
ಕನ್ನಡಪ್ರಭ ವಾರ್ತೆ ಮಸ್ಕಿ
ಪಟ್ಟಣದ ತಾಪಂ ಸಭಾಂಗಣದಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಮೃತ ಫಲಾನುಭವಿಗಳ ಖಾತೆಗೆ ಜಮೆಯಾಗಿರುವ ಹಣದ ಸಂಪೂರ್ಣ ವಿವರ ಸಂಗ್ರಹಿಸಿ, ಸರ್ಕಾರಕ್ಕೆ ಹಣ ಹಿಂದಿರುಗಿಸುವ ಪ್ರಕ್ರಿಯೆ ಕೈಗೊಳ್ಳ ಬೇಕು ಎಂದರು.
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬ್ಯಾಂಕ್ಗಳು ಯಾವುದೇ ಕಾರಣಕ್ಕೂ ಸಾಲದ ಬಾಕಿಗೆ ಕಡಿತಗೊಳಿಸಬಾರದು. ಒಂದು ವೇಳೆ ಫಲಾನುಭವಿಗಳ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಂಡರೆ ತಕ್ಷಣ ತಮ್ಮ ಗಮನಕ್ಕೆ ತರಬೇಕು. ಅಂತಹ ಬ್ಯಾಂಕ್ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೇಲಧಿಕಾರಿಗಳಿಗೆ ತಿಳಿಸಲಾ ಗುವುದು ಎಂದು ಎಚ್ಚರಿಸಿದರು.ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಕೆಲವರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಕುರಿತು ದೂರುಗಳು ಬಂದಿವೆ. ಅಧಿಕಾರಿಗಳು ಕೂಡಲೇ ಪರಿಶೀಲನೆ ನಡೆಸಿ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಬೇಕು. ಪಡಿತರ ಧಾನ್ಯಗಳನ್ನು ಪಡೆದು ಬೇರೆಯವರಿಗೆ ಮಾರಾಟ ಮಾಡಿರುವುದು ದೃಢಪಟ್ಟರೆ ಅಂತಹವರ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗುವುದು ಎಂದರು.
ಸಭೆಯಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ರೆಡ್ಡಿ, ಸಿಡಿಪಿಒ ನಾಗರತ್ನ, ಆಹಾರ ಇಲಾಖೆ ಹಾಗೂ ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.