ತೆಲುಗು ನಟಿ ಸೇರಿ 100ಕ್ಕೂ ಹೆಚ್ಚು ಜನರಿಂದ ರೇವ್‌ ಪಾರ್ಟಿ

KannadaprabhaNewsNetwork |  
Published : May 21, 2024, 12:42 AM ISTUpdated : May 21, 2024, 07:28 AM IST
35 boy and girl caught in objectionable condition playing at rave party in Pushkar Resort

ಸಾರಾಂಶ

ಎಲೆಕ್ಟ್ರಾನಿಕ್‌ ಸಿಟಿ ಬಳಿಯ ಜಿ.ಆರ್‌.ಫಾರ್ಮ್‌ ಹೌಸ್‌ನಲ್ಲಿ ಮಾದಕವಸ್ತು ಬಳಸಿಕೊಂಡು ರೇವ್‌ ಪಾರ್ಟಿ ನಡೆಸುತ್ತಿದ್ದಾಗ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿರುವುದು.

 ಬೆಂಗಳೂರು : ನಗರದ ಹೊರವಲಯ ಎಲೆಕ್ಟ್ರಾನಿಕ್‌ ಸಿಟಿಯ ಫಾರ್ಮ್‌ ಹೌಸ್‌ವೊಂದರಲ್ಲಿ ‘ಸನ್‌ ಸೆಟ್‌ ಟು ಸನ್‌ ರೈಸ್‌ ವಿಕ್ಟರಿ’ ಹೆಸರಿನಲ್ಲಿ ನಡೆಯುತ್ತಿದ್ದ ರೇವ್‌ ಪಾರ್ಟಿ ಮೇಲೆ ಸಿಸಿಬಿ ಮಾದಕವಸ್ತು ನಿಗ್ರಹ ದಳದ ಅಧಿಕಾರಿಗಳು ಸೋಮವಾರ ಮುಂಜಾನೆ ದಾಳಿ ಮಾಡಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.ಪಾರ್ಟಿ ಆಯೋಜಕ ಹೈದರಾಬಾದ್‌ ಮೂಲದ ವಾಸು, ಸ್ನೇಹಿತರಾದ ಅರುಣ್‌, ಸಿದ್ಧಿಕಿ, ರಣಧೀರ್‌, ಬಾಬು ಬಂಧಿತರು. 

ಆರೋಪಿಗಳಿಂದ ಎಂಡಿಎಂಎ, ಕೊಕೇನ್‌, ಹೈಡ್ರೋ ಗಾಂಜಾ ಜಪ್ತಿ ಮಾಡಿದ್ದಾರೆ.ಎಲೆಕ್ಟ್ರಾನಿಕ್‌ ಸಿಟಿ ಬಳಿಯ ಜಿ.ಆರ್‌.ಫಾರ್ಮ್‌ ಹೌಸ್‌ನಲ್ಲಿ ಮಾದಕವಸ್ತು ಬಳಸಿಕೊಂಡು ರೇವ್‌ ಪಾರ್ಟಿ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಅಧಿಕಾರಿಗಳು ಸ್ಥಳೀಯ ಪೊಲೀಸರೊಂದಿಗೆ ಮುಂಜಾನೆ ಸುಮಾರು 3.30ರ ಸುಮಾರಿಗೆ ಫಾರ್ಮ್‌ ಹೌಸ್‌ ಮೇಲೆ ದಾಳಿ ಮಾಡಿದ್ದಾರೆ.

ಈ ವೇಳೆ ಪಾರ್ಟಿಯಲ್ಲಿ ಸುಮಾರು 70 ಪುರುಷರು ಹಾಗೂ 30 ಮಹಿಳೆಯರು ಸೇರಿದಂತೆ ನೂರಕ್ಕೂ ಅಧಿಕ ಮಂದಿ ಭಾಗಿಯಾಗಿರುವುದು ಕಂಡು ಬಂದಿದೆ. ಈ ಪೈಕಿ ಆಂಧ್ರಪ್ರದೇಶ ಮೂಲದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ತೆಲುಗು ಚಿತ್ರರಂಗದ ಖ್ಯಾತ ಪೋಷಕ ನಟಿ ಹೇಮಾ ಸೇರಿದಂತೆ ಸಹ ನಟ-ನಟಿಯರು, ರೂಪದರ್ಶಿಗಳು, ಉದ್ಯಮಿಗಳು, ರಾಜಕಾರಣಿಗಳು, ಸಾಫ್ಟ್‌ವೇರ್‌ ಎಂಜಿನಿಯರ್‌ಗಳು ಭಾಗವಹಿಸಿದ್ದರು ಎನ್ನಲಾಗಿದೆ.ವೈದ್ಯರನ್ನು ಪಾರ್ಟಿ ಸ್ಥಳಕ್ಕೆ ಕರೆಸಿಕೊಂಡು ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಪ್ರತಿಯೊಬ್ಬರ ರಕ್ತದ ಮಾದರಿ ಸಂಗ್ರಹಿಸುತ್ತಿದ್ದಾರೆ. ಅಂತೆಯೇ ಸೀನ್‌ ಆಫ್‌ ಕ್ರೈಂ ಅಧಿಕಾರಿಗಳನ್ನು ಕರೆಸಿ ಪಾರ್ಟಿಯ ಸ್ಥಳದಲ್ಲಿ ಸಿಕ್ಕ ವಸ್ತುಗಳ ಮಾದರಿಗಳನ್ನು ಸಂಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ