ಕನ್ನಡಪ್ರಭ ವಾರ್ತೆ ಮಡಿಕೇರಿ
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ.
ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಮತ್ತಿತರ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು.ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು: ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ಹಾಗೂ ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‌ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‌ಗಳು ಭೌತಿಕ ಹಾಗೂ ವೀಡಿಯೋ ಕಾನ್ಫೆರೆನ್ಸ್ ಮೂಲಕ ಗೌರವಾನ್ವಿತ ಉಚ್ಛ ನ್ಯಾಯಾಲಯ ಎಸ್‌ಒಪಿ ನಿಯಮಗಳಂತೆ ನಡೆಯುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-222373, ಟೋಲ್ ಫ್ರೀ ಸಂಖ್ಯೆ 180042590900 ನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.