ಹೊರಡಿಸಿದೆ.

ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು

ರಾವ್‌ ಅವರ ಅಸಭ್ಯ ವರ್ತನೆಯ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿದೆ.

ರಾಸಲೀಲೆ ವಿಡಿಯೋ ವೈರಲ್ ಆದ ತಕ್ಷಣ 10 ದಿನಗಳ ಕಡ್ಡಾಯ ರಜೆ ಮೇಲೆ ರಾವ್‌ ತೆರಳಿದ್ದರು. ಇದೀಗ ಸರ್ಕಾರ ಪ್ರಾಥಮಿಕ ಪರಿಶೀಲನೆಯಲ್ಲಿ ರಾವ್‌ ನಿಯಮಗಳನ್ನು ಉಲ್ಲಂಘಿಸಿರುವುದು ತಿಳಿದುಬಂದಿದೆ. ಸರ್ಕಾರಕ್ಕೆ ಮುಜುಗರ ಉಂಟು ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆ ಬಾಕಿ ಇರಿಸಿ ಅಮಾನತು ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಕೆ.ವಿ. ಅಶೋಕ್‌ ಆದೇಶದಲ್ಲಿ ತಿಳಿಸಿದ್ದಾರೆ.

ಅಖಿಲ ಭಾರತ ಸೇವಾ ನಿಯಮ 1968ರ ನಿಯಮ 3ನ್ನು ಉಲ್ಲಂಘನೆ

ರಾಮಚಂದ್ರರಾವ್‌ ಅಖಿಲ ಭಾರತ ಸೇವಾ ನಿಯಮ 1968ರ ನಿಯಮ 3ನ್ನು ಉಲ್ಲಂಘನೆ ಮಾಡಿದ್ದಾರೆ. ಅಖಿಲ ಭಾರತ ಸೇವಾ ನಿಯಮಗಳಡಿ ಶಿಸ್ತು ಕ್ರಮ ತೆಗೆದುಕೊಳ್ಳಲು ಇರುವ ಅಧಿಕಾರ ಬಳಸಿ ಸೇವೆಯಿಂದ ಅಮಾನತು ಮಾಡಲಾಗುತ್ತಿದೆ.

ಅಮಾನತು ಅವಧಿಯಲ್ಲಿ ನಿಯಮಾವಳಿಗಳ ಪ್ರಕಾರ ಭತ್ಯೆ ಪಡೆಯಲು ರಾವ್ ಅರ್ಹರಾಗಿರುತ್ತಾರೆ. ಆದರೆ ಅನುಮತಿಯಿಲ್ಲದೇ ಕೇಂದ್ರ ಸ್ಥಾನವನ್ನು ಯಾವುದೇ ಸಂದರ್ಭದಲ್ಲಿಯೂ ಬಿಟ್ಟು ಹೋಗಬಾರದೆಂದು ಆದೇಶದಲ್ಲಿ ತಿಳಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಮರಳು ಮಾಫಿಯಾದಿಂದ ಶಾಸಕಿ ಕರೆಮ್ಮಗೆ ಬೆದರಿಕೆ
ಉಡುಪಿಯ ಕೃಷ್ಣಮಠದಲ್ಲಿ ಇನ್ನು ಭಕ್ತರಿಗೆ ಕಟ್ಟುನಿಟ್ಟಿನ ನಿಯಮ ಜಾರಿ