ಸೆ.13 ರಂದು ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್

KannadaprabhaNewsNetwork |  
Published : Jul 31, 2025, 12:55 AM ISTUpdated : Jul 31, 2025, 01:03 AM IST
32 | Kannada Prabha

ಸಾರಾಂಶ

ಸೆ. 13ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸೆ.13 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು: ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ಮತ್ತು ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು.

ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.

ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‌ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‌ಗಳು ಭೌತಿಕ ಹಾಗೂ ವೀಡಿಯೋ ಕಾನ್ಫೆರೆನ್ಸ್ ಮೂಲಕ ಉಚ್ಛ ನ್ಯಾಯಾಲಯ ಎಸ್‌ಒಪಿ ನಿಯಮಗಳಂತೆ ನಡೆಯುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-222373, ಟೋಲ್ ಫ್ರೀ ಸಂಖ್ಯೆ 180042590900 ನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?