ರಾಷ್ಟ್ರಕವಿ ಕುವೆಂಪು ವಿಶ್ವಮಾನವ ಸಂದೇಶ ಇಂದಿಗೂ ಪ್ರಸ್ತುತ: ಆರ್.ಸಿದ್ದರಾಜಯ್ಯ

KannadaprabhaNewsNetwork |  
Published : Dec 30, 2025, 01:30 AM IST
ಪೋಟೋ 6 : ಸೋಂಪುರ ಹೋಬಳಿಯ ಶಿವಗಂಗೆಯ ಶ್ರೀ ಶಿವಗಂಗಾ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಹಾಗೂ ವಿಶ್ವ ಮಾನವ ದಿನಾಚರಣೆಯಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಮುಖ್ಯಶಿಕ್ಷಕ ಆರ್.ಸಿದ್ದರಾಜಯ್ಯ ಹಾಗೂ ಶಿಕ್ಷಕರು ಪುಷ್ಪ ನಮನ ಸಲ್ಲಿಸಿದರು | Kannada Prabha

ಸಾರಾಂಶ

ಕನ್ನಡಕ್ಕೆ ಮೊಟ್ಟ ಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟ ಕುವೆಂಪು ಅವರು ರವೀಂದ್ರನಾಥ ಟ್ಯಾಗೂರ್ ರಂತೆ ರಾಷ್ಟ್ರಗೀತೆ ಮಾದರಿಯಲ್ಲಿ ನಾಡಗೀತೆ ಹಾಗೂ ರೈತಗೀತೆಯಂಥ ಸಾಕಷ್ಟು ಗೀತೆಗಳನ್ನು ನೀಡಿರುವುದು ನಮ್ಮೆಲ್ಲರ ಭಾಗ್ಯವಾಗಿದೆ. ಇಂಥ ಮಹಾನೀಯರ ಆದರ್ಶಗಳನ್ನು ಜೀವಂತವಾಗಿರಿಸುವ ಕೆಲಸವನ್ನು ಇಂದಿನ ಯುವಪೀಳಿಗೆ ಮಾಡಬೇಕು .

ದಾಬಸ್‍ಪೇಟೆ: ಜಗದ ಕವಿ, ಯುಗದ ಕವಿ ಎಂದೇ ಜನಮಾನಸದಲ್ಲಿ ಪ್ರಖ್ಯಾತಿಯಾದ ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶಗಳು ಇಂದಿಗೂ ಪ್ರಸ್ತುತ, ಅವುಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮುಖ್ಯಶಿಕ್ಷಕ ಆರ್.ಸಿದ್ದರಾಜಯ್ಯ ಸಲಹೆ ನೀಡಿದರು.

ಸೋಂಪುರ ಹೋಬಳಿಯ ಶಿವಗಂಗೆಯ ಶ್ರೀ ಶಿವಗಂಗಾ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಹಾಗೂ ವಿಶ್ವ ಮಾನವ ದಿನಾಚರಣೆಯಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಕನ್ನಡಕ್ಕೆ ಮೊಟ್ಟ ಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟ ಕುವೆಂಪು ಅವರು ರವೀಂದ್ರನಾಥ ಟ್ಯಾಗೂರ್ ರಂತೆ ರಾಷ್ಟ್ರಗೀತೆ ಮಾದರಿಯಲ್ಲಿ ನಾಡಗೀತೆ ಹಾಗೂ ರೈತಗೀತೆಯಂಥ ಸಾಕಷ್ಟು ಗೀತೆಗಳನ್ನು ನೀಡಿರುವುದು ನಮ್ಮೆಲ್ಲರ ಭಾಗ್ಯವಾಗಿದೆ. ಇಂಥ ಮಹಾನೀಯರ ಆದರ್ಶಗಳನ್ನು ಜೀವಂತವಾಗಿರಿಸುವ ಕೆಲಸವನ್ನು ಇಂದಿನ ಯುವಪೀಳಿಗೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ದೈಹಿಕ ಶಿಕ್ಷಕ ರುದ್ರಾರಾಧ್ಯ ಮಾತನಾಡಿ, ತಮ್ಮ ಅದ್ಭುತ ಸಾಹಿತ್ಯ ಮತ್ತು ಕವನಗಳ ಮೂಲಕ ಕುವೆಂಪು ಅವರು ಕನ್ನಡದ ಹಿರಿಮೆಯನ್ನು ಜಗತ್ತಿಗೆ ಪರಿಚಯಿಸಿದರು. ವಿದ್ಯಾರ್ಥಿಗಳು ಅವರ ಸಾಹಿತ್ಯ ಅಧ್ಯಯನ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಭೂಮಿ ಒತ್ತುವರಿಗೆ ಅವಕಾಶ ನೀಡಲ್ಲ: ಡಿಸಿಎಂ
ಏಕಾದಶಿ ಪ್ರಯುಕ್ತ ಶರವಣ ಟ್ರಸ್ಟ್‌ನಿಂದ ಲಕ್ಷ ಲಡ್ಡು ಹಂಚಿಕೆ