ಧಾರವಾಡ:
ಜಿಲ್ಲಾ ಪಂಚಾಯಿತಿಯಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನೆ ನಡೆಸಿದ ಅವರು, ಬಡವರಿಗಾಗಿ ವಿತರಣೆ ಆಗುವ ಅಕ್ಕಿಯನ್ನು ಗ್ರಾಮಗಳಿಗೆ ತೆರಳಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಖರೀದಿ ಮಾಡಲಾಗುತ್ತಿದೆ ಎಂಬ ಮಾಹಿತಿ ಇದೆ. ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಫಲಾನುಭವಿಗಳ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗುವುದು ಎಂದರು.
ಬಡವರಿಗಾಗಿ ಸರ್ಕಾರ ನೀಡುವ ಅನ್ನಭಾಗ್ಯ ಅಕ್ಕಿಯನ್ನು ದುರುಪಯೋಗಪಡಿಸಿಕೊಳ್ಳದೆ, ಅರ್ಹ ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಸರ್ಕಾರದ ನಿಯಮಾನುಸಾರ ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಅಗತ್ಯ ಮಾಹಿತಿಯುಳ್ಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ನಡೆಸಬೇಕು ಎಂದರು.ಜಿಪಂ ಸಿಇಒ ಭುವನೇಶ ಪಾಟೀಲ್ ಮಾತನಾಡಿ, ಯುವನಿಧಿ ಯೋಜನೆಯಡಿ ನೋಂದಾಯಿಸಿರುವ ನಿರುದ್ಯೋಗಿ ಯುವಕರಿಗೆ ಮೂರು ತಿಂಗಳ ತರಬೇತಿ ನೀಡಲು ಅಗತ್ಯ ವೇಳಾಪಟ್ಟಿ ಸಿದ್ಧಪಡಿಸಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಯುವನಿಧಿ ಯೋಜನೆಯಡಿ ಈ ವರೆಗೆ 14,155 ಅರ್ಜಿಗಳು ಸ್ವೀಕೃತವಾಗಿದ್ದು, ಡಿಬಿಟಿ ಮೂಲಕ 12,340 ಫಲಾನುಭವಿಗಳಿಗೆ ₹ 38.33 ಲಕ್ಷ ಸಹಾಯಧನ ಜಮೆ ಆಗಿದೆ. ಶಕ್ತಿ ಯೋಜನೆಯಲ್ಲಿ 46,33,26,824 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ ₹ 10.25 ಕೋಟಿ ಬಿಡುಗಡೆಯಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಪ್ರಾಧಿಕಾರದ ಉಪಾಧ್ಯಕ್ಷರಾದ ಸುಧೀರ ಬೋಳಾರ, ಮುರಗಯ್ಯಾ ವಿರಕ್ತಮಠ, ರತ್ನಾ ತೇಗೂರಮಠ, ರೇಹನ್ ರಝಾ ಐನಾಪೂರಿ, ಬಸಪ್ಪ ಮಹಾಬಲೇಶ್ವರ ಬಾವಕಾರ, ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಇದ್ದರು.