7 ಸಾವಿರ ಜನರ ಪಡಿತರ ಚೀಟಿ ರದ್ದು, 24 ಸಾವಿರ ಗೃಹಲಕ್ಷ್ಮಿ ಕಟ್‌: ಪರಮೇಶ್ವರ ನಾಯಕ್‌

KannadaprabhaNewsNetwork |  
Published : Nov 05, 2026, 01:30 AM IST
ಚಿತ್ರ 4ಬಿಡಿಆರ್8ಬೀದರ್‌ ಜಿಪಂ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ವರದಿ ಸಭೆಯ ಅಧ್ಯಕ್ಷತೆ ವಹಿಸಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಟಿ ಪರಮೇಶ್ವರ ನಾಯಕ ಮಾತನಾಡಿದರು. | Kannada Prabha

ಸಾರಾಂಶ

ಬೀದರ್‌ ಜಿಲ್ಲೆಯಲ್ಲಿ ಒಟ್ಟು 18 ಲಕ್ಷ ಜನಸಂಖ್ಯೆ ಇದ್ದು ಅದರಲ್ಲಿ ಗ್ಯಾರಂಟಿ ಯೋಜನೆಯಡಿ ಸುಮಾರು 13 ಲಕ್ಷದಷ್ಟು ಫಲಾನುಭವಿಗಳಿದ್ದಾರೆ ಎಂದು ಪರಮೇಶ್ವರ ನಾಯಕ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಬೀದರ್‌

ಜಿಲ್ಲೆಯಲ್ಲಿ ಕಳೆದ 6 ತಿಂಗಳಲ್ಲಿ ಸುಮಾರು 7 ಸಾವಿರ ಮರಣ ಹೊಂದಿದವರನ್ನು ಪತ್ತೆಹಚ್ಚಿ ಅವರ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ, ಮಾಜಿ ಸಚಿವ ಪಿ.ಟಿ ಪರಮೇಶ್ವರ ನಾಯಕ್‌ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದ ಬುಧವಾರ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ವರದಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೀದರ್‌ ಜಿಲ್ಲೆಯಲ್ಲಿ ಒಟ್ಟು 18 ಲಕ್ಷ ಜನಸಂಖ್ಯೆ ಇದ್ದು ಅದರಲ್ಲಿ ಗ್ಯಾರಂಟಿ ಯೋಜನೆಯಡಿ ಸುಮಾರು 13 ಲಕ್ಷದಷ್ಟು ಫಲನಾನುಭವಿಗಳಿದ್ದಾರೆ. ವೈದ್ಯಕೀಯ ಹಿನ್ನೆಲೆ ಹೊಂದಿದ ಸುಮಾರು 100 ಜನರನ್ನು ಗುರುತಿಸಿ ಪಡಿತರ ಚೀಟಿಗಳನ್ನು ನೀಡಲಾಗಿದೆ. ಹೆಬ್ಬಟ್ಟು ಗುರುತು ನೀಡಿದ ಫಲಾನುಭವಿಗಳಿಗೆ ಕಡ್ಡಾಯವಾಗಿ ಪಡಿತರ ವಿತರಿಸಬೇಕು ಕುಟುಂಬಗಳು ವಂಚಿತರಾಗದಂತೆ ಎಚ್ಚರ ವಹಿಸಬೇಕೆಂದರು.

ಗೃಹಲಕ್ಷ್ಮೀ ಯೋಜನೆಯಡಿ ಪರಿಷ್ಕರಣೆಯಲ್ಲಿ 24 ಸಾವಿರ ಫಲಾನುಭವಿಗಳು ಕಟ್‌:

ಜಿಲ್ಲೆಯಲ್ಲಿ ಒಟ್ಟು ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ನೋಂದಣಿಯಾದ 3,64,287 ಫನಾನುಭವಿಗಳ ಪೈಕಿ ಪರಿಷ್ಕರಣೆಗೊಂಡ ನಂತರ ಉಳಿದ 3,40,756 ಫಲಾನುಭವಿಗಳ ಖಾತೆಗೆ ಜುಲೈ ವರೆಗೆ ಒಟ್ಟು 2,111 ಕೋಟಿ 73 ಲಕ್ಷ ರುಪಾಯಿಗಳನ್ನು ಜಮೆ ಮಾಡಲಾಗಿದೆ. ಉಳಿದ ಕಂತಿನ ಹಣವನ್ನು ಹಂತ ಹಂತವಾಗಿ ಖಾತೆಗೆ ಜಮೆ ಮಾಡಲಾಗುವುದು. ತೆರಿಗೆ ಪಾವತಿಸುವ ಹಾಗೂ ಹೊರ ಜಿಲ್ಲೆಯಿಂದ ನೆಲೆಸಿದವರನ್ನು ಗುರುತಿಸಿ ಈ ಯೋಜನೆಯಿಂದ ಹೊರಗಿಡುವಂತಾಗಬೇಕು ಎಂದು ತಿಳಿಸಿದರು.

ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ 19.59 ಲಕ್ಷದಷ್ಟು ಮಹಿಳೆಯರು ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ. ಬಸ್‌ ನಿಲ್ಧಾಣಗಳಲ್ಲಿ ಮಹಿಳೆಯರಿಗಾಗಿ ವಿಶೇಷ ಹಾಲುಣಿಸುವ ಕೋಣೆ, ಕುಡಿಯುವ ಶುದ್ಧ ನೀರು, ಶೌಚಾಲಯ ಸ್ವಚ್ಚತೆಗೆ ಹೆಚ್ಚು ಒತ್ತು ನೀಡಬೇಕು. ಕಾಲೇಜು ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ಹೆಚ್ಚು ಆಸಕ್ತಿ ವಹಿಸದಿರುವುದು ಕಂಡು ಬಂದಿದೆ. ಅಧಿಕಾರಿಗಳು ಖಾಸಗಿ ಹಾಗೂ ಸರ್ಕಾರಿ ಕಾಲೇಜುಗಳಿಗೆ ಭೇಟಿ ನೀಡಿ ಈ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳುವಂತೆ ಯುವಕರಲ್ಲಿ ಪ್ರೇರೇಪಿಸಬೇಕು.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಅಮೃತರಾವ್‌ ಚಿಮಕೋಡೆ, ಜಿಪಂ ಸಿಇಒ ಗಿತ್ತೆ ಮಾಧವ ವಿಠಲರಾವ್‌ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ಟಿಂಗ್ ಪ್ರಕರಣದಲ್ಲಿ ಎಚ್ಡಿಕೆ ತನಿಖೆಗೆ ಸಹಕರಿಸಲಿ
ಕಿತ್ತೂರು ತಾಲೂಕಿನ 4ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರೊ.ಜಿ.ಸಿ.ಕೋಟಗಿ ಸರ್ವಾಧ್ಯಕ್ಷ