ಪಡಿತರ ಚೀಟಿ ಕುಟುಂಬದ ಸದಸ್ಯರು ಇ-ಕೆವೈಸಿಗೆ ಸೂಚನೆ

KannadaprabhaNewsNetwork |  
Published : Aug 24, 2024, 01:24 AM IST
ಡಾ। ಸುಶೀಲಾ, ಜಿಲ್ಲಾಧಿಕಾರಿ, ಯಾದಗಿರಿ. | Kannada Prabha

ಸಾರಾಂಶ

Ration card family members notification to e-KYC

ಯಾದಗಿರಿ: ಪಡಿತರ ಚೀಟಿಯಲ್ಲಿನ ಕುಟುಂಬದ ಎಲ್ಲ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಅಥವಾ ಯಾವ ನ್ಯಾಯಬೆಲೆ ಅಂಗಡಿಯಿಂದ ಆಹಾರ ಧಾನ್ಯ ಪಡೆಯುತ್ತಿರುವ, ಅಂತಹ ನ್ಯಾಯಬೆಲೆ ಅಂಗಡಿಗಳಲ್ಲಿ ಈ ತಿಂಗಳ ಅಂತ್ಯದವರೆಗೆ ಇ-ಕೆವೈಸಿಯನ್ನು ಕಡ್ಡಾಯ ಮಾಡಿಸಲು ತಿಳಿಸಿದ್ದಾರೆ. ಇ-ಕೆವೈಸಿ ಮಾಡಿಸುವ ಸಮಯದಲ್ಲಿ ಎಸ್ಸಿ, ಎಸ್ಟಿ ಹಾಗೂ ಇತರೆ ಆಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಸಂಖ್ಯೆಯನ್ನು, ಅನಿಲ ಸಂಪರ್ಕ ಹೊಂದಿದ್ದಲ್ಲಿ ಗ್ರಾಹಕರ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಸಲ್ಲಿಸಲು ತಿಳಿಸಲಾಗಿದೆ. ಈ ಕಾರ್ಯ ಉಚಿತವಾಗಿದೆ, ಈ ಸಂಬಂಧ ನ್ಯಾಯಬೆಲೆ ಅಂಗಡಿಯಲ್ಲಿ ಹಣ ಕೇಳಿದ್ದಲ್ಲಿ ಮಾನ್ಯ ಆಯುಕ್ತರ ಕಚೇರಿಯ ಟೋಲ್ ಫ್ರೀ ದೂರವಾಣಿ ಸಂಖ್ಯೆ 1967ಗೆ ಉಪ ನಿರ್ದೇಶಕರ ಕಚೇರಿ, ಆಹಾರ ಇಲಾಖೆ, ಸಂಬಂಧಪಟ್ಟ ತಾಲೂಕು ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

-----

23ವೈಡಿಆರ್‌2 : ಡಾ. ಸುಶೀಲಾ, ಜಿಲ್ಲಾಧಿಕಾರಿ, ಯಾದಗಿರಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವೇಗೌಡರು ನಮ್ಮ ಪಕ್ಷದಲ್ಲಿದ್ದರು - ಹುಷಾರು ಅಶೋಕ್, ನೀನೇ ಸತ್ತು ಹೋಗ್ತೀಯ : ಸಿಎಂ
ವಸುಂಧರಾ ಭೂಪತಿ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ