ರಾಷ್ಟ್ರಕವಿ ಕುವೆಂಪು ಈ ನೆಲದ ಅಚ್ಚರಿ

KannadaprabhaNewsNetwork |  
Published : Jan 03, 2026, 01:45 AM IST
ಕನ್ನಡ ಸಾರಸ್ವತ ಲೋಕಕ್ಕೆ ವೈಚಾರಿಕತೆಯನ್ನೂ ಬಿತ್ತಿದ ಮಹಾಚೇತನ ಕುಮೆಪು ಅವರು ಈ ನೆಲದ ಆಚರಿಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಚ್. ಎಲ್. ಮಲ್ಲೇಶ್‌ಗೌಡ ಹೇಳಿದರು | Kannada Prabha

ಸಾರಾಂಶ

ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅಪಾರ, ಅವರು ಕಾವ್ಯದ ಹೊಸ ರೂಪಗಳನ್ನು ಪರಿಚಯಿಸಿದರು ಮತ್ತು ಕನ್ನಡ ಸಾಹಿತ್ಯಕ್ಕೆ ಆಧುನಿಕತೆಯನ್ನು ತಂದರು. ಅವರ ಕೃತಿಗಳು ಅವರ ನಂತರ ಬಂದ ಅನೇಕ ಕನ್ನಡ ಬರಹಗಾರರಿಗೆ ಸ್ಫೂರ್ತಿ ನೀಡಿತು ಮತ್ತು ಅವರನ್ನು ಕನ್ನಡ ಸಾಹಿತ್ಯದಲ್ಲಿ ಪ್ರವರ್ತಕ ಎಂದು ಪರಿಗಣಿಸಲಾಗಿದೆ. ಅವರ ಸಾಹಿತ್ಯ ಕಳೆದ ಐವತ್ತು ವರ್ಷಗಳಲ್ಲಿ ಹಲವು ನೆಲೆಗಳಲ್ಲಿ ಮತ್ತು ಹಲವು ಆಯಾಮಗಳಲ್ಲಿ ಕವಿ, ಕನ್ನಡ ನಾಡು, ನುಡಿ ಹಾಗೂ ಸಾಹಿತ್ಯ ಅನುಸಂಧಾನಕ್ಕೆ ಒಳಪಡುತ್ತಲಿವೆ ಎಂದರು.

ಕನ್ನಡ ಪ್ರಭವಾರ್ತೆ ಚನ್ನರಾಯಪಟ್ಟಣ

ಕನ್ನಡ ಸಾರಸ್ವತ ಲೋಕಕ್ಕೆ ವೈಚಾರಿಕತೆಯನ್ನೂ ಬಿತ್ತಿದ ಮಹಾಚೇತನ ಕುಮೆಪು ಅವರು ಈ ನೆಲದ ಆಚರಿಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಚ್. ಎಲ್. ಮಲ್ಲೇಶ್‌ ಗೌಡ ಹೇಳಿದರು. ಪಟ್ಟಣದ ವೈದ್ಯ ಸ್ಕೂಲ್ ಆಫ್ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕ ಹಾಗೂ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಕುವೆಂಪು ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅಪಾರ, ಅವರು ಕಾವ್ಯದ ಹೊಸ ರೂಪಗಳನ್ನು ಪರಿಚಯಿಸಿದರು ಮತ್ತು ಕನ್ನಡ ಸಾಹಿತ್ಯಕ್ಕೆ ಆಧುನಿಕತೆಯನ್ನು ತಂದರು. ಅವರ ಕೃತಿಗಳು ಅವರ ನಂತರ ಬಂದ ಅನೇಕ ಕನ್ನಡ ಬರಹಗಾರರಿಗೆ ಸ್ಫೂರ್ತಿ ನೀಡಿತು ಮತ್ತು ಅವರನ್ನು ಕನ್ನಡ ಸಾಹಿತ್ಯದಲ್ಲಿ ಪ್ರವರ್ತಕ ಎಂದು ಪರಿಗಣಿಸಲಾಗಿದೆ. ಅವರ ಸಾಹಿತ್ಯ ಕಳೆದ ಐವತ್ತು ವರ್ಷಗಳಲ್ಲಿ ಹಲವು ನೆಲೆಗಳಲ್ಲಿ ಮತ್ತು ಹಲವು ಆಯಾಮಗಳಲ್ಲಿ ಕವಿ, ಕನ್ನಡ ನಾಡು, ನುಡಿ ಹಾಗೂ ಸಾಹಿತ್ಯ ಅನುಸಂಧಾನಕ್ಕೆ ಒಳಪಡುತ್ತಲಿವೆ. ಅವರು ಕನ್ನಡ ಸಾಹಿತ್ಯದ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಅಪಾರ, ವಿಶ್ವಮಾನವ ಸಂದೇಶ ಸಾರಿದ ಕುವೆಂಪು ಅವರ ವಿಚಾರಪ್ರೇರಕ ಕೃತಿಗಳನ್ನು ಓದಿ, ಅರ್ಥೈಸಿಕೊಂಡು ಅದರಲ್ಲಿನ ಅಂಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಲ್ಲಿ ವಿದ್ಯಾರ್ಥಿಗಳು ಉತ್ತಮ ಬದುಕು ಕಟ್ಟಿಕೊಳ್ಳಬಹುದು. ಕುವೆಂಪು ಯುವಜನತೆಗೆಎಂದೆಂದಿಗೂ ಸ್ಫೂರ್ತಿದಾಯಕ ವ್ಯಕ್ತಿ ಯಾಗಿ ನಿಲ್ಲುತ್ತಾರೆ ಎಂದರು.ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ನವೋದಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಹನುಮಂತಪ್ಪ ಮಾತನಾಡಿ, ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದೆ. ರಾಷ್ಟ್ರಕವಿ ಕುವೆಂಪು ಅವರು ಎಲ್ಲಾ ಧರ್ಮಗಳು ಒಂದೇ, ಸಮಾಜದಲ್ಲಿ ಪ್ರತಿಯೊಬ್ಬರೂ ಸಾಮರಸ್ಯದಿಂದ ಜೀವನ ನಡೆಸಬೇಕು ಎಂಬ ಸಂದೇಶವನ್ನು ಸಾರಿದ ವಿಶ್ವ ಮಾನವ ಸಂದೇಶವನ್ನು ಪ್ರತಿಯೊಬ್ಬರೂ ವಿವಿಧತೆಯಲ್ಲಿ ಏಕತೆ ಹೊಂದಿರುವ ನಮ್ಮ ದೇಶದಲ್ಲಿ ಮನುಜ-ಮನುಜರಲ್ಲಿ ಭ್ರಾತೃತ್ವ ಮೂಡಬೇಕು ಎಂದು ತಿಳಿಸಿದರು.ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಡೇನಹಳ್ಳಿ ಲೋಕೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿ ಇಂದಿನ ಶಿಕ್ಷಣ ಪದ್ಧತಿಯಲ್ಲಿ ನೈತಿಕ ಶಿಕ್ಷಣದ ಕೊರತೆ ಎದ್ದು ಕಾಣುತ್ತಿದ್ದು, ಅದನ್ನು ನಿವಾರಿಸುವ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕಿದೆ. ಇಂದು ವೃತ್ತಿ ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಗುರುತಿಸಿ ಶಿಕ್ಷಣ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೇವಲ ಅಂಕಗಳಿಕೆಗೆ ಸೀಮಿತವಾಗಿ, ಮಾನವೀಯ ಮೌಲ್ಯಗಳನ್ನು ತೆರೆ ಮರೆಗೆ ಸಾಯುತ್ತಿದೆ. ನೈತಿಕ ಮೌಲ್ಯದ ಶಿಕ್ಷಣ ಇಂದಿನ ವಿದ್ಯಾರ್ಥಿಗಳಿಗೆ ಅತ್ಯವಶ್ಯವಾಗಿದ್ದು, ವಿದ್ಯಾರ್ಥಿಗಳು ಉತ್ತಮ ಮೇಕ್ಷೆ ಫಲಿತಾಂಶ ಪಡೆಯುವುದರೊಂದಿಗೆ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವೈದ್ಯ ನರ್ಸಿಂಗ್ ಶಾಲೆಯ ಪ್ರಾಂಶುಪಾಲ ಬಿ. ಎಲ್. ಅರುಣ್, ಕಸಾಪ ಜಿಲ್ಲಾ ಕಾರ್ಯದರ್ಶಿ ಬೊಮ್ಮೇಗೌಡ, ರಾಜ್ಯ ಮಾರ್ಗದರ್ಶಿ ಸದಸ್ಯರಾದ ಮುಳ್ಳುಪ್ಪದೆ ಪ್ರಕಾಶ್, ಕಾರ್ಯದರ್ಶಿ ಜಬೀವುಲ್ಲಾ ಬೇಗ್, ಮಾಧ್ಯಮ ಕಾರ್ಯದರ್ಶಿ ನಂದನ್‌ ಪುಟ್ಟಣ್ಣ, ತಾಲೂಕು ಕಾರ್ಯದರ್ಶಿ ಗೋವಿಂದರಾಜು, ಮಹಿಳಾ ಸದಸ್ಯರಾದ ಯಶೋಧ ಜೈನ್, ಸುಜಾತ, ಮಮತಾ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಓದಿನತ್ತ ಗಮನ ಹರಿಸದ್ದಿರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅಸಾಧ್ಯ
ಸಂಘಟನೆಗಳು ಸಮಾಜದ ಏಳಿಗೆಗೆ ದುಡಿಯಲಿ: ಶ್ರೀಗುರುದೇವ್ ಸ್ವಾಮೀಜಿ