- ಘಟಕದ ಅಧ್ಯಕ್ಷೆ ಕೆಂಪಮ್ಮ ಮಾಹಿತಿ । ನಗರದ ಗೋಪಿವೃತ್ತದಲ್ಲಿ ಪ್ರತಿಭಟನಾ ಸಭೆ
ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ಆಡಳಿತ ವೈಖರಿ ಖಂಡಿಸಿ ರಾಷ್ಟ್ರಭಕ್ತರ ಬಳಗದ ಮಹಿಳಾ ಘಟಕದಿಂದ ನ. 6ರಂದು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಘಟಕದ ಅಧ್ಯಕ್ಷೆ ಕೆಂಪಮ್ಮ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೈವಜ್ಞ ಕಲ್ಯಾಣ ಮಂದಿರದಿಂದ ಬೆಳಗ್ಗೆ 10.30ಕ್ಕೆ ಆರಂಭವಾಗುವ ಮೆರವಣಿಗೆ ದುರ್ಗಿಗುಡಿ ಮುಖ್ಯರಸ್ತೆ ಮೂಲಕ ಗೋಪಿವೃತ್ತ ತಲುಪಲಿದೆ. ಅಲ್ಲಿ ಸಭೆ ನಡೆಸಿ ಸರ್ಕಾರದ ವಿರುದ್ಧ ಪ್ರತಿಭಟನೆ ದಾಖಲಿಸಲಾಗುವುದು ಎಂದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವಿದ್ಯುತ್, ಹಾಲು, ಬಸ್ ಪ್ರಯಾಣ, ಮದ್ಯ ಹಾಗೂ ಆಸ್ತಿ ನೋಂದಣಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬೆಲೆ ಏರಿಕೆಯಾಗಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಜೀವನ ನಿರ್ವಹಣೆ ಕಷ್ಟವಾಗಿದೆ. ವಿಶೇಷವಾಗಿ ಹಾಲು ಮತ್ತು ಮೊಸರಿನ ದರ ಹೆಚ್ಚಳದಿಂದ ಮಹಿಳೆಯರು ಹಾಗೂ ಮಕ್ಕಳಿರುವ ಕುಟುಂಬಗಳಿಗೆ ಹೆಚ್ಚಿನ ಹೊರೆ ಉಂಟಾಗಿದೆ ಎಂದು ದೂರಿದರು.
ಪಾಲಿಕೆ ಮಾಜಿ ಮೇಯರ್ ಲತಾ ಗಣೇಶ್, ಮಾಜಿ ಉಪಮೇಯರ್ ಲಕ್ಷ್ಮಿ ಶಂಕರ್ ನಾಯಕ್, ಮಾಜಿ ಕಾರ್ಪೊರೇಟರ್ ಅನಿತಾ ಮಂಜುನಾಥ್, ಸೀತಾಲಕ್ಷ್ಮಿ, ಸುರೇಖಮ್ಮ, ಗೀತಮ್ಮ, ಶಶಿಕಲಾ, ಜ್ಯೋತಿ, ಶಂಕರ್ ನಾಯಕ್, ರಾಜಯ್ಯ ಇದ್ದರು.
ಹಾಲಿನ ದರ ಏರಿಕೆ ಹಣದ ಲೆಕ್ಕ ಬಹಿರಂಗಪಡಿಸಿ: ಸುವರ್ಣ ಶಂಕರ್
ಪ್ರತಿದಿನ ಕೆಎಂಎಫ್‌ಗೆ 1.28 ಕೋಟಿ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಪ್ರತಿ ಲೀಟರ್‌ಗೆ ₹4 ರಂತೆ ಲೆಕ್ಕ ಹಾಕಿದರೆ ವರ್ಷಕ್ಕೆ ₹1,869 ಕೋಟಿ ರು. ಆಗುತ್ತದೆ. ಈ ಹಣದ ಲೆಕ್ಕವನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರಭಕ್ತರ ಬಳಗದ ಮಹಿಳಾ ಘಟಕದ ಅಧ್ಯಕ್ಷೆ ಕೆಂಪಮ್ಮ ಮಾತನಾಡಿದರು.