ಅದ್ಧೂರಿಯಾಗಿ ರಾಘವೇಂದ್ರ ಸ್ವಾಮಿಗಳ ರಥೋತ್ಸವ

KannadaprabhaNewsNetwork |  
Published : Aug 13, 2025, 12:30 AM IST
ಪೊಟೋ-ಲಕ್ಷ್ಮೇಶ್ವರದ ರಾಘವೇಂದ್ರ ಸ್ವಾಮಿಗಳ ಆರಾಧನೆಯ ರಥೋತ್ಸವ ಕಾರ್ಯಕ್ರಮವು ವಿಜೃಂಬಣೆಯಿಂದ ಜರುಗಿತು.  | Kannada Prabha

ಸಾರಾಂಶ

ಪಟ್ಟಣದ ರಾಘವೇಂದ್ರ ಸ್ವಾಮಿಗಳ ಆರಾಧನೆಯ ನಿಮಿತ್ತ ಮಂಗಳವಾರ ರಾಯರ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ನೂರಾರು ಭಕ್ತರ ವೇದಘೋಷದ ನಡುವೆ ವಾದ್ಯ ವೈಭವಗಳೊಂದಿಗೆ ಭಕ್ತಿ ಸಂಗೀತದಲ್ಲಿ ತಾಳಕ್ಕೆ ಹೆಜ್ಜೆ ಹಾಕುತ್ತಾ ರಥೋತ್ಸವ ಕಾರ್ಯಕ್ರಮವು ವೈಭವದಿಂದ ನೆರವೇರಿತು.

ಲಕ್ಷ್ಮೇಶ್ವರ: ಪಟ್ಟಣದ ರಾಘವೇಂದ್ರ ಸ್ವಾಮಿಗಳ ಆರಾಧನೆಯ ನಿಮಿತ್ತ ಮಂಗಳವಾರ ರಾಯರ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ನೂರಾರು ಭಕ್ತರ ವೇದಘೋಷದ ನಡುವೆ ವಾದ್ಯ ವೈಭವಗಳೊಂದಿಗೆ ಭಕ್ತಿ ಸಂಗೀತದಲ್ಲಿ ತಾಳಕ್ಕೆ ಹೆಜ್ಜೆ ಹಾಕುತ್ತಾ ರಥೋತ್ಸವ ಕಾರ್ಯಕ್ರಮವು ವೈಭವದಿಂದ ನೆರವೇರಿತು.

ಈ ವೇಳೆ ಶ್ರೀಮಠದ ಧರ್ಮದರ್ಶಿ ಹನುಮಂತಾಚಾರ್ಯ ಹೊಂಬಳ ಹಾಗೂ ಸಮಾಜದ ಹಿರಿಯ ಮುಖಂಡ ಕೃಷ್ಣ ಕುಲಕರ್ಣಿ ಅವರು ಮಾತನಾಡಿ, ನಂಬಿದ ಭಕ್ತರನ್ನು ರಾಯರು ಕೈಬಿಟ್ಟ ಉದಾಹರಣೆಗಳಿಲ್ಲ, ನೂರಾರು ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಪಟ್ಟಣದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಎಲ್ಲರ ಸಹಾಯ ಸಹಕಾರದಿಂದ ಆರಾಧನೆ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮ ಯಶಸ್ವಿಯಾಗಿ ನಡೆದು ಬರುತ್ತಿವೆ. ರಾಯರ ಸೇವೆ ಮಾಡಿದವರಿಗೆ ಇಷ್ಟಾರ್ಥ ಈಡೇರಿಸುವ ರಾಯರ ಕಾರ್ಯಕ್ರಮವನ್ನು ಎಲ್ಲ ಸಮಾಜ ಬಾಂಧವರು ಪಾಲ್ಗೊಂಡು ಯಶಸ್ವಿಗೊಳಿಸುವ ಸಂಪ್ರದಾಯ ನಮ್ಮ ಭಾಗದಲ್ಲಿ ಉತ್ತಮ ಪರಂಪರೆಯಾಗಿದೆ. ಆರಾಧನೆ ಕಾರ್ಯಕ್ರಮ ಯಶಸ್ವಿಯಾಗಿರುವುದಕ್ಕೆ ಎಲ್ಲರಿಗೂ ರಾಯರು ಆಶೀರ್ವದಿಸಲಿ ಎಂದರು.

ಈ ಸಂದರ್ಭದಲ್ಲಿ ಬ್ರಹ್ಮವೃಂದದ ಅಧ್ಯಕ್ಷ ಗೋಪಾಲ ಪಡ್ನಿಸ್, ವ್ಹಿ.ಎಲ್. ಪೂಜಾರ, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಚಂಬಣ್ಣ ಬಾಳಿಕಾಯಿ, ಮಹೇಶ ಹೊಗೆಸೊಪ್ಪಿನ, ಜಯಕ್ಕ ಕಳ್ಳಿ, ಶರಣು ಗೋಡಿ, ಸುನೀಲ ಮಹಾಂತಶೆಟ್ಟರ, ನಿಂಗಪ್ಪ ಬನ್ನಿ, ನೀಲಪ್ಪ ಕರ್ಜೆಕಣ್ಣವರ, ಮಂಜುನಾಥ ಮಾಗಡಿ, ಚಂಬಣ್ಣ ಬಾಳಿಕಾಯಿ, ಪೂರ್ಣಾಜಿ ಕರಾಟೆ, ನಾಗರಾಜ ಚಿಂಚಲಿ, ಶಂಕರ ಬೆಟಗೇರಿ, ಕೆ.ಎಸ್. ಕುಲಕರ್ಣಿ, ಎ.ಪಿ. ಕುಲಕರ್ಣಿ, ವೆಂಕಟೇಶ ಗುಡಿ, ಗುರುರಾಜ ಪಾಟೀಲಕುಲಕರ್ಣಿ, ವೇದವ್ಯಾಸ ಹೊಂಬಳ, ಅರವಿಂದ ದೇಶಪಾಂಡೆ, ಮನೋಜ ಹೊಂಬಳ, ಅನಿಲ ಕುಲಕರ್ಣಿ, ಬಾಬು ಅಳವಂಡಿ, ಶ್ರೀಪಾದರಾಜ ಹೊಂಬಳ, ಗುರುರಾಜ ಸುಳ್ಳದ, ಪ್ರಾಣೇಶ ಬೆಳ್ಳಟ್ಟಿ, ಶಿವು ಮಾನ್ವಿ, ರಾಮು ಪೂಜಾರ, ರಾಘವೇಂದ್ರ ಗೊಗ್ಗಿ, ವೆಂಕಟೇಶ ಕಳ್ಳಿಮನಿ, ಕೃಷ್ಣಕುಮಾರ ಕುಲಕರ್ಣಿ, ಬಿ.ಕೆ. ಕುಲಕರ್ಣಿ, ಶ್ರೀನಿವಾಸ ಹುಲಮನಿ, ಶ್ರೀಕಾಂತ ಪೂಜಾರ, ಡಾ. ಪ್ರಸನ್ನ ಕುಲಕರ್ಣಿ, ಸೋಮನಾಥ ಪೂಜಾರ, ಮಂಜುನಾಥ ಒಂಟಿ, ಗಂಗಾಧರ ಗೋಡಿ, ರಮೇಶ ತೊರಗಲ್, ದೃವ ಬೆಟಗೇರಿ, ಕಿರಣ ನವಲೆ, ರವೀಂದ್ರ ರಾಯಚೂರ, ಗಂಗಾಧರ ಹಳ್ಳಿಕೇರಿ, ರಾಘವೇಂದ್ರ ಮಿಸ್ಕಿನ್ ಸೇರಿದಂತೆ ನೂರಾರು ಮಹಿಳೆಯರು ಸಹ ಈ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

PREV

Recommended Stories

ಸೆಂಚುರಿ ಕ್ಲಬ್‌ ಸೇರಿಯೇ ಬಿಟ್ಟಿತು ಸು ಫ್ರಂ ಸೋ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ