ಐಟಿ ಪಾರ್ಕ್‌ ನಿರ್ಮಾಣಕ್ಕೆ ಸರ್ವ ಪ್ರಯತ್ನ

KannadaprabhaNewsNetwork |  
Published : Mar 08, 2026, 03:00 AM IST
ಬೆಳಗಾವಿಯ ಎಸ್‌.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಆಯೋಜಿಸಿದ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ ಶಾಸಕ ಆಸೀಫ್‌ ಸೇಠ್‌ ಚಾಲನೆ ನೀಡಿದರು | Kannada Prabha

ಸಾರಾಂಶ

ಒಬ್ಬರು ಉದ್ಯೋಗ ಪಡೆಯುವುದರಿಂದ ಅವರ ಭವಿಷ್ಯ ಮಾತ್ರ ರೂಪವಾಗುವುದಿಲ್ಲ. ಬದಲಾಗಿ ಇಡೀ ಕುಟುಂಬಕ್ಕೆ ಅನುಕೂಲವಾಗುತ್ತದೆ. ಹೀಗಾಗಿ, ಉದ್ಯೋಗವೆಂಬುದು ಎಲ್ಲರಿಗೂ ಮುಖ್ಯವಾಗಿದೆ ಎಂದು ಶಾಸಕ ಆಸೀಫ್‌ ಸೇಠ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿಒಬ್ಬರು ಉದ್ಯೋಗ ಪಡೆಯುವುದರಿಂದ ಅವರ ಭವಿಷ್ಯ ಮಾತ್ರ ರೂಪವಾಗುವುದಿಲ್ಲ. ಬದಲಾಗಿ ಇಡೀ ಕುಟುಂಬಕ್ಕೆ ಅನುಕೂಲವಾಗುತ್ತದೆ. ಹೀಗಾಗಿ, ಉದ್ಯೋಗವೆಂಬುದು ಎಲ್ಲರಿಗೂ ಮುಖ್ಯವಾಗಿದೆ ಎಂದು ಶಾಸಕ ಆಸೀಫ್‌ ಸೇಠ್‌ ಹೇಳಿದರು.

ನಗರದ ಎಸ್.ಜಿ.ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಯುವಕ-ಯುವತಿಯರು ತಮ್ಮ ಶಿಕ್ಷಣದ ನಂತರ ಉದ್ಯೋಗಕ್ಕಾಗಿ ಅರ್ಜಿಗಳನ್ನು ಸಲ್ಲಿಸುತ್ತಾ, ಸಂದರ್ಶನಗಳನ್ನು ಎದುರಿಸುತ್ತಿದ್ದಾರೆ. ಬದುಕು ಎಂಬುದು ಒಂದು ದಿನದಲ್ಲಿ ಕೂಡ ಬದಲಾಗಬಹುದು. ಸಿಕ್ಕಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ಛಲ ನಮ್ಮಲ್ಲಿರಬೇಕು. ಹೀಗಾಗಿ, ತಮಗೆ ಕಲ್ಪಿಸಲಾಗಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಉದ್ಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

10 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳ ನೋಂದಣಿ:

ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಜಿಲ್ಲಾಮಟ್ಟದ ಉದ್ಯೋಗ ಮೇಳಕ್ಕೆ ಅತೀ ಕಡಿಮೆ ಸಮಯದಲ್ಲಿ ಆನ್‌ಲೈನ್‌ನಲ್ಲಿ 8000 ಹಾಗೂ ನೇರವಾಗಿ 2000ಕ್ಕೂ ಹೆಚ್ಚು ಅಭ್ಯರ್ಥಿಗಳು ಸೇರಿ ಒಟ್ಟು 10,152 ಅಭ್ಯರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಇಂದು 7500ಕ್ಕೂ ಹೆಚ್ಚು ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಿದ್ದಾರೆ. 104 ಕಂಪನಿಗಳು ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡು ಇಲ್ಲಿ ಭಾಗವಹಿಸಿವೆ. 19,000 ಅಭ್ಯರ್ಥಿಗಳ ಅಗತ್ಯತೆ ಇದೆ ಎಂದು ಕಂಪನಿಯ ಪ್ರತಿನಿಧಿಗಳು ತಿಳಿಸಿದ್ದಾರೆ. ಹೀಗಾಗಿ, ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಿಇಒ ತಿಳಿಸಿದರು.ಅಭ್ಯರ್ಥಿಗಳು ತಮ್ಮ ಜ್ಞಾನ ಹಾಗೂ ಕೌಶಲ್ಯವನ್ನು ಬಳಿಸಿ ಉದ್ಯೋಗಗಳನ್ನು ಪಡೆದುಕೊಳ್ಳಬೇಕು ಹಾಗೂ ಸೂಕ್ತ ರೀತಿಯಲ್ಲಿ ಕೆಲಸ ನಿರ್ವಹಿಸಿ ಇನ್ನೊಬ್ಬರಿಗೆ ಮಾದರಿಯಾಗಬೇಕು. ಜಿಲ್ಲೆಯ ಯುವಕ-ಯುವತಿಯರು ಆಸಕ್ತಿ ತೋರಿದರೆ ಮುಂದಿನ ವರ್ಷವೂ ಕೂಡ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗುವುದು. ಉದ್ಯೋಗಮೇಳಕ್ಕೆ ಎಸ್.ಜಿ.ಬಾಳೆಕುಂದ್ರಿ ಕಾಲೇಜಿನಲ್ಲಿ ಎಲ್ಲ ರೀತಿಯಿಂದಲೂ ಅನುಕೂಲ ಕಲ್ಪಿಸುವ ಮೂಲಕ ಸಂಸ್ಥೆಯ ಅಧ್ಯಕ್ಷ ಡಾ. ಅಲ್ಲಮಪ್ರಭು ಸ್ವಾಮೀಜಿ ಅವರು ಹಾಗೂ ಆಡಳಿತ ಮಂಡಳಿಯವರು ಉತ್ತಮ ಸಹಕಾರ ನೀಡಿದ್ದಾರೆ. ಇದರಿಂದ ನಾವು ಅಚ್ಚುಕಟ್ಟಾಗಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲು ಸಾಧ್ಯವಾಗಿದೆ ಎಂದು ಸ್ಮರಿಸಿದರು.

ಸಾನ್ನಿಧ್ಯ ವಹಿಸಿದ್ದ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ನಾಗನೂರ ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಮಾತನಾಡಿ, ಕಂಪನಿಗಳು ಹಾಗೂ ಅಭ್ಯರ್ಥಿಗಳು ಪರಸ್ಪರ ಸಹಕಾರದಿಂದ ಕೆಲಸ ಮಾಡಿದರೆ ಕಂಪನಿಗಳು ಹಾಗೂ ಅಭ್ಯರ್ಥಿಗಳು ಇಬ್ಬರು ಕೂಡ ಏಳ್ಗೆ ಹೊಂದಲು ಸಾಧ್ಯವಾಗುತ್ತದೆ. ಹೀಗಾಗಿ, ಉದ್ಯೋಗ ಮೇಳದಲ್ಲಿ ಕೆಲಸ ಪಡೆಯುವ ಅಭ್ಯರ್ಥಿಗಳು ಶೃದ್ಧೆಯಿಂದ ಕೆಲಸ ಮಾಡಬೇಕು. ಮುಂದೆ ತಾವು ಕೂಡ ಇತರರಿಗೆ ಕೆಲಸ ನೀಡುವಂತಾಗಬೇಕು ಎಂದು ಕಿವಿಮಾತು ಹೇಳಿದರು.ಸಮಾರಂಭದಲ್ಲಿ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಸಹಾಯಕ ಯೋಜನಾಧಿಕಾರಿ ಭಾಗ್ಯಶ್ರೀ ಜಹಾಗೀರದಾರ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಾಶ ದೇಶಪಾಂಡೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕ ಗುರುಪಾದಯ್ಯಾ ಹಿರೇಮಠ, ಎಸ್.ಜಿ.ಬಾಳೆಕುಂದ್ರಿ ತಾಂತ್ರಿಕ ಕಾಲೇಜಿನ ಪ್ರಾಚಾರ್ಯ ಡಾ.ಬಿ.ಆರ್.ಪಟಗುಂದಿ, ಬೆಳಗಾವಿ ತಾಪಂ ಇಒ ಯಶವಂತಕುಮಾರ, ಸರ್ಕಾರಿ ಐಟಿಐ ಕಾಲೇಜಿನ ನಿರ್ದೇಶಕ ಚಿದಾನಂದ ಬಾಕೆ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾವಿರಾರು ಯುವಕ-ಯುವತಿಯರು ಭಾಗವಹಿಸಿದ್ದರು.------ಕೋಟ್‌

ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಶಿಕ್ಷಣ ಪಡೆದಿರುವ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಬೆಳಗಾವಿ ನಗರದಲ್ಲಿ ಒಂದು ಐಟಿ ಪಾರ್ಕ್ ನಿರ್ಮಾಣವಾಗಲಿ ಎಂಬುದು ನಮ್ಮ ಉದ್ದೇಶವಾಗಿದೆ. ಇಲ್ಲಿ ಐಟಿ ಪಾರ್ಕ್ ನಿರ್ಮಾಣವಾದರೇ ಇಂಜಿನಿಯರಿಂಗ್ ಸೇರಿ ವಿವಿಧ ಶಿಕ್ಷಣ ಪೂರೈಸಿರುವ ಈ ಭಾಗದ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಇಲ್ಲಿಯೇ ಉದ್ಯೋಗಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಐಟಿ ಪಾರ್ಕ್ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು.ಆಸೀಫ್‌ ಸೇಠ್‌, ಬೆಳಗಾವಿ ಶಾಸಕ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಸಂಘಗಳ ಬಲವರ್ಧನೆಗೆ ವಿಮೆ ಅನಿವಾರ್ಯ
ಕವಿಚಕ್ರವರ್ತಿ ರನ್ನನ ಇತಿಹಾಸ ಉಳಿಸಿ, ಬೆಳೆಸಬೇಕಿದೆ: ಎ.ಎಂ. ಕಂಬಾರ